Chhota Rajan: ಹ*ತ್ಯೆ ಕೇಸ್-ಭೂಗತ ಪಾತಕಿ ಛೋಟಾ ರಾಜನ್ ಗೆ ಬೇಲ್; ಆದ್ರೂ ಬಿಡುಗಡೆ ಇಲ್ಲ!
ಛೋಟಾ ರಾಜನ್ ಗ್ಯಾಂಗ್ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು...
Team Udayavani, Oct 23, 2024, 3:01 PM IST
ಮುಂಬೈ: 2001ರಲ್ಲಿ ನಡೆದ ಮುಂಬೈ ಹೋಟೆಲ್ ಮಾಲೀಕರ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಜಗತ್ತಿನ ಪಾತಕಿ, ಗ್ಯಾಂಗ್ ಸ್ಟರ್ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ (Bombay Highcourt) ಬುಧವಾರ (ಅ.23) ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ಪೀಠದ ಜಸ್ಟೀಸ್ ರೇವತಿ ಮೋಹಿತೆ ದೇರೆ ಮತ್ತು ಜಸ್ಟೀಸ್ ಪ್ರಥ್ವಿರಾಜ್ ಚವಾಣ್, ಗ್ಯಾಂಗ್ ಸ್ಟರ್ ಛೋಟಾ ರಾಜನ್ ಜಾಮೀನಿಗಾಗಿ ಒಂದು ಲಕ್ಷ ರೂ. ಬಾಂಡ್ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಹೋಟೆಲ್ ಮಾಲೀಕರ ಕೊ*ಲೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದರೂ ಕೂಡಾ ಛೋಟಾ ರಾಜನ್ ಜೈಲುವಾಸ ಮುಂದುವರಿಯಲಿದೆ. ಅದಕ್ಕೆ ಕಾರಣ 2011ರ ಪತ್ರಕರ್ತ ಜ್ಯೋರ್ತಿಮಯಿ ಡೇ ಕೊ*ಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಒಳಗಾಗಿದ್ದು, ಇನ್ನಿತರ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ.
ಮುಂಬೈಯಲ್ಲಿನ ಗೋಲ್ಡನ್ ಕ್ರೌನ್ ಹೋಟೆಲ್ ಮಾಲೀಕ ಜಯ ಶೆಟ್ಟಿ ಅವರ ಕೊ*ಲೆ ಪ್ರಕರಣದಲ್ಲಿ ಛೋಟಾ ರಾಜನ್ ನನ್ನು ವಿಶೇಷ ಕೋರ್ಟ್ ದೋಷಿ ಎಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು.
2001ರ ಮೇ 4ರಂದು ಛೋಟಾ ರಾಜನ್ ಬಣದ ಇಬ್ಬರು ಶಾರ್ಪ್ ಶೂಟರ್ಸ್ ಗಳು ಮೇಲಿನ ಫ್ಲೋರ್ ನಲ್ಲಿದ್ದ ಜಯ ಶೆಟ್ಟಿ ಅವರ ಮೇಲೆ ಗುಂಡಿನ ದಾಳಿ ನಡೆಸಿತ್ತು. ವಿಚಾರಣೆಯಲ್ಲಿ ಛೋಟಾ ರಾಜನ್ ಗ್ಯಾಂಗ್ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು. ಹಣ ಕೊಡದೇ ಇದ್ದ ಕಾರಣಕ್ಕೆ ಜಯ್ ಶೆಟ್ಟಿಯನ್ನು ಹ*ತ್ಯೆಗೈದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.