ಕೃಷಿ ಉತ್ಪನ್ನ ಸಾಗಣೆ, ಖರೀದಿ ಸಮಸ್ಯೆ ನಿವಾರಣೆ : ಸಿಎಂ ಮಹತ್ವದ ಸಭೆ
ಎ.14 ರ ವರೆಗೆ ಬಡವರಿಗೆ ಉಚಿತ ನಂದಿನಿ ಹಾಲು ವಿತರಣೆ
Team Udayavani, Apr 2, 2020, 8:20 AM IST
ಮುಖ್ಯಮಂತ್ರಿ ಪರಿಹಾರ ನಿಧಿಗೆ ಯಡಿಯೂರಪ್ಪ ತಮ್ಮ ವರ್ಷದ ವೇತನ ಮೊತ್ತವಾದ 24.10 ಲ. ರೂ.ಗಳ ಚೆಕ್ ಅನ್ನು ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್‌ಗೆ ಹಸ್ತಾಂತರಿಸಿದರು.
ಬೆಂಗಳೂರು: ರೈತರು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು ತೊಂದರೆಯಾಗದಂತೆ ಕ್ರಮ ಕೈಗೊಳ್ಳ ಲಾಗುವುದು ಎಂದು ಅಭಯ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಪ್‌ಕಾಮ್ಸ್ ಮೂಲಕವೂ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.
ಜತೆಗೆ ಗುರುವಾರದಿಂದ ಬಡವರಿಗೆ ಉಚಿತವಾಗಿ ಕೆಎಂಎಫ್ ಹಾಲು ನೀಡಲಾಗುವುದು. 7 ಲಕ್ಷ ಲೀಟರ್ ಹಾಲನ್ನು ಸರಕಾರವೇ ಖರೀದಿಸಿ ಕೊಳಚೆ ಪ್ರದೇಶಗಳು ಮತ್ತು ಬಡಜನರು ವಾಸಿಸುವ ಪ್ರದೇಶಗಳಲ್ಲಿ ಉಚಿತವಾಗಿ ಎ.14ರವರೆಗೆ ಹಾಲು ವಿತರಿಸಲಾಗುವುದು ಎಂದರು.
ಕೃಷಿ, ತೋಟಗಾರಿಕೆ, ಕಂದಾಯ, ಸಹಕಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರ ಜತೆ ಬುಧವಾರ ಮಹತ್ವದ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತರ ಬೆಳೆ ಖರೀದಿಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ರೈತರು ಮತ್ತು ಗ್ರಾಹಕರ ಹಿತ ಕಾಪಾಡಲಾಗುವುದು ಎಂದರು.
ಹಾಪ್ ಕಾಮ್ಸ್ ನಲ್ಲಿ ಟೊಮೊಟೊ, ದ್ರಾಕ್ಷಿ, ಕಲ್ಲಂಗಡಿ ಹಾಗೂ ಕೋಳಿ ಮೊಟ್ಟೆ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ರೈಲುಗಳ ಮೂಲಕ ಹೊರ ರಾಜ್ಯಗಳಿಗೆ ಹಣ್ಣು ಹಂಪಲು ತರಕಾರಿ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು.
ಅಡುಗೆ ಎಣ್ಣೆ ಸಹಿತ ಅಗತ್ಯ ವಸ್ತುಗಳ ಕೊರತೆಯಿಲ್ಲ. ಜನ ಆತಂಕಪಡುವ ಅಗತ್ಯವಿಲ್ಲ. ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅಕ್ಕಿ ಗಿರಣಿ ಆರಂಭಿಸಲು ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಿಲ್ಡರುಗಳೇ ಊಟ, ವಸತಿ ವ್ಯವಸ್ಥೆ ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ವಿಧವಾ ವೇತನ, ವೃದ್ಧಾಪ್ಯ ವೇತನವನ್ನು 2 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 5 ಲ.ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಬೆಳೆ ನಾಶ ಮಾಡಬೇಡಿ: ಕೃಷಿ ಸಚಿವ ಬಿ.ಸಿ.ಪಾಟೀಲ್
ರೈತರು ಅಪಪ್ರಚಾರ ನಂಬಿ ಬೆಳೆಗಳನ್ನು ರಸ್ತೆಗೆ ಚೆಲ್ಲುವುದಾಗಲಿ, ನಾಶ ಮಾಡುವುದಾಗಲಿ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ. ರೈತರು ಇಲಾಖೆಯ ಸೂಚನೆ ಪಾಲಿಸಿಬೇಕು.
ರಾಯಚೂರು ಸೇರಿ ಇನ್ನಿತರ ಭಾಗಗಳಲ್ಲಿ ತತ್‌ಕ್ಷಣವೇ ಬೆಳೆ ಸಮೀಕ್ಷೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ರೈತರಿಗೆ ಬೇಕಾದ ಬೀಜ, ಗೊಬ್ಬರ, ಔಷಧ ಮಾರಾಟಕ್ಕೆ ಮುಕ್ತ ಅವ ಕಾಶ ನೀಡಲಾಗಿದೆ. ಮುಂಗಾರು ಬಿತ್ತನೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.