Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
ರಾಜ್ಯ ಮಕ್ಕಳ ಹಕ್ಕು ರಕ್ಷಣ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಸೂಚನೆ
Team Udayavani, Sep 19, 2024, 2:10 AM IST
ಮಣಿಪಾಲ: ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಇಲಾಖೆಗಳು ಸಮನ್ವಯತೆ ಹೊಂದುವುದರ ಜತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮಗೊಳಿಸಲು ಅಧಿಕಾರಿಗಳು ಕ್ರಿಯಾಶೀಲರಾಗಬೇಕು ಎಂದು ರಾಜ್ಯ ಮಕ್ಕಳ ಹಕ್ಕು ರಕ್ಷಣ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರಗಿದ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯ ಅಂಗನವಾಡಿ, ಶಾಲೆ ಹಾಗೂ ವಸತಿ ನಿಲಯಗಳ ಆವರಣದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಟ್ರಾನ್ಸ್‌ಫಾರ್ಮರ್, ವಿದ್ಯುತ್ ತಂತಿಗಳು ಹಾದು ಹೋಗಿದ್ದಲ್ಲಿ ಅವುಗಳನ್ನು ಕೂಡಲೇ ಬದಲಾಯಿಸಬೇಕು. ಮಕ್ಕಳ ಸುರಕ್ಷೆ ದೃಷ್ಟಿಯಿಂದ ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿರುವ ವಾಹನ ಚಾಲಕರ ವರದಿಯನ್ನು ನೀಡುವಂತೆ ಸೂಚಿಸಿದರು.
ಜಿಲ್ಲೆಯ ಎಲ್ಲ ಶಾಲೆಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳ ರಕ್ಷಣ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು. ಅಪ್ರಾಪ್ತ ವಯಸ್ಕ ಬಾಲಕಿಯರು ಗರ್ಭಿಣಿ ಯಾಗುತ್ತಿರುವುದೂ ವರದಿಯಾ ಗುತ್ತಿವೆ. ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿಯಾಗಿ ಈ ಸಮಸ್ಯೆಯನ್ನು ತೊಲಗಿಸಲು ಪ್ರಯತ್ನಿಸಬೇಕು ಎಂದರು.
ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಆದಷ್ಟು ಶೀಘ್ರವಾಗಿ ಮಾಡಬೇಕು. ಪೌರಕಾರ್ಮಿಕರ ಮಕ್ಕಳ ಸ್ಥಿತಿಗತಿಗಳ ವರದಿಯನ್ನು ನೀಡುವಂತೆ ಹಾಗೂ ಪೌರಕಾರ್ಮಿಕರ ಮಕ್ಕಳಿಗೆ ಬಾಲಕಾರ್ಮಿಕ, ಪೋಕೊÕ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಅಂಗವಿಕಲರ ಗ್ರಾಮಸಭೆಯನ್ನು ನಿರಂತರವಾಗಿ ಆಯೋಜಿಸಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯವಿರುವ ಶೇ. 5ರ ಅನುದಾನವನ್ನು ವಿಕಲಚೇತನರಿಗೆ ಅಗತ್ಯ ಸಲಕರಣೆಯನ್ನು ಪೂರೈಸಲು ಬಳಸಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಡಾ| ಕೆ ವಿದ್ಯಾಕುಮಾರಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಪುರುಷೋತ್ತಮ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಮಕ್ಕಳ ರಕ್ಷಣ ಘಟಕದ ಮಕ್ಕಳ ರಕ್ಷಣಾಧಿಕಾರಿ ನಾಗರತ್ನಾ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಐ.ಪಿ.ಗಡಾದ್, ಡಿಡಿಪಿಐ ಗಣಪತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡೂÉರು, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.