ಚಿಂಚೋಳಿ: ಜಾಧವ್ ಪುತ್ರನಿಗೆ ಟಿಕೆಟ್?
ದಿಢೀರ್ ಬೆಳವಣಿಗೆಯಲ್ಲಿ ಹೆಸರು ಬದಲು
Team Udayavani, Apr 27, 2019, 8:43 AM IST
ಬೆಂಗಳೂರು: ಚಿಂಚೋಳಿ ವಿಧಾನ ಸಭೆ ಉಪಚುನಾವಣೆಗೆ ಬಿಜೆಪಿಯಿಂದ ಡಾ| ಉಮೇಶ್ ಜಾಧವ್ ಸಹೋದರ ರಾಮ ಚಂದ್ರ ಜಾಧವ್ ಹೆಸರು ಗುರುವಾರ ಶಿಫಾ ರಸು ಗೊಂಡ 24 ಗಂಟೆಗಳಲ್ಲಿ ಅಚ್ಚರಿಯ ಬೆಳವಣಿಗೆ ಯಲ್ಲಿ ಉಮೇಶ್ ಜಾಧವ್ ಪುತ್ರ ಡಾ| ಅವಿನಾಶ್ ಜಾಧವ್ ಹೆಸರನ್ನು ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಶಿಫಾರಸು ಮಾಡಿದ್ದಾರೆ. ಅವಿನಾಶ್ ಜಾಧವ್ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚಿಂಚೋಳಿ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಮಚಂದ್ರ ಜಾಧವ್ ಹೆಸರು ಅಂತಿಮಗೊಳಿಸಿ ಒಂದೇ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿತ್ತು. ಆದರೆ ಉಮೇಶ್ ಜಾಧವ್ ಅವರು ಕುಟುಂಬದವರೊಂದಿಗೆ ಚರ್ಚಿಸಿ ಬಳಿಕ ತನ್ನ ಪುತ್ರ ಡಾ| ಅವಿನಾಶ್ ಜಾಧವ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.
ಶುಕ್ರವಾರ ಯಡಿಯೂರಪ್ಪ ಅವರನ್ನು ಎರಡು ಬಾರಿ ಭೇಟಿ ಮಾಡಿದ ಉಮೇಶ್ ಜಾಧವ್ ತನ್ನ ಪುತ್ರನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಮಾಜಿ ಸಚಿವ ಸುನೀಲ್ ವಲ್ಯಾಪುರೆ ಕೂಡ ಯಡಿ ಯೂರಪ್ಪ ಅವರನ್ನು ಭೇಟಿಯಾಗಿ ಸ್ಪರ್ಧೆಗೆ ಅವಕಾಶ ನೀಡುವಂತೆ ಕೋರಿದರು.
ಬಿಎಸ್‌ವೈ ಭೇಟಿ ಮಾಡಿದ ವಲ್ಯಾಪುರೆ
ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಸುನೀಲ್ ವಲ್ಯಾಪುರೆ ಅವರು ತಮಗೂ ಅವಕಾಶ ನೀಡುವಂತೆ ಮನವಿ ಮಾಡಿ ದರು. ಆದರೆ ಅವರಿಗೆ ಸಮಧಾನಕಾರ ಭರವಸೆ ಸಿಕ್ಕಿಲ್ಲ. ಶನಿವಾರ ಕ್ಷೇತ್ರದ ಬೆಂಬಲಿಗರು, ಕಾರ್ಯಕರ್ತರ ಸಭೆ ಕರೆಯಲಾಗಿದೆ. ಆ ಸಭೆಯ ನಿರ್ಧಾರದಂತೆ ಮುಂದುವರಿಯುವೆ ಎಂದು ಸುನಿಲ್ ತಿಳಿಸಿದರು.
ಈ ಮಧ್ಯೆ, ಕುಂದಗೋಳ ಕ್ಷೇತ್ರಕ್ಕೆ ಸಂಬಂಧಿಸಿ ದಂತೆ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡರ್ ಹೆಸರು ಶಿಫಾರಸು ಮಾಡಲಾಗಿದೆ. ಅದರಲ್ಲಿ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.
ಶನಿವಾರ ವೇಣು ಆಗಮನ
ಕಾಂಗ್ರೆಸ್ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಶನಿವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಬರಲಿದ್ದು, ಅನಂತರವಷ್ಟೇ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಗುರುವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎರಡೂ ಕ್ಷೇತ್ರಗಳ ಮುಖಂಡರ ಜತೆ ಚರ್ಚಿಸಿ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜೆಡಿಎಸ್ ರಣತಂತ್ರ
ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣ ಕ್ಕಿಳಿಸದೆ ಕಾಂಗ್ರೆಸ್‌ಗೆ ಬೆಂಬಲ ನೀಡಲು ಜೆಡಿಎಸ್ ತೀರ್ಮಾನಿಸಿದೆ. ಹೀಗಾಗಿ ಜೆಡಿಎಸ್ ನಾಯಕರು ಉಪ ಚುನಾವಣೆ ಯನ್ನು ಗಂಭೀರವಾಗಿಯೇ ಪರಿಗಣಿಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಎಲ್ಲ ರೀತಿಯ ಬೆಂಬಲ-ನೆರವು-ಸಹಕಾರ ನೀಡಲು ಜಿಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.