ಚಿತ್ರದುರ್ಗ ಜಿಲ್ಲೆಯಲ್ಲಿ 254 ಜನರಿಗೆ ಕೋವಿಡ್ ಪಾಸಿಟಿವ್! 421 ಮಂದಿ ಗುಣಮುಖ
Team Udayavani, Sep 20, 2020, 7:25 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 254 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6070 ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 421 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 816 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 254 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6070 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 4830 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1157 ಸಕ್ರಿಯ ಪ್ರಕರಣಗಳು ಇವೆ.
ಇದನ್ನೂ ಓದಿ : ಜಿಲ್ಲೆಯಲ್ಲಿ ಇನ್ನು 2ದಿನ ರೆಡ್ ಅಲರ್ಟ್: 700 ಕುಟುಂಬಗಳ ಸ್ಥಳಾಂತರ: ಉಡುಪಿ ಜಿಲ್ಲಾಧಿಕಾರಿ
ಸದ್ಯ ಜಿಲ್ಲೆಯಲ್ಲಿ ಒಟ್ಟು 1396 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 39070 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 55144 ಜನರ ಮಾದರಿ ಸಂಗ್ರಹಿಸಲಾಗಿದ್ದು, 47387 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1234 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.