CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ
ಪದೇ ಪದೆ ಸಿಐಡಿ ಡಿವೈಎಸ್‌ಪಿ ವಿಚಾರಣೆ, ಕಿರುಕುಳ: ಡೆತ್‌ನೋಟ್
Team Udayavani, Nov 23, 2024, 7:35 AM IST
ಏನಿದು ಪ್ರಕರಣ?
– ಜೀವಾ ಅವರ ಬ್ಯಾಂಕ್ ಖಾತೆಗೆ ಭೋವಿ ನಿಗಮಕ್ಕೆ ಸೇರಿದ ದೊಡ್ಡ ಮೊತ್ತದ ಹಣ?
– ಈ ಹಿನ್ನೆಲೆಯಲ್ಲಿ ಮಹಿಳಾ ಉದ್ಯಮಿ ವಿಚಾರಣೆ ನಡೆಸಿದ್ದ ಸಿಐಡಿ ಪೊಲೀಸರು
– ಪದೇ ಪದೆ ವಿಚಾರಣೆ ನಡೆಸಿ ಕಿರುಕುಳ ನೀಡಿದ್ದಾರೆಂದು 11 ಪುಟಗಳ ಡೆತ್‌ನೋಟ್
– ದಾಖಲಾತಿ ನೀಡಿದರೂ ಸಮರ್ಪಕ ಸ್ಪಂದನೆ ಇಲ್ಲ: ಜೀವಾ ಸಹೋದರಿ ಆರೋಪ
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿರುವ ಆರೋಪದಲ್ಲಿ ವಿಚಾರಣೆಗೆ ಒಳಗಾಗಿದ್ದ ಮಹಿಳಾ ಉದ್ಯಮಿಯೊಬ್ಬರು ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮೀ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 11 ಪುಟಗಳ ಡೆತ್‌ನೋಟ್ ಬರೆದು ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪದ್ಮನಾಭನಗರದ ಜೀವಾ (33) ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮೀ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಸಿಐಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಭೋವಿ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಜೀವಾ ಅವರು ತಮ್ಮ ಕಂಪೆನಿಯ ಮೂಲಕ ಉತ್ಪನ್ನಗಳನ್ನು ಪೂರೈಸುತ್ತಿದ್ದರು ಎನ್ನಲಾಗಿದೆ. ಜೀವಾ ಅವರನ್ನು ಹಲವು ಬಾರಿ ಸಿಐಡಿ ತನಿಖಾಧಿಕಾರಿ ಡಿವೈಎಸ್‌ಪಿ ಕನಕಲಕ್ಷ್ಮೀ ವಿಚಾರಣೆ ನಡೆಸಿದ್ದರು.
ಕಳೆದ ಗುರುವಾರವೂ ವಿಚಾರಣೆ ನಡೆಸಿ ಅವ್ಯವಹಾರಕ್ಕೆ ಸಂಬಂಧಿಸಿದ ದಾಖಲೆ ನೀಡುವಂತೆ ಕೇಳಿದ್ದರು ಎನ್ನಲಾಗಿದೆ. ಆಗಾಗ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿಸಿ ಜೀವಾ ಶುಕ್ರವಾರ ಬೆಳಗ್ಗೆ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯವರು ಕೊಠಡಿಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಬನಶಂಕರಿ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ 11 ಪುಟಗಳ ಡೆತ್‌ನೋಟ್ ಸಿಕ್ಕಿತ್ತು.
ಡೆತ್‌ನೋಟ್‌ನಲ್ಲಿ ಏನಿದೆ?
ವಿಚಾರಣೆ ವೇಳೆ ನಿಮಗೆ ಹಣ ಹೇಗೆ ಬಂತು, ನಿಮಗೆ ಎಲ್ಲಿಂದ ಹಣ ಬರುತ್ತಿದೆ, ನೀವೆಲ್ಲ ಸುಳ್ಳು ಹೇಳುತ್ತೀರಿ, ಮೋಸ ಮಾಡುತ್ತೀರಿ ಎಂದು ಕೂಗಾಡಿದ್ದಾರೆ. ಭೋವಿ ನಿಗಮದ ಹಗರಣದಲ್ಲಿ ಹಲವು ಬಾರಿ ಜೀವಾ ಅವರನ್ನು ಸಿಐಡಿ ಕಚೇರಿಗೆ ವಿಚಾರಣೆಗೆ ಕರೆಯಲಾಗಿತ್ತು. ಆ ವೇಳೆ ದಾಖಲಾತಿ ನೀಡುವಂತೆ ತನಿಖಾಧಿಕಾರಿಗಳು ಕಿರುಕುಳ ನೀಡಿದ್ದಾರೆ. ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್‌ನಲ್ಲಿ ಜೀವಾ ಉಲ್ಲೇಖೀಸಿದ್ದಾರೆ ಎಂದು ತಿಳಿದು ಬಂದಿದೆ.
2 ಕಂಪೆನಿ ಹೊಂದಿದ್ದ ಜೀವಾ :
ಆತ್ಮಹತ್ಯೆ ಮಾಡಿಕೊಂಡ ಜೀವಾ ಅವಿವಾಹಿತರಾಗಿದ್ದು, ಎಲ್‌ಎಲ್‌ಬಿ ವ್ಯಾಸಂಗ ಮಾಡಿದ್ದಾರೆ. ಜೀವಾ ಜಾಮೀನು ಪಡೆದಿದ್ದರು. ಅನಿತಾ ಕ್ರಿಯೇಶನ್ ಎಂಬ ರೇಷನ್ ವಸ್ತು ಹಾಗೂ ವುಡ್ ಪೂರೈಕೆ ಮಾಡುವ ಕಂಪೆನಿ ಹೊಂದಿದ್ದರು. ಜತೆಗೆ ಗಾರ್ಮೆಂಟ್ಸ್ ಕಂಪೆನಿ ಹೊಂದಿದ್ದರು. ತನಿಖಾಧಿಕಾರಿಗಳು ಕೇಳಿದ ದಾಖಲಾತಿ ನೀಡಿದರೂ ಕಿರುಕುಳ ನೀಡುತ್ತಿದ್ದರು ಎಂದು ಜೀವಾ ಸಹೋದರಿ ಪೊಲೀಸರ ಮುಂದೆ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.