ಪೌರತ್ವ ಕಾಯ್ದೆ: ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿ: ಯಾವೆಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ?
Team Udayavani, Dec 19, 2019, 8:32 AM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಯ ಕಾವು ತೀವ್ರಗೊಳ್ಳುತ್ತಿದೆ. ಮುಂಜಾಗೃತ ಕ್ರಮವಾಗಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೂರು ದಿನಗಳ ನಿಷೇಧಾಜ್ಞೆ ಜಾರಿಯಾಗಿವೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಡಿ. 21 ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಹಲವೆಡೆ ಶಾಲಾ –ಕಾಲೇಜುಗಳು ಎಂದಿನಂತೆ ನಡೆಯಲಿದ್ದು , ಬಿಎಂಟಿಸಿ, ಮೆಟ್ರೋ, ಕೆಎಸ್ ಆರ್ ಟಿಸಿ , ರೈಲುಗಳು ಎಂದಿನಂತೆ ಸಂಚರಿಸಲಿದೆ.
ಕಲಬುರ್ಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು ನಿಷೇಧಾಜ್ಞೆ ಮುಂದುವರಿದಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ. ಕಲಬುರುಗಿ ಪೀಪಲ್ಸ್ ಪೋರಂ ವತಿಯಿಂದ ಬಂದ್ ಗೆ ಕರೆ ನೀಡಿದ್ದರೂ ನಗರದಲ್ಲಿ ಜನಸಂಚಾರ ಎಂದಿನಂತಿದೆ.
ಉಳಿದಂತೆ ಯಾವ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿಲ್ಲ. ಪರಿಸ್ಥಿತಿ ನೋಡಿಕೊಂಡು ಅಗತ್ಯ ಬಿದ್ದರೆ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸುವ ಸಾದ್ಯತೆ ಇದೆ.
ಕೆಎಸ್ ಆರ್ ಪಿ ಪೊಲೀಸರ ನಿಯೋಜನೆ: ರಾಜ್ಯದೆಲ್ಲಡೆ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಯಾವುದೇ ಪ್ರತಿಭಟನೆ ಅಥವಾ ಮೆರವಣಿಗೆಗೆ ಅವಕಾಶವಿಲ್ಲ. ಉಲ್ಲಂಘಿಸಿದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಕೆಎಸ್ಆರ್ಪಿ ನಿಯೋಜನೆ ಮಾಡಲಾಗಿದೆ. ಮೈಸೂರು, ಕಲಬುರ್ಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ, ಶಿವಮೊಗ್ಗ, ಹಾಸನ, ವಿಜಯಪುರ, ಹುಬ್ಬಳ್ಳಿ, ಧಾರವಾಡ ಸೇರಿ ಬಹುತೇಕ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಾಗಿದೆ. ಆಯಾ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಡಿಸೆಂಬರ್ 21ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.