ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
Team Udayavani, Nov 27, 2021, 9:45 PM IST
ಬೆಂಗಳೂರು: ಅಧಿಕಬಡ್ಡಿ ಹಾಗೂ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಹೇಳಿ ಹಣ ವಸೂಲಿ ಮಾಡುವ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.
ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ಆಯೋಜಿಸಿದ್ದ ಮಾಸಿಕ ಜನಸಂಪರ್ಕ ದಿವಸ ಕಾರ್ಯಕ್ರಮದಲ್ಲಿ ವಂಚನೆ ಪ್ರಕರಣಗಳ ಸಂಬಂಧ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು, ಅಧಿಕ ಬಡ್ಡಿ ಮತ್ತು ಮನಿ ಡಬ್ಲಿಂಗ್ ಮಾಡಿಕೊಡುವುದಾಗಿ ಆಮಿಷವೊಡ್ಡಿ ವಂಚಿಸುವುದು ನಿಯಂತ್ರಿಸಬೇಕು ಎಂಬ ಸಾರ್ವಜನಿಕರ ಮನವಿಗೆ ಪ್ರತಿಕಿಯಿಸಿ, ಅಂತಹ ವ್ಯಕ್ತಿಗಳು, ಕಂಪನಿಗಳು ನಗರದಲ್ಲಿ ಹೆಚ್ಚಾಗಿವೆ. ಅವರ ಬಗ್ಗೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ. ಅದರೊಂದಿಗೆ ಸಾರ್ವಜನಿಕರು ಕೂಡ ಕಷ್ಟ ಪಟ್ಟು ಸಂಪಾದಿಸಿದ ಹಣವನ್ನು ಅಪರಿಚಿತ ವ್ಯಕ್ತಿಯೊಬ್ಬ ಅಧಿಕ ಬಡ್ಡಿ ಕೊಡುತ್ತೇನೆ. ಹಣ ಎರಡು ಪಟ್ಟು ಮಾಡಿಕೊಡುತ್ತೇನೆ ಎಂದು ನಂಬಿಸಿದಾಗ, ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ರಸ್ತೆಯ ಇಕ್ಕೆಲಗಳಲ್ಲಿ ಹುಡುಗರ ಗುಂಪುಕಟ್ಟಿಕೊಂಡು ನಿಂತಿರುತ್ತಾರೆ. ಅದನ್ನು ಪ್ರಶ್ನಿಸಿದರೆ, ತಮ್ಮ ಮೇಲೆಯೇ ಕೂಗಾಡುತ್ತಾರೆ. ಅಲ್ಲಡೆ ಗಸ್ತು ಹೆಚ್ಚಳ ಮಾಡಬೇಕು ಎಂದು ಸಾರ್ವಜನಿಕರೊಬ್ಬರು ಹೇಳಿದರು. ಅದಕ್ಕೆ ಉತ್ತರಿಸಿದ ಆಯುಕ್ತರು, ಪೊಲೀಸ್ ಗಸ್ತು ಹೆಚ್ಚಳ ಮಾಡಲಾಗುತ್ತದೆ. ಜತೆಗೆ ಸಾರ್ವಜನಿಕರು ಅಂತಹ ಪುಂಡ ಯುವಕರ ಗುಂಪು ಕಂಡಾಗ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.
ಇದನ್ನೂ ಓದಿ : ಕಾಂಗ್ರೆಸ್‌ನಿಂದ ಮಾತ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಹೆಚ್.ಸಿ.ಮಹದೇವಪ್ಪ
ಪಾದಚಾರಿ ಮಾರ್ಗ ತೆರವು ಮಾಡಿ
ರಸ್ತೆಗಳ ಎರಡು ಕಡೆ ಪಾದಚಾರಿ ಮಾರ್ಗಗಳಲ್ಲಿ ತರಕಾರಿ, ಆಹಾರ ಪದಾರ್ಥ ಮಾರಾಟಗಾರರು ಹೆಚ್ಚಾಗಿದ್ದಾರೆ. ಕಿರಿದಾದ ರಸ್ತೆಗಳಲ್ಲಿ ನಡೆದುಕೊಂಡು ಹೋಗಲು ಕಷ್ಟವಾಗುತ್ತದೆ. ಪಾರ್ಕಿಂಗ್ ಸಮಸ್ಯೆಯನ್ನು ಪರಿಹಾರ ಮಾಡಬೇಕು ಎಂದು ಸಾರ್ವಜನಿಕರು ದೂರುಗಳನ್ನು ನೀಡಿದರು.
ಅದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಆಯುಕ್ತರು, ಸಂಚಾರ ಪೊಲೀಸರು ಪಾದಚಾರಿ ಮಾರ್ಗ ತೆರವು ಕಾರ್ಯವನ್ನು ಕೈಗೊಂಡಿದ್ದಾರೆ. ಹಂತ-ಹಂತವಾಗಿ ತೆರವು ಮಾಡಲಾಗುತ್ತದೆ. ಹಾಗೆಯೇ ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ, ಜಯನಗರ ಉಪವಿಭಾಗ ಎಸಿಪಿ ಕೆ.ವಿ.ಶ್ರೀನಿವಾಸ್, ದಕ್ಷಿಣ ಉಪವಿಭಾಗ ಎಸಿಪಿ ಶ್ರೀನಿವಾಸ್ ಹಾಗೂ ಇತರೆ ಅಧಿಕಾರಿಗಳು ಇದ್ದರು.
ಇದೇ ವೇಳೆ ಎಲ್ಲ ವಿಭಾಗಗಳ ಡಿಸಿಪಿಗಳು ತಮ್ಮ ವ್ಯಾಪ್ತಿಯ ಠಾಣೆಗಳಲ್ಲಿ ದೂರುಗಳನ್ನು ಸ್ವೀಕರಿಸಿ ಸಾರ್ವಜನಿಕರಿಗೆ ಸಲಹೆ, ಸೂಚನೆಗಳನ್ನು ನೀಡಿದರು. ಕೆಲವೊಂದು ಸ್ಥಳದಲ್ಲೇ ಬಗೆಹರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.