ಶಿಡ್ಲಘಟ್ಟ : ಮಾತಿನ ಚಕಮಕಿ, ಕೈ.. ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಪ್ರತಿಭಟನಾ ಸಭೆ


Team Udayavani, Feb 9, 2022, 9:06 PM IST

ಶಿಡ್ಲಘಟ್ಟ : ಪ್ರತಿಭಟನಾ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ

ಶಿಡ್ಲಘಟ್ಟ : ಕೊತ್ತನೂರು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 14 ವರ್ಷಗಳಿಂದ ಬೀಡುಬಿಟ್ಟಿರುವ ಕಾರ್ಯದರ್ಶಿಯ ವರ್ಗಾವಣೆ, ನರೇಗಾ ತಾಂತ್ರಿಕ ಸಿಬ್ಬಂದಿ ಮತ್ತು ಗಣಕಯಂತ್ರದ ಆಪರೇಟರ್ ಗಳನ್ನು ಬದಲಾಯಿಸುವ ವಿಚಾರದಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಎರಡು ಗುಂಪುಗಳ ನಡುವೆ ವಾದ-ಪ್ರತಿವಾದ ನಡೆದು ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆಯಿತು.

ಕಾಂಗ್ರೆಸ್ ಮುಖಂಡ ಎ. ಪಂಚಾಕ್ಷರಿ ರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಸುಮಾರು 14 ವರ್ಷಗಳಿಂದ ಬೀಡುಬಿಟ್ಟಿರುವ ಕಾರ್ಯದರ್ಶಿ ಅಶ್ವತ್ಥಪ್ಪ ಹಾಗೂ ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಮತ್ತು ನರೇಗಾ ತಾಂತ್ರಿಕ ಸಿಬ್ಬಂದಿಯನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪಂಚಾಕ್ಷರಿರೆಡ್ಡಿ ಮಾತನಾಡಿ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಜನಸಾಮಾನ್ಯರು ಸಂಕಷ್ಟದಲ್ಲಿ ಸಿಲುಕುವಂತಾಗಿದೆ ಪ್ರತಿಯೊಂದಕ್ಕೂ ಇಲ್ಲಿ ಕೈಬಿಸಿ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು ಜೊತೆಗೆ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯದರ್ಶಿ ಅಶ್ವತ್ಥಪ್ಪ ಅವರು 14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಅವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕೆಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಇದೇ ವೇಳೆ ಪ್ರತಿಭಟನಾ ಸಭೆಗೆ ಬಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಅವರು ಗ್ರಾಮ ಪಂಚಾಯತಿಯಲ್ಲಿ ಪಾರದರ್ಶಕವಾಗಿ ಆಡಳಿತವನ್ನು ನಡೆಸುತ್ತಿದ್ದೇವೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸುತ್ತಿದ್ದೇನೆ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶಗಳ ನೀಡಿಲ್ಲ ಯಾರು ಬೇಕಾದರೂ ತನಿಖೆ ನಡೆಸಬಹುದು ಎಂದು ಸವಾಲು ಹಾಕಿ ಸಾರ್ವಜನಿಕರಿಗೆ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಬಾರದು ನನ್ನಿಂದ ಅಕ್ರಮವಾಗಿದ್ದರೆ ಪ್ರಶ್ನೆ ಮಾಡಿ ಎಲ್ಲದಕ್ಕೂ ಉತ್ತರಿಸುತ್ತೇನೆ ಎಂದರು.

ಇದನ್ನೂ ಓದಿ : ಸಿಗದ ತುರ್ತು ಆರೋಗ್ಯ ವಾಹನ ; ಉಸಿರಾಟದ ಸಮಸ್ಯೆಯಿಂದ 45 ದಿನದ ಮಗು ಸಾವು

ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ವರ್ಗಾವಣೆಯನ್ನು ಮಾಡಲು ಸಭೆ ನಡೆಸುತ್ತಿದ್ದೇನೆ ತಮ್ಮ ಬಗ್ಗೆ ಯಾರು ಮಾತನಾಡಿಲ್ಲ ಎಂದು ಎ.ಪಂಚಾಕ್ಷರಿರೆಡ್ಡಿ ಹೇಳಿದರಲ್ಲದೆ ಒಂದೇ ಕಾಲುವೆಯನ್ನು ಮೂರು ಬಾರಿ ಕೆಲಸ ಮಾಡಿ ಬಿಲ್ಲು ಮಾಡಿಕೊಳ್ಳಲಾಗಿದೆ ಅನಧಿಕೃತ ವ್ಯಕ್ತಿಗಳಿಗೆ ಗ್ರಾಮ ಪಂಚಾಯಿತಿಯಲ್ಲಿ ಏನು ಕೆಲಸ ಆಕ್ರೋಶ ವ್ಯಕ್ತಪಡಿಸಿದರು ಇದೇ ವೇಳೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಎ.ಪಂಚಾಕ್ಷರಿರೆಡ್ಡಿ ಅವರ ಬೆಂಬಲಿಗರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು ಕೂಡಲೇ ಎಚ್ಚೆತ್ತುಕೊಂಡ ಗ್ರಾಮದ ಹಿರಿಯರು ಎರಡು ಕಡೆಯ ಗುಂಪಿನವರಿಗೆ ಸಮಾಧಾನಪಡಿಸಿ ಇಲ್ಲಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಹಾಗೂ ಆಪರೇಟರ್ ವಿರುದ್ಧ ಹೋರಾಟ ನಡೆಯುತ್ತಿದೆ ಯಾರ ವಿರುದ್ಧವೂ ಅಲ್ಲ ಎಂದು ಸ್ಪಷ್ಟಪಡಿಸಿ ಗಲಾಟೆಯನ್ನು ಶಮನಗೊಳಿಸಿದರು.

ಗ್ರಾಮ ಪಂಚಾಯತಿಯ ಮುಂದೆ ಪ್ರತಿಭಟನೆ ನಡೆಯುತ್ತಿರುವ ಮಾಹಿತಿಯನ್ನು ಅರಿತ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರವಾಣಿಯ ಮೂಲಕ ಸಂಪರ್ಕ ಮಾಡಿ ಪ್ರತಿಭಟನಕಾರರ ರೊಂದಿಗೆ ಮಾತನಾಡಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿಯನ್ನು ಮತ್ತು ನರೇಗಾ ತಾಂತ್ರಿಕ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನಾ ಸಭೆಯನ್ನು ವಾಪಸ್ಸು ಪಡೆಯಲಾಯಿತು.

ಪ್ರತಿಭಟನೆಯಲ್ಲಿ ಜಗದೀಶರೆಡ್ಡಿ, ಜ್ಞಾನೇಶ್, ಸ್ವರೂಪ್‍ರೆಡ್ಡಿ ಅನಿತಾ ಮುನಿಯಪ್ಪ ಮತ್ತಿತರರು ಭಾಗವಹಿಸಿದರು, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ, ಪಿಡಿಓ ಪವಿತ್ರಾ ಹಾಗೂ ಗ್ರಾಪಂ ಕಾರ್ಯದರ್ಶಿ ಅಶ್ವತ್ಥಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.