ಪಕ್ಷ ಸಿದ್ದಾಂತ, ನಾಯಕತ್ವ ಇಲ್ಲದ ಕಾಂಗ್ರೆಸ್ ದೇಶವನ್ನೇ ಗೆಲ್ಲಲು ಹೊರಟಿದೆ : ಸಿಎಂ ವ್ಯಂಗ್ಯ


Team Udayavani, Apr 19, 2022, 8:47 PM IST

ಪಕ್ಷ ಸಿದ್ದಾಂತ, ನಾಯಕತ್ವ ಇಲ್ಲದ ಕಾಂಗ್ರೆಸ್ ದೇಶವನ್ನೇ ಗೆಲ್ಲಲು ಹೊರಟಿದೆ : ಸಿಎಂ ವ್ಯಂಗ್ಯ

ಶಿವಮೊಗ್ಗ : ಶಿಸ್ತೇ ನಮ್ಮ ಪಕ್ಷದ‌ ಗುಣಧರ್ಮ, ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಕ್ಷದ ಕಷ್ಟದ ದಿನಗಳಲ್ಲಿ ಪಕ್ಷ‌ ಕಟ್ಟಿ ಬೆಳೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಶಿವಮೊಗ್ಗದ ಪ್ರೇರಣಾ ಸಭಾಂಗಣದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಪಕ್ಷದ ಕಷ್ಟದ ದಿನಗಳಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಕ್ಷ‌ ಕಟ್ಟಿ ಬೆಳೆಸಿದ್ದಾರೆ, ಯಡಿಯೂರಪ್ಪ ಅವರಿಗೆ ಪಕ್ಷ‌ ಅಧಿಕಾರಕ್ಕೆ ಬರುವ ವಿಶ್ವಾಸವಿರಲಿಲ್ಲ. ಆದರೆ ಜನರಿಗೆ ಒಳ್ಳೆಯದಾಗಲಿ ಎಂದು ಹೋರಾಟ‌ ನಡೆಸುತಿದ್ದರು. ಯಡಿಯೂರಪ್ಪ‌ ಅವರ ಹೋರಾಟ ನೋಡಿ‌ ಅಂದಿನ ಶಕ್ತಿ‌ಶಾಲಿ ಕಾಂಗ್ರೆಸ್ ನಡುಗಲು ಆರಂಭವಾಯಿತು. ಹೀಗಾಗಿ ಯಡಿಯೂರಪ್ಪ‌ ಅವರ ಮೇಲೆ ದೈಹಿಕ ಹಲ್ಲೆ ಕೂಡಾ ನಡೆಯಿತು. ಆಗ ಯಡಿಯೂರಪ್ಪ ಅವರು ಎದೆಗುಂದದೆ ಮುಂದೆ ಬರದಿದ್ದರೆ ಇಂದು ಬಿಜೆಪಿ ಅಧಿಕಾರಕ್ಕೆ‌ ಬರುತ್ತಿರಲಿಲ್ಲ. ಜೊತೆಗೆ ನಾವುಗಳು ಸಿಎಂ ಆಗುತ್ತಿರಲಿಲ್ಲ ಎಂದು ಹೇಳಿದರು.

ಇದಕ್ಕೆಲ್ಲ ಕಾರಣ ಯಡಿಯೂರಪ್ಪ ಅವರ ಹೋರಾಟ ಹಾಗೂ ತಾಳ್ಮೆ ಇದು ಒಬ್ಬ ನಾಯಕನಿಗೆ ಬೇಕಾಗಿರುವ ಪ್ರಮುಖ ಗುಣ. ಹಿಂದೆ ರಾಜ್ಯದಲ್ಲಿ ಶಕ್ತಿಶಾಲಿ ಕಾಂಗ್ರೆಸ್ ಇತ್ತು. ಆದರೆ ಇಂದು ರಾಜ್ಯದಲ್ಲಿರುವುದು ಬರೇ ಪೊಳ್ಳು ಕಾಂಗ್ರೆಸ್. ಒಂದು ಪಕ್ಷಕ್ಕೆ ಸಿದ್ದಾಂತ, ನಾಯಕ, ಕಾರ್ಯಕರ್ತರ ಪಡೆ ಇದ್ದರೆ ಅದು ಬಿಜೆಪಿಗೆ ಮಾತ್ರ. ಇದ್ಯಾವುದೂ ಇಲ್ಲದ ಕಾಂಗ್ರೆಸ್ ದೇಶವನ್ನೇ ಗೆಲ್ಲಲು ಹೊರಟಿದೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ : ಬೆಳಗಾವಿಯಲ್ಲಿ ಗಾಳಿ-ಮಳೆ ಅಬ್ಬರ : ಮರ ಬಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಸಾವು

ಕರ್ನಾಟಕದಲ್ಲಿ ಭಾರಿ ಸಾಧನೆ ಮಾಡುತ್ತೇವೆ ಎಂದು ಸತ್ಯಹರಿಶ್ಚಂದ್ರನ ವಂಶಾವಳಿಗಳಂತೆ ಕಾಂಗ್ರೆಸ್ಸಿಗರು ಹೊರಟಿದ್ದಾರೆ. ಆದರೆ ಕಾಂಗ್ರೆಸ್ ಕಾಲದಲ್ಲಿ ಕುಡಿಯುವ ನೀರು, ಮನೆ ನಿರ್ಮಾಣ, ಎಸ್ ಸಿ, ಎಸ್ ಟಿ ಹಾಸ್ಟೆಲ್ ನ ದಿಂಬು ಹಾಸಿಗೆ, ಹೀಗೆ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡಿದ್ದಾರೆ. ಭ್ರಷ್ಟಾಚಾರದ ಕೂಪವಾಗಿದೆ ಕಾಂಗ್ರೆಸ್. ಬನ್ನಿ ಜನರ ಬಳಿ ಹೋಗೋಣ ನಿಮ್ಮ ಭ್ರಷ್ಟಾಚಾರದ ಕಥೆ ಹೇಳುತ್ತೇವೆ ಎಂದ ಮುಖ್ಯಮಂತ್ರಿ . ಇವರು ಮಾತನಾಡುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಎನ್ನುವಂತಿದೆ ಎಂದರು.

ನಮಗೆ ಸಿಕ್ಕಿರುವ ಮೂರು ವರ್ಷದಲ್ಲಿ ಅದರಲ್ಲೂ ಕೋವಿಡ್ ಸಂದರ್ಭದಲ್ಲಿಯೂ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿ ಮುಂದುವರಿಸಿದ್ದೇವೆ . ದಾಖಲೆ ಪ್ರಮಾಣದ ವ್ಯಾಕ್ಸಿನೇಷನ್ ಭಾರತದಲ್ಲಿ ಆಗಿರುವುದಕ್ಕೆ ಕಾರಣ ಪ್ರಧಾನಿ ನರೇಂದ್ರ‌ಮೋದಿ ಅವರು. ಹಿಂದೆ ಪ್ಲೇಗ್ ಬಂದಾಗ ಜನ ಸಾಂಕ್ರಾಮಿಕ ರೋಗಕ್ಕಿಂತಲೂ ಹೆಚ್ಚು ಜನ ಸತ್ತಿದ್ದು ಹಸಿವಿನಿಂದ. ಆಗ ಕಾಂಗ್ರೆಸ್ ಅಧಿಕಾರದಲ್ಲಿತ್ತು.

ಬಿಜೆಪಿಯ ಅವಧಿಯಲ್ಲಿ ಕರೋನಾ ಬಂದಾಗ ಜನರಿಗೆ ಚಿಕಿತ್ಸೆ ಜೊತೆಗೆ ಆಹಾರವನ್ನೂ ನೀಡಲಾಯಿತು. ನಾವೆಲ್ಲಾ ಹೆಮ್ಮೆಪಡುವ ನಾಯಕತ್ವ ನಮ್ಮಲ್ಲಿ ಇದೆ. ಕರ್ನಾಟಕವನ್ನು ಸುಭೀಕ್ಷವಾಗಿ ಕಟ್ಟಲು ರಾಜ್ಯದಲ್ಲಿ ಬಿಜೆಪಿಯನ್ನು ಇನ್ನಷ್ಟು ಸದೃಢವಾಗಿ ಕಟ್ಟಬೇಕು. ಬೇರೆ ಯಾವ ಪಕ್ಷಗಳಿಗೂ ಈ ಜವಾಬ್ದಾರಿ ಹೊತ್ತುಕೊಳ್ಳುವ ತಾಕತ್ತಿಲ್ಲ. ಆರ್ಥಿಕ ಹಿಂಜರಿತದ ಕಾಲದಲ್ಲೂ 15 ಸಾವಿರ ಕೋಟಿ ಲಾಭವನ್ನು ರಾಜ್ಯದ ಬೊಕ್ಕಸಕ್ಕೆ ತಂದಿದ್ದೆವೆ. ಇದು ನಮ್ಮ ಸರಕಾರದ ದಾಖಲೆ. ಇದರಿಂದಾಗಿ ಹಲವು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗಿದೆ. ಇದೇ ವೇಳೆಗೆ ಕೇಂದ್ರ‌ಸರ್ಕಾರ ನಮಗೆ 9 ಸಾವಿರ ಕೋಟಿ ಅನುದಾನ ನೀಡಿದೆ ಎಂದರು.

ಅಭಿವೃದ್ಧಿಗಾಗಿ ದೇಶ ಹಾಗೂ ರಾಜ್ಯದಲ್ಲಿ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ ಬರಬೇಕಾಗಿದೆ. ಶಿವಮೊಗ್ಗ ಪ್ರಗತಿಪರರು, ನಾಯಕರು, ಹೋರಾಟಗಾರರಿಂದ ಕೂಡಿದ್ದು. ಈ ರಾಜ್ಯದಲ್ಲಿ ಭವಿಷ್ಯದಲ್ಲಿ ಅಭಿವೃದ್ಧಿಯಾಗುವ ಜಿಲ್ಲೆಯಾವುದಾದರೂ ಇದ್ದಲ್ಲಿ ಅದು ಶಿವಮೊಗ್ಗ ಮಾತ್ರ.
ಬೆಂಗಳೂರು ಹೊರತುಪಡಿಸಿ ಐಟಿ ಬಿಟಿ ಮಾಡುವ ಅವಕಾಶವಿರುವುದು ಶಿವಮೊಗ್ಗಕ್ಕೆ‌ ಮಾತ್ರ. ಮುಂಬರುವ ಡಿಸೆಂಬರ್ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಆರಂಭಿಸುತ್ತೇವೆ. ಜೊತೆಗೆ ಶಿವಮೊಗ್ಗದಲ್ಲಿ‌ ಟೂರಿಸಂಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು ಎಂದರು.

ಇದನ್ನೂ ಓದಿ : ಯೋಜನೆಗಳನ್ನು ರೂಪಿಸುವಲ್ಲಿ ಮೈಸೂರು ಜಿಲ್ಲಾ ಒಕ್ಕೂಟ ಮಾದರಿಯಾಗಿದೆ: ಎಸ್.ಟಿ.ಸೋಮಶೇಖರ್

ಬಗರ್ ಹುಕುಂ ಸಮಸ್ಯೆಗೆ ಮುಕ್ತಿ ಹಾಡುವ ಕೆಲಸ ನಾವು ಮಾಡುತ್ತೇವೆ. ಈ ಬಗ್ಗೆ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿದ್ದೇವೆ. ಶರಾವತಿ, ಚಕ್ರ ಸಂತ್ರಸ್ಥರ ಸಮಸ್ಯೆಗಳಿಗೆ ಶೀಘ್ರವೇ ಮುಕ್ತಿಕೊಡುವ ಕೆಲಸ ಮಾಡುತ್ತೇವೆ. ಜನಸ್ಪಂದನೆಯ ಸರ್ಕಾರ ನಮ್ಮ ಸರ್ಕಾರ ಆಗಬೇಕು. ಅದಕ್ಕಾಗಿ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದರು.

ರಾಜ್ಯದಲ್ಲಿ ಏಳು ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಲೆವೆಲ್ ಗೆ ಮಾಡುತಿದ್ದೇವೆ ರಾಹುಲ್ ಗಾಂಧಿ ಬಂದು ಹೋಗಿದ್ದು ನಮಗೆ ಸಂತಸ ತಂದಿದೆ. ರಾಹುಲ್ ಗಾಂಧಿ ಎಲ್ಲೆಲ್ಲಿ ಪ್ರವಾಸ ಮಾಡಿದ್ದಾರೋ ಅಲ್ಲಿ ಕಾಂಗ್ರೆಸ್ ನಾಶವಾಗಿದೆ ಹಾಗಾಗಿ ರಾಹುಲ್ ಗಾಂಧಿ ಇನ್ನೆಷ್ಟು ಬಾರಿ ರಾಜ್ಯಕ್ಕೆ ಬಂದರೂ ನಾವು ಅವರನ್ನು ಸ್ವಾಗತಿಸುತ್ತೇನೆ ಎಂದು ವ್ಯಂಗ್ಯವಾಡಿದರು.

ಹಿಜಾಬ್ ಸಮಸ್ಯೆಯನ್ನು ಪಿಎಫ್ ಐ ಹುಟ್ಟುಹಾಕಿತು, ಆದರೆ ಇದನ್ನು ತಪ್ಪು ಎನ್ನುವ ತಾಕತ್ತು ಕಾಂಗ್ರೆಸ್ಸಿಗರಿಗಿಲ್ಲ‌ ದೇಶವಿಭಜನೆ ಮಾಡುವವರಿಗೆ ಪುಷ್ಟಿ ನೀಡುವ ಕೆಲಸ ಕಾಂಗ್ರೆಸ್ಸಿಗರು ಮಾಡುತ್ತಾರೆ.

ಹಿಜಾಬ್ ವಿಷಯದಲ್ಲಿ ಹೈಕೋರ್ಟ್ ಆದೇಶ ಮಾಡಿದರೂ ಹೈಕೋರ್ಟ್ ಆದೇಶ ಪಾಲನೆ ಮಾಡಿ ಎಂಬ ಒಂದೇ ಒಂದು ಮಾತು ಕಾಂಗ್ರೆಸ್ಸಿಗರ ಬಾಯಲ್ಲಿ ಬರಲಿಲ್ಲ‌.

ಡಿಜೆ ಹಳ್ಳಿ, ಕೆಜಿಹಳ್ಳಿಯಲ್ಲಿ ಕಾಂಗ್ರೆಸ್ ಶಾಸಕರ ಮನೆಗೆ ಬೆಂಕಿ ಇಟ್ಟಾಗ ಬೆಂಕಿ ಇಟ್ಟವರ ಪರವಾಗಿ ಮಾತನಾಡಿದರು.

ಹಿಂದು ಕಾರ್ಯಕರ್ತರ ಕೊಲೆ ಮಾಡಿದವರ ಕೇಸ್ ಕಾಂಗ್ರೆಸ್ ನವರು ವಾಪಸ್ ಪಡೆದವರು. ಹುಬ್ಬಳ್ಳಿ ಘಟನೆ ತಪ್ಪು ಎನ್ನುವ ಕೆಲಸ ಕಾಂಗ್ರೆಸ್ ಮಾಡಲಿಲ್ಲ‌ ಎಂದು ಗುಡುಗಿದರು.

ಗರೀಬಿ ಹಠಾವೋ ಎನ್ನುವ ಕಾಲ ಈಗ ಹೋಗಿದೆ. 2023ರಲ್ಲಿ ಜನರಿಗೋಸ್ಕರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದರು.

 

ಟಾಪ್ ನ್ಯೂಸ್

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.