ಗಡಿ ವಿವಾದ; ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬಸವರಾಜ ಬೊಮ್ಮಾಯಿ
Team Udayavani, Nov 29, 2022, 11:55 AM IST
ನವದೆಹಲಿ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿರುವುದಾಗಿ ಹೇಳಿದರು.
ಮಹಾರಾಷ್ಟ್ರ ಸರ್ಕಾರ ಹಾಕಿರುವ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ ನಡೆಯಲಿದೆ. ಹಿಂದಿನ ಸಿಜೆಐ ದೀಪಕ್ ಮಿಶ್ರಾ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ:ಬಿಜೆಪಿಯಲ್ಲಿ ವೈಲೆಂಟ್ ಸೃಷ್ಟಿಸಿದ ಸೈಲೆಂಟ್ ಸುನೀಲ್
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಹಾರಾಷ್ಟ್ರದ ನಾಯಕರುಗಳು, ನಾವು ಗಂಭೀರವಾಗಿ ಇದೀವಿ ಅಂತ ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ ಎಂದರು.
ಜತ್ ತಾಲೂಕಿನ 42 ಗ್ರಾಮಸ್ಥರು ಸಿಎಂ ಭೇಟಿಗೆ ಅವಕಾಶ ಕೇಳಿರುವ ಬಗ್ಗೆ ಉತ್ತರಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.
ರಾಜಕೀಯ ಹೇಳಿಕೆ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಕುಡಿಯುವ ನೀರು ನೀಡುವ ನಿರ್ಣಯ ಮಾಡಿದ್ದರು. ಅವರು ಯಾಕೆ ಸೇರಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು. ಜವಬ್ದಾರಿಯುತ ಸ್ಥಾನದಲ್ಲಿದ್ದು ಎಲ್ಲವನ್ನೂ ಕಾನೂನು ಮತ್ತು ಸಂವಿಧಾನದ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಗೃಹ ಇಲಾಖೆಗೆ ಜೊತೆಗೆ ಈಗಾಗಲೇ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
MUST WATCH
ಹೊಸ ಸೇರ್ಪಡೆ
Vijay Hazare Trophy: ಚಾಂಪಿಯನ್ ಹರಿಯಾಣ ಪರಾಭವ… ಫೈನಲ್ ಪ್ರವೇಶಿಸಿದ ಕರ್ನಾಟಕ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.