ಶಾಲೆಗಳಲ್ಲಿ ಸಿಎಂ ಗ್ರಾಮ ವಾಸ್ತವ್ಯ

ಸರ್ಕಾರಿ ಶಾಲೆಗಳಲ್ಲಿ ಎಚ್.ಡಿ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

Team Udayavani, Jun 3, 2019, 6:10 AM IST

cm

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸೋಲು ಮತ್ತು ಸರ್ಕಾರದ ಅಸ್ಥಿರತೆ ಆತಂಕದ ಬೆನ್ನಲ್ಲೇ, ಮುಖ್ಯಮಂತ್ರಿ ಕುಮಾರಸ್ವಾಮಿ ‘ಗ್ರಾಮ ವಾಸ್ತವ್ಯ’ ಪರಿಕಲ್ಪನೆಯನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದ್ದಾರೆ. ಹದಿಮೂರು ವರ್ಷಗಳ ಹಿಂದೆ ಜಾರಿಗೊಳಿಸಿದ್ದ ಈ ಯೋಜನೆಯನ್ನು ಈ ಬಾರಿ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಉದ್ದೇಶದೊಂದಿಗೆ ಬದಲಾಯಿಸಲಾಗುತ್ತಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಭಾನುವಾರ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ‘ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಸಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಲಿದೆ. ಸರ್ಕಾರಿ ಶಾಲೆಗಳಲ್ಲಿ,’ ಎಂದು ಹೇಳಿಕೊಂಡಿದ್ದಾರೆ.

ಕುಮಾರಸ್ವಾಮಿಯವರು ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಹೊತ್ತ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಸೇರಿದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಹಾಗೂ ಸ್ಥಳೀಯ ರೈತರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ಕೆ ಈ ಬಾರಿ ಒತ್ತು ನೀಡುವ ನಿರೀಕ್ಷೆ ಇದೆ.

ಲಯಕ್ಕೆ ತರಲು ಕಸರತ್ತು: ಸದ್ಯ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ, ಮೈತ್ರಿ ನಾಯಕರಲ್ಲೇ ಪರಸ್ಪರ ಅಪನಂಬಿಕೆಯಿಂದ ಗೊಂದಲ ಸೃಷ್ಟಿಯಾಗಿದೆ. ಇನ್ನೊಂದೆಡೆ ಕಾಂಗ್ರೆಸ್‌, ಜೆಡಿಎಸ್‌ನ ಕೆಲ ಶಾಸಕರು ಬಿಜೆಪಿಯತ್ತ ಆಕರ್ಷಿತರಾಗಿ ರಾಜೀನಾಮೆ ನೀಡಲು ಮುಂದಾದರೆ ಮೈತ್ರಿ ಸರ್ಕಾರವೇ ಪತನವಾಗುವ ಭೀತಿಯೂ ಆಡಳಿತ ಪಕ್ಷಕ್ಕೆ ಇಲ್ಲದಿಲ್ಲ. ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿಯವರು, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿಯವರನ್ನೂ ಭೇಟಿಯಾಗಿ ಚರ್ಚಿಸಿದ್ದರು. ಆ ಬಳಿಕ ಗೊಂದಲಗಳಿಗೆ ತೆರೆ ಎಳೆಯಲು ಮುಂದಾದಂತಿರುವ ಮುಖ್ಯಮಂತಿಗಳು ಕ್ರಮೇಣ ಆಡಳಿತ ಯಂತ್ರ ಎಂದಿನ ಕಾರ್ಯ ನಿರ್ವಹಣೆಗೆ ಮರಳುವಂತೆ ಮಾಡುವ ಕಾರ್ಯಕ್ಕೆ ಒತ್ತು ನೀಡಲಾರಂಭಿಸಿದಂತಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಶನಿವಾರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಬರ ಪರಿಸ್ಥಿತಿ ನಿರ್ವಹಣೆ, ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಅದರ ಬೆನ್ನಲ್ಲೇ ಇದೀಗ ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಹೂಡುವುದಾಗಿ ಪ್ರಕಟಿಸುವ ಮೂಲಕ ತಮ್ಮ ಹಿಂದಿನ ಆಡಳಿತ ವೈಖರಿಯನ್ನು ಮತ್ತೆ ಮುಂದುವರಿಸಲು ನಿರ್ಧರಿಸಿದಂತಿದ್ದು, ಕುತೂಹಲ ಮೂಡಿಸಿದೆ.

ಮೆಚ್ಚುಗೆ: ಈ ಹಿಂದೆ ವಿಜಯಪುರದ ಎಚ್ಐವಿ ಸೋಂಕುಪೀಡಿತರೊಬ್ಬರ ಮನೆಯನ್ನು ಆಯ್ಕೆ ಮಾಡಿಕೊಂಡು ಎಚ್ಐವಿ ಪೀಡಿತರ ಬಗ್ಗೆ ಸಮಾಜದಲ್ಲಿನ ತಪ್ಪು ನಂಬಿಕೆಯನ್ನು ದೂರ ಮಾಡುವ ಪ್ರಯತ್ನ ಮಾಡಿದ್ದರು. ಈ ವಿಷಯ ತಿಳಿದ ಹಾಲಿವುಡ್‌ ನಟ ರಿಚರ್ಡ್‌ ಗೇರ್‌ ಅವರು ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಗ್ರಾಮ ವಾಸ್ತವ್ಯದಿಂದಾಗಿ ಸುಮಾರು ಸಾವಿರ ಪ್ರೌಢಶಾಲೆಗಳು, ಸುಮಾರು 500 ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಅನುಕೂಲವಾಯಿತು. ಹಾಗೆಯೇ ಸಾಲ ಮನ್ನಾ, ಸಾರಾಯಿ ನಿಷೇಧ, ಲಾಟರಿ ನಿಷೇಧ ಜತೆಗೆ ವಿಕಲಚೇತನರಿಗೆ ಮಾಸಾಶನ ನೀಡುವ ಸೌಲಭ್ಯ ಕಲ್ಪಿಸಿದ್ದು ಸಹ ಗ್ರಾಮ ವಾಸ್ತವ್ಯದ ಕೊಡುಗೆ ಎಂಬುದು ಮುಖ್ಯಮಂತ್ರಿಗಳ ನಂಬಿಕೆ ಎಂದು ಕಚೇರಿ ಅಧಿಕಾರಿಗಳು ಹೇಳಿದ್ದಾರೆ.

ಮೊದಲು ಜಾರಿಯಾದದ್ದು

– 2006-2007ರಲ್ಲಿ ಬಿಜೆಪಿ ಜತೆಗಿನ ಮೈತ್ರಿ ಅವಧಿಯಲ್ಲಿ ಜಾರಿಯಾಗಿದ್ದ ಪರಿಕಲ್ಪನೆ
– ಮೊದಲ ವಾಸ್ತವ್ಯ: ಅಥಣಿ ತಾಲೂಕಿನ ಪಿ.ಕೆ.ನಾಗನೂರ ಗ್ರಾಮದಲ್ಲಿ
– 20 ತಿಂಗಳಲ್ಲಿ 47 ಗ್ರಾಮ ವಾಸ್ತವ್ಯ
– ಮೊದಲ ಅವಧಿಯ ಗ್ರಾಮ ವಾಸ್ತವ್ಯಕ್ಕೆ ರಾಜ್ಯದ ಹಲವು ಕಡೆಗಳಿಂದ ವ್ಯಕ್ತವಾಗಿತ್ತು ಭಾರಿ ಶ್ಲಾಘನೆ.
ಅಧಿಕಾರಿಗಳ ಪರಿಶೀಲನೆ

ಮುಖ್ಯಮಂತ್ರಿಗಳು ಒಂದು ಗ್ರಾಮ ಇಲ್ಲವೇ ಸರ್ಕಾರಿ ಶಾಲೆಗೆ ಭೇಟಿ ನೀಡಿ ವಾಸ್ತವ್ಯ ಹೂಡುತ್ತಾರೆಂದರೆ ಹಿರಿಯ ಅಧಿಕಾರಿಗಳ ತಂಡ ಪೂರ್ವಭಾವಿಯಾಗಿ ಆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಆ ಗ್ರಾಮ, ಶಾಲೆ ಹಾಗೂ ಸುತ್ತಮುತ್ತಲ ಪ್ರದೇಶದ ಜನರ ಸಮಸ್ಯೆಗಳು, ನಿರೀಕ್ಷೆಗಳು, ಅವುಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪೂರಕವಾದ ಸಮಗ್ರ ವರದಿಯನ್ನು ಸಿದ್ಧಪಡಿಸಲಿದ್ದಾರೆ. ವಾಸ್ತವ್ಯ ಸಂದರ್ಭದಲ್ಲಿ ಬಹಳಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇರುತ್ತದೆ. ತಾವು ವಾಸ್ತವ್ಯ ಹೂಡುವ ಗ್ರಾಮ, ಜಿಲ್ಲೆಗೆ ಅಗತ್ಯವಿರುವ ಸೌಲಭ್ಯಗಳು, ಯಾವೆಲ್ಲಾ ಇಲಾಖೆ ಕಾರ್ಯಗಳು ಬಾಕಿ ಉಳಿದಿವೆ ಎಂಬುದನ್ನು ಮನಗಂಡು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ಆಶಯ.
ಏನೇನು ಅನುಕೂಲವಾಗಿತ್ತು?

– ಸಾವಿರ ಪ್ರೌಢಶಾಲೆಗಳ ನಿರ್ಮಾಣ
– 500 ಪ.ಪೂ, ಪದವಿ ಕಾಲೇಜು ನಿರ್ಮಾಣ
– ಸಾರಾಯಿ, ಲಾಟರಿ ನಿಷೇಧ
– ವಿಕಲ ಚೇತನರಿಗೆ ಮಾಸಾಶನ
ರೈತರೇ ಆದ್ಯತಾ ವಲಯ

ಹಿಂದಿನ ಗ್ರಾಮ ವಾಸ್ತವ್ಯದಂತೆ ಈ ಬಾರಿಯೂ ರೈತರೇ ಆದ್ಯತಾ ವಲಯದಲ್ಲಿರುತ್ತಾರೆ. ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಈವರೆಗಿನ ರೈತಪರ ಕಾರ್ಯಕ್ರಮಗಳಿಂದ ಕಂಡುಕೊಂಡ ಅಂಶಗಳನ್ನು ರೈತರೊಂದಿಗೂ ಹಂಚಿಕೊಳ್ಳಲು ಮುಖ್ಯಮಂತ್ರಿಗಳು ಚಿಂತಿಸಿದ್ದಾರೆ. ಜತೆಗೆ ಆಧುನಿಕ ಕೃಷಿ ಪದ್ಧತಿಗೆ ಪೂರಕ ಸ್ಪಂದನೆ, ಯಾಂತ್ರೀಕೃತ ಕೃಷಿಗೆ ನೆರವು ಹಾಗೂ ರೈತರಿಗೆ ಮಾಹಿತಿ ನೀಡುವುದು ಈ ಬಾರಿಯ ಗ್ರಾಮ ವಾಸ್ತವ್ಯದ ಪ್ರಮುಖ ಆದ್ಯತೆಗಳಾಗಿರಲಿವೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.