Coastal Tourisum: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಸೂಚನೆ
ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಿ
Team Udayavani, Jul 10, 2024, 7:35 AM IST
ಬೆಂಗಳೂರು: ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ಕರ್ನಾಟಕದಲ್ಲೂ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇದೆ. ಆದರೆ ನೆರೆಯ ಕೇರಳದಷ್ಟು ಕೂಡ ನಮ್ಮಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಆಗಿಲ್ಲ. ಇದಕ್ಕಾಗಿ ಸಮಗ್ರ ನೀಲಿನಕ್ಷೆ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಅದರಲ್ಲೂ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
3 ತಿಂಗಳಲ್ಲಿ ಮಾಸ್ಟರ್ ಪ್ಲಾನ್:
ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಆದ್ಯತೆ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯ ಕ್ಕೆ ಒಳಗಾಗಿವೆ. ಸ್ಮಾರಕಗಳ ಮಹತ್ವ ಅರಿತ ಗೈಡ್ ನೇಮಿಸುವ ಬಗ್ಗೆ ಚಿಂತನೆ ನಡೆದಿದೆ. ಪ್ರವಾಸಿ ತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಕುರಿತ ಜಿಲ್ಲಾವಾರು ಮಾಸ್ಟರ್ ಪ್ಲಾನ್ ಸಿದ್ಧಪಡಿಸಬೇಕು. 3 ತಿಂಗಳೊಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.