Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!
ರಕ್ಷಣಾ ಕಾರ್ಯಚರಣೆಯಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸಿಬ್ಬಂದಿ, ಎಫ್‌ಐಆರ್ ದಾಖಲಿಸಿದ ಪೊಲೀಸರು
Team Udayavani, Oct 23, 2024, 6:21 PM IST
ಬೆಂಗಳೂರು: ನಗರದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಶೋಧ ಕಾರ್ಯಾಚರಣೆ ವೇಳೆ 13 ಮಂದಿಯ ರಕ್ಷಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳ ಸಿಬ್ಬಂದಿ ಹೊರತೆಗೆದಿದ್ದಾರೆ.
ಪೊಲೀಸರ ಪ್ರಕಾರ, ಮೃತರಲ್ಲಿ ಐವರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಒಟ್ಟು 13 ಮಂದಿಯಲ್ಲಿ ಆರು ಮಂದಿ ಬೆಂಗಳೂರು ಉತ್ತರ ಮತ್ತು ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ ಮಧ್ಯಾಹ್ನ 3:40ರ ಸುಮಾರಿಗೆ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರಿದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ತುರ್ತು ಸೇವಾ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ.
ಇಬ್ಬರು ಆರೋಪಿಗಳ ಬಂಧನ
ಇನ್ನು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳ ಬಂಧಿಸಿದ್ದಾರೆ. ಬಂಧಿತರ ಪೈಕಿ ಕಟ್ಟಡದ ಮಾಲೀಕ ಮತ್ತು ಕಟ್ಟಡ ನಿರ್ಮಾಣದ ಉಸ್ತುವಾರಿ ಕಂಟ್ರಾಕ್ಟರ್ ಸೇರಿದ್ದಾರೆ ಎನ್ನಲಾಗಿದೆ. ಬಿಎನ್‌ಎಸ್, ಬಿಬಿಎಂಪಿ ಆರ್‌ಇಆರ್‌ಎ ನಿಯಮದಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರ್ಮಿಕ ಮೊಹಮ್ಮದ್ ಹರ್ಷದ್ ನೀಡಿರೋ ದೂರಿನ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಬಂಧಿತರನ್ನು ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಕಾಂಟ್ರಾಕ್ಟರ್ ಮುನಿಯಪ್ಪ ಎಂದು ಗುರುತಿಸಲಾಗಿದೆ. ಈ ನಿರ್ಮಾಣ ಹಂತದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿದ್ದು, ಈತ ಪ್ರಕರಣದ ಮೊದಲನೇ ಆರೋಪಿ ಮುನಿರಾಜ ರೆಡ್ಡಿಯ ಮಗ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಬಿಎನ್‌ಎಸ್ (BNS), ಬಿಬಿಎಂಪಿ ಆರ್‌ಇಆರ್‌ಎ ಆ್ಯಕ್ಟ್ ಹಾಗೂ ರೇರಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಬಿಎನ್ ಎಸ್ 105, 125(ಅ) 125(ಆ), 270,3(5) ಬಿಬಿಎಂಪಿ ಆ್ಯಕ್ಟ್ 326, 327,328 ಅಡಿಯಲ್ಲಿ ಇಬ್ಬರೂ ಆರೋಪಿಗಳ ಬಂಧಿಸಿದ್ದಾರೆ.
ಮಾಲೀಕರ ವಿರುದ್ಧ ಕಠಿನ ಕ್ರಮ:
ಕಟ್ಟಡ ದುರಂತಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ ಈ ಕ್ಷಣದ ಮಾಹಿತಿ ಪ್ರಕಾರ ಕಟ್ಟಡದ ಕುಸಿತದಲ್ಲಿ ಒಟ್ಟು 21 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ಕಟ್ಟಡದ ಕುಸಿತದ ದಿನ 26 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಕಟ್ಟಡದ ಮಾಲೀಕರ ಹಾಗೂ ಇತರರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.
4 ಅಂತಸ್ತಿಗೆ ಮಾತ್ರ ಪರವಾನಗಿ
ಇನ್ನು ಈ ಕಟ್ಟಡಕ್ಕೆ 4 ಅಂತಸ್ತಿಗೆ ಮಾತ್ರ ಅಧಿಕಾರಿಗಳು ಪರವಾನಗಿ ನೀಡಿದ್ದರು. ಆದರೆ ಗುತ್ತಿಗೆದಾರ ಮುನಿಯಪ್ಪ ಏಳು ಮಹಡಿಗಳನ್ನು ನಿರ್ಮಾಣ ಮಾಡಿದ್ದ ಎಂದು ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.