14ರೊಳಗೆ ಬರ ನಿರ್ವಹಣೆ ಮಾಹಿತಿ ಸಂಗ್ರಹಿಸಿ
Team Udayavani, May 12, 2019, 3:10 AM IST
ಬೆಂಗಳೂರು: ರಾಜ್ಯದಲ್ಲಿನ ಬರ ನಿರ್ವಹಣೆ ಕುರಿತು ಮೇ 14ರೊಳಗೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳು ವಾಸ್ತವಾಂಶದ ಮಾಹಿತಿಯೊಂದಿಗೆ ವರದಿ ಸಿದ್ಧಪಡಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ಮೇ 15ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದು, ಅಷ್ಟರಲ್ಲಿ ಜಿಲ್ಲಾವಾರು ಬರ ನಿರ್ವಹಣೆ ಕುರಿತಾದ ಮಾಹಿತಿ ಸಿದ್ಧಪಡಿಸಿಕೊಳ್ಳಲು ನಿರ್ದೇಶಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ತಹಸೀಲ್ದಾರರ ಸಭೆ ನಡೆಸಿ, ಬರ ಪರಿಹಾರ ಕಾಮಗಾರಿ ಹಾಗೂ ಕುಡಿಯುವ ನೀರು ಪೂರೈಕೆ, ಉದ್ಯೋಗ ಸೃಷ್ಟಿ, ಮೇವು ವ್ಯವಸ್ಥೆ ಕುರಿತು ಮಾಹಿತಿ ಪಡೆಯಬೇಕು.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿರುವ ಹಣ, ಇದುವರೆಗೂ ವೆಚ್ಚವಾಗಿರುವ ಹಣ, ಬರ ನಿರ್ವಹಣೆ ಕುರಿತು ರೂಪಿಸಿದ್ದ ಕ್ರಿಯಾ ಯೋಜನೆ ಹಾಗೂ ಅನುಷ್ಠಾನದ ಪ್ರಮಾಣ, ಮೇವಿನ ಅಗತ್ಯತೆ ಹಾಗೂ ಪೂರೈಕೆ, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿರುವ ಬಗೆಗಿನ ಸಮಗ್ರ ವಿವರ, ಖಾಸಗಿ ಬೋರ್‌ವೆಲ್ ಬಾಡಿಗೆಗೆ ಪಡೆದಿರುವ ವಿವರ, ಅಲ್ಲಿ ಲಭ್ಯವಾಗುತ್ತಿರುವ ನೀರು, ಪೂರೈಕೆ ಮಾಡಲಾಗುತ್ತಿರುವ ಗ್ರಾಮಗಳು ಎಲ್ಲದರ ಬಗ್ಗೆಯೂ ಮಾಹಿತಿ ಸಂಗ್ರಹಿಸುವಂತೆ ತಿಳಿಸಲಾಗಿದೆ.
ವಿಡಿಯೋ ಸಂವಾದದ ವೇಳೆ ಎಲ್ಲಾ ಜಿಲ್ಲೆಗಳ ಸಮಗ್ರ ಮಾಹಿತಿಯೊಂದಿಗೆ ವಿವರಣೆ ನೀಡಬೇಕೆಂದು ಮುಖ್ಯಮಂತ್ರಿಯವರು ಮುಖ್ಯ ಕಾರ್ಯದರ್ಶಿಯವರ ಮೂಲಕ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಈಗಾಗಲೇ ಕುಡಿಯುವ ನೀರಿಗೆ ತೊಂದರೆ ಇರುವ ಗ್ರಾಮಗಳಲ್ಲಿ ಯಾವುದೇ ವಿಳಂಬ ಮಾಡದೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಆಯಾ ತಾಲೂಕಿನ ತಹಸೀಲ್ದಾರರುಗಳಿಗೆ ಸಂಪೂರ್ಣ ಅಧಿಕಾರ ನೀಡಿರುವುದರಿಂದ ಎಲ್ಲಿಯೂ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಸಚಿವರ ತಂಡ ರಚನೆ: ವಿಡಿಯೋ ಸಂವಾದದ ನಂತರ ಸಮರ್ಪಕ ಬರ ನಿರ್ವಹಣೆಗೆ ಕಂದಾಯ, ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಹಕಾರ, ತೋಟಗಾರಿಕೆ ಹಾಗೂ ಪಶು ಸಂಗೋಪನಾ ಸಚಿವರ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಹಿಂಗಾರು ನಷ್ಟದ ಪರಿಹಾರ ಬಿಡುಗಡೆಗೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ಕಳೆದ ವರ್ಷದ ಹಿಂಗಾರು ಹಂಗಾಮಿನಲ್ಲಿ 11,384 ಕೋಟಿ ರೂ.ನಷ್ಟದ ಅಂದಾಜು ಮಾಡಿ ಫೆಬ್ರವರಿಯಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸಿದ್ದು, ನಿಯಮಾವಳಿಗಳ ಪ್ರಕಾರವೇ 2,064 ಕೋಟಿ ರೂ.ಬಿಡುಗಡೆಯಾಗಬೇಕಿದೆ. ಆದರೆ, ಇದುವರೆಗೂ ಹಣ ಬಿಡುಗಡೆಯಾಗಿಲ್ಲ.
ಒಂದೊಮ್ಮೆ ಬರ ನಿರ್ವಹಣೆಗೆ ಹಣದ ಮುಗ್ಗಟ್ಟು ಉಂಟಾದರೆ ರಾಜ್ಯ ಸರ್ಕಾರದಿಂದಲೇ ಮತ್ತಷ್ಟು ಹಣ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಕುಡಿಯುವ ನೀರಿಗೆ 201 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. 3,600 ಕೋಟಿ ರೂ.ವೆಚ್ಚದಲ್ಲಿ ಬರ ನಿರ್ವಹಣೆಗೆ ಕ್ರಿಯಾ ಯೋಜನೆ ಸಹ ರೂಪಿಸಲಾಗಿದೆ.
ಕುಡಿಯುವ ನೀರಿಗೆ ಸಮಸ್ಯೆಯಿದೆಯೇ?
ಸಹಾಯವಾಣಿಗೆ ಕರೆ ಮಾಡಿ: ರಾಜ್ಯದಲ್ಲಿನ ಬರ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ಬರುವ ದೂರುಗಳಿಗೆ ತಕ್ಷಣವೇ ಸ್ಪಂದಿಸಲು “ಸಹಾಯವಾಣಿ’ ಕಾಲ್‌ಸೆಂಟರ್‌ಗಳನ್ನು ತೆರೆಯಲಾಗಿದೆ. ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾಲ್‌ಸೆಂಟರ್‌ಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ಕರೆ ಮಾಡಿ ತಮ್ಮ ದೂರು ದಾಖಲಿಸಬಹುದಾಗಿದೆ.
ಕುಡಿಯುವ ನೀರು ಪೂರೈಕೆ ಸಂಬಂಧ ಸಾರ್ವಜನಿಕರಿಂದ ಬರುವ ದೂರುಗಳ ಬಗ್ಗೆ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಕಾಲ್‌ಸೆಂಟರ್‌ಗಳ ದೂರವಾಣಿ ಸಂಖ್ಯೆಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ವೆಬ್‌ಸೈಟ್ rdpr.kar.nic.in ಪ್ರಕಟಿಸಲಾಗಿದೆ.
ಸಚಿವರ ಜತೆ ಸಿಎಂ ಚರ್ಚೆ: ವಿಶ್ರಾಂತಿಯಲ್ಲಿರುವ ಕುಮಾರಸ್ವಾಮಿಯವರು ಶನಿವಾರ ದೂರವಾಣಿ ಮೂಲಕ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೃಷಿ ಸಚಿವ ಶಿವಶಂಕರ ರೆಡ್ಡಿ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ಜತೆ ಮಾತನಾಡಿ ಬರ ಪರಿಹಾರ, ನಿರ್ವಹಣೆ ಕುರಿತು ಮಾಹಿತಿ ಪಡೆದಿದ್ದಾರೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಾಯವಾಣಿ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಸಹಾಯವಾಣಿ ದೂರವಾಣಿ ಸಂಖ್ಯೆ
*ಬಾಗಲಕೋಟೆ- 08354-220446
*ಬೆಂಗಳೂರು- 080- 26713944
*ಬೆಂಗಳೂರು ಗ್ರಾಮಾಂತರ- 080-29781021
*ಬೆಳಗಾವಿ-0831-2420835
*ಬಳ್ಳಾರಿ-9535853159
*ಬೀದರ್-9743452632
*ವಿಜಯಪುರ- 08352-276378
*ಚಾಮರಾಜನಗರ-08226-226054
*ಚಿಕ್ಕಮಗಳೂರು-18004251104
*ಚಿತ್ರದುರ್ಗ-08194-234743
*ದಕ್ಷಿಣ ಕನ್ನಡ-0824-220583
*ದಾವಣಗೆರೆ -08192-262126
*ಧಾರವಾಡ-0836-2441209
*ಗದಗ-08372-234364
*ಕಲಬುರಗಿ-08472-278677
*ಹಾಸನ-18004-251020
*ಹಾವೇರಿ-18375-237129
*ಕೊಡಗು-08272-22107
*ಕೋಲಾರ-08152-241367
*ಕೊಪ್ಪಳ-08539-221207
*ಮಂಡ್ಯ-08232-221443
*ಮೈಸೂರು-0821-2460495
*ರಾಯಚೂರು-08532-228591
*ಶಿವಮೊಗ್ಗ- 08182-262226
*ತುಮಕೂರು-0816-2260202
*ಉಡುಪಿ-0802-2574879
*ಉತ್ತರ ಕನ್ನಡ-08382-226292
*ಚಿಕ್ಕಬಳ್ಳಾಪುರ-08156-270058
*ರಾಮನಗರ-080-27271223
*ಯಾದಗಿರಿ-08473-253758
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.