ಬಿಜೆಪಿಗೆ ಬನ್ನಿ; ಕೈ ಅತೃಪ್ತರಿಗೆ ಆಹ್ವಾನ
ಉಸ್ತುವಾರಿ ಮುರಳೀಧರರಾವ್ ಪರೋಕ್ಷ ಗಾಳ
Team Udayavani, Jun 6, 2019, 6:00 AM IST
ಬೆಂಗಳೂರು: ಕಾಂಗ್ರೆಸ್ ಬಿಟ್ಟು ನಮ್ಮಲ್ಲಿ ಬಂದವರಿಗೆ ಏನು ಸಿಗಲಿದೆ ಎಂಬುದಕ್ಕೆ ಸಂಸದ ಡಾ.ಉಮೇಶ್ ಜಾಧವ್ ಅವರೇ ಉದಾಹರಣೆ ಎಂದು ಹೇಳಿರುವ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್, ಕಾಂಗ್ರೆಸ್‌ನ ಅತೃಪ್ತ ಶಾಸಕರಿಗೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.
ಇಲ್ಲಿನ ಅರಮನೆ ಮೈದಾನದಲ್ಲಿ ಬುಧವಾರ ಬಿಜೆಪಿ ಸಂಸದರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪಕ್ಷ ತೊರೆದು ಬಿಜೆಪಿಗೆ ಬಂದರೆ ಇಲ್ಲಿ ಶೇ.100ರಷ್ಟು ಫಲಿತಾಂಶ ಖಾತರಿ ಇರಲಿದೆ. ಕಾಂಗ್ರೆಸ್‌ನಲ್ಲಿ ಇದ್ದರೆ ಯಾವುದೇ ಪ್ರಯೋಜನವಾಗದು. ಬದಲಿಗೆ ದೇಶದ ಒಳಿತು, ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ಇರುವವರು ಬಿಜೆಪಿಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಕಾಂಗ್ರೆಸ್‌ನ ಸೋಲಿಲ್ಲದ ಸರದಾರರೆನಿಸಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿಯಂಥವರು ಸೋತಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ಎಂಬುದು ಸಾಬೀತಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಯಿಂದಾಗಿ ಹೆಚ್ಚು ಸ್ಥಾನ ಗೆಲ್ಲಲಿದ್ದು, ಬಿಜೆಪಿ ಏಳು ಸ್ಥಾನಕ್ಕೆ ಕುಸಿಯಲಿದೆ ಎಂದು ಚುನಾವಣೆ ವೇಳೆ ಹೇಳಲಾಗುತ್ತಿತ್ತು. ಮೋದಿಯವರು ಮತ್ತೆ ಪ್ರಧಾನಿಯಾಗುವುದಿಲ್ಲ ಎಂಬ ಅಪಪ್ರಚಾರವೂ ನಡೆಯಿತು. ಆದರೆ ಚುನಾವಣೆ ಬಳಿಕ ಸನ್ಯಾಸಿಯಂತಿದ್ದವರು ರಾಜರಾದರು. ಗೃಹಸ್ಥರಾದವರು ಸನ್ಯಾಸಿಯಾಗುವಂತಾಯಿತು. ರಾಹುಲ್ಗಾಂಧಿ, ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ ಅವರು ರಾಜಕೀಯ ಸನ್ಯಾಸ ಸ್ವೀಕರಿಸುವ ಪರಿಸ್ಥಿತಿ ಬಂತು. ದೇವೇಗೌಡರು ಮುಂದೆಂದೂ ಚುನಾವಣೆಗೆ ಸ್ಪರ್ಧಿಸಬಾರದೆಂಬಂತೆ ಸೋಲಿಸುವ ಮೂಲಕ ಜನ ತೀರ್ಪು ನೀಡಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.41ರಷ್ಟು ಮತ ಪಡೆದಿದ್ದರೆ ಈ ಬಾರಿಯ ಚುನಾವಣೆಯಲ್ಲಿ ಶೇ.51.4ರಷ್ಟು ಮತ ಪಡೆದಿದೆ. 155 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹೆಚ್ಚು ಮತ ಗಳಿಸಿದ್ದು, ಐತಿಹಾಸಿಕ ಗೆಲುವು ದಾಖಲಿಸಿದೆ. ಮುಂದಿನ 50 ವರ್ಷಗಳ ಕಾಲ ಇದೇ ರೀತಿಯ ಜಯಭೇರಿ ಬಾರಿಸುವ ವಿಶ್ವಾಸವಿದೆ ಎಂದು ಹೇಳಿದರು.
ಜನರೇ ‘ಆಪರೇಷನ್ ಕರ್ನಾಟಕ’ ಮಾಡುತ್ತಿದ್ದಾರೆ: ಲೋಕಸಭಾ ಚುನಾವಣೆಗೂ ಮೊದಲೇ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಕಾಂಗ್ರೆಸ್, ಜೆಡಿಎಸ್ ಅನ್ನು ಜನ ತಿರಸ್ಕರಿಸಿದ್ದಾರೆ. ಹಾಗಾಗಿ ಒಂದು ದಿನವೂ ಅಧಿಕಾರದಲ್ಲಿ ಮುಂದುವರಿಯಲು ಮೈತ್ರಿ ಪಕ್ಷಗಳಿಗೆ ನೈತಿಕತೆ ಇಲ್ಲ. ‘ಆಪರೇಷನ್ ಕಮಲ’ ನಡೆಸುವ ಅಗತ್ಯವೇ ಇಲ್ಲ. ರಾಜ್ಯದ ಜನರೇ ‘ಆಪರೇಷನ್ ಕರ್ನಾಟಕ’ ಮಾಡುತ್ತಿದ್ದಾರೆ. ಗ್ರಹ, ನಕ್ಷತ್ರ, ಜ್ಯೋತಿಷ್ಯ, ಜನತೆ, ಕೇಂದ್ರ ಸರ್ಕಾರ ಯಾವುದೂ ಅವರೊಂದಿಗಿಲ್ಲ. ಹಾಗಾಗಿ ಸರ್ಕಾರ ಯಾವಾಗಲಾದರೂ ಬೀಳಬಹುದು. ನಾವು ಬೀಳಿಸುವ ಅಗತ್ಯವಿಲ್ಲ. ಅಲ್ಲೇ ಉಳಿಯುವವರು ಕಳೆದು ಹೋಗುತ್ತಾರೆ. ಪಕ್ಷ ಬಿಟ್ಟು ಬಂದವರ ಭವಿಷ್ಯ ಉತ್ತಮವಾಗಿರಲಿದೆ ಎಂದು ಪರೋಕ್ಷ ಆಹ್ವಾನ ನೀಡಿದರು.
ಕಾಂಗ್ರೆಸ್ ಆಕ್ರೋಶ
ಮೈತ್ರಿ ಸರ್ಕಾರದ ಶಾಸಕರನ್ನು ಬಹಿರಂಗವಾಗಿಯೇ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿರುವುದಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ವಿರುದ್ದ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಬಹಿರಂಗವಾಗಿಯೇ ನೀವು ಮೈತ್ರಿ ಸರ್ಕಾರದ ಶಾಸಕರನ್ನು ಆಹ್ವಾನಿಸುತ್ತಿದ್ದೀರಿ. ನಿಮ್ಮ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ, ಆಪರೇಷನ್ ಕಮಲದ ಕುದುರೆ ವ್ಯಾಪಾರವು ವಿಫಲ ಯತ್ನ ಎಂದು ಸಾಬೀತಾಗಿದೆ. ಹೀಗಿದ್ದರೂ, ಆಪರೇಷನ್ ಕಮಲದ ದಲ್ಲಾಳಿಯಂತೆ ವರ್ತಿಸುತ್ತಿದ್ದೀರಿ ನಿಮಗೆ ನಾಚಿಕೆ ಆಗುವುದಿಲ್ಲವೇ? ಐದು ವರ್ಷಗಳ ಕಾಲ ನಿಮ್ಮ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ. ರಾಜ್ಯಕ್ಕೆ ಬರಬೇಕಾದ ಯೋಜನೆಗಳು, ಅನುದಾನಗಳು ಇನ್ನೂ ಬಂದಿಲ್ಲ. ನಿಮ್ಮ 25 ಸಂಸದರು ಹೇಡಿತನವನ್ನು ಬಿಟ್ಟು ಧೈರ್ಯವಾಗಿ ಮೋದಿಯವರ ಜೊತೆ ಚರ್ಚಿಸಿ ರಾಜ್ಯದ ಹಿತ ಕಾಪಾಡುವ ಜವಾಬ್ದಾರಿಯನ್ನು ನಿಭಾಯಿಸುವಂತೆ ಹೇಳಿ ಎಂದು ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.