ಮೇ 28 ರಂದು ಕಾಮೆಡ್-ಕೆ ಪರೀಕ್ಷೆ
Team Udayavani, Mar 6, 2023, 7:22 AM IST
ಮಂಗಳೂರು: ರಾಜ್ಯದ 150 ಎಂಜಿನಿಯರಿಂಗ್ ಕಾಲೇಜು ಮತ್ತು 50ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶಕ್ಕಾಗಿ ಸಂಯೋಜಿತ ಪರೀಕ್ಷೆಯಾಗಿ ಮೇ 28ರಂದು ಕಾಮೆಡ್-ಕೆ ಯುಗೇಟ್ ಮತ್ತು ಯುನಿ ಗೇಜ್ ಪ್ರವೇಶ ಪರೀಕ್ಷೆಗಳು ನಡೆಯಲಿವೆ.
ಪ್ರವೇಶ ಪರೀಕ್ಷೆಯನ್ನು ಕರ್ನಾ ಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘದೊಂದಿಗೆ ಸಂಯೋಜಿತವಾ ಗಿರುವ ಕಾಲೇಜುಗಳು ಮತ್ತು ಬಿಇ/ ಬಿಟೆಕ್ ತರಗತಿ ಒದಗಿಸುವ ಯುನಿ-ಗೇಜ್ ಸದಸ್ಯ ವಿ.ವಿ.ಗಳಿಗೆ ನಡೆಸಲಾಗುತ್ತದೆ. ದೇಶಾದ್ಯಂತ 150ಕ್ಕೂ ಹೆಚ್ಚು ನಗರಗಳಲ್ಲಿ 400 ಪರೀಕ್ಷಾ ಕೇಂದ್ರಗಳೊಂದಿಗೆ ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ ಎಂದು ಕಾಮೆಡ್-ಕೆಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ| ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಆಸಕ್ತ ಅರ್ಜಿದಾರರು ಜಠಿಠಿಟs://ಡಿಡಿಡಿ.cಟಞಛಿಛk.ಟ್ಟಜ ಯಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆಯು ಎ. 24ರ ವರೆಗೆ ಆನ್‌ಲೈನ್‌ನಲ್ಲಿ ಲಭ್ಯವಿರಲಿದೆ.
ಕಾಮೆಡ್-ಕೆ ಈ ವರ್ಷ ಕಾಮೆಡ್ ಕರೇಸ್ ಪ್ರಾರಂಭಿಸಿದೆ, ಇದರಲ್ಲಿ ಭಾಗವಹಿಸುವ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಕೌಶಲವರ್ಧಕ ಕೋರ್ಸ್‌ಗಳ ಮೂಲಕ ಉದ್ಯೋಗಕ್ಕೆ ಸಜ್ಜುಗೊಳಿಸುತ್ತದೆ. ರಾಜ್ಯದಲ್ಲಿ ಎಂಟು ಇನ್ನೋವೇಶನ್ ಹಬ್‌ಗಳನ್ನು ಸ್ಥಾಪಿಸಿದೆ. ಅವುಗಳಲ್ಲಿ 4 ಬೆಂಗಳೂರಿನಲ್ಲಿದ್ದರೆ, ಉಳಿದವು ಮೈಸೂರು, ಕಲಬುರಗಿ, ಮಂಗಳೂರು, ಬೆಳಗಾವಿಯಲ್ಲಿವೆ ಎಂದರು.
ಈ ಬಾರಿ 22 ಸಾವಿರ ಸೀಟುಗಳಿದ್ದು, 10 ಸಾವಿರ ಭರ್ತಿಯಾಗುವ ನಿರೀಕ್ಷೆ ಇದೆ ಎಂದು ಎರಾ ಫೌಂಡೇಶನ್ ಸಿಇಒ ಪಿ. ಮುರಳಿಧರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.