ಭಾರತದ ಕೋವಿಡ್-19 ನಿಯಂತ್ರಣ ಕಾರ್ಯ ಪ್ರಶಂಸನೀಯ: ಡಬ್ಲ್ಯುಎಚ್ಒ
Team Udayavani, May 11, 2020, 9:18 PM IST
ನವದೆಹಲಿ: ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್-19 ಸೋಂಕಿನ ಪ್ರಕರಣ ಹಾಗೂ ಸಾವಿನ ಸಂಖ್ಯೆಗಳು ಕಡಿಮೆ ಇವೆ. ಕೋವಿಡ್-19ಗೆ ಲಸಿಕೆ ಕಂಡು ಹಿಡಿಯುವಲ್ಲಿ ಭಾರತ ಮಹತ್ವದ ಪಾತ್ರ ವಹಿಸಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಮುಖ್ಯ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ತಂತ್ರಜ್ಞಾನ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತದಲ್ಲಿ ಅತಿಯಾದ ಜನಸಾಂಧ್ರತೆ, ವೈದ್ಯಕೀಯ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಆದರೂ, ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಕೋವಿಡ್-19 ಸೋಂಕಿನ ಪ್ರಕರಣ ಹಾಗೂ ಸಾವಿನ ಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಭಾರತ ಶಕ್ತವಾಗಿದೆ. ಇದಕ್ಕಾಗಿ ಸಚಿವರು ಹಾಗೂ ಸಂಬಂಧಿತ ಅಧಿಕಾರಿಗಳ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸುತ್ತೇನೆ ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ ಸೇರಿದಂತೆ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದವರೆಲ್ಲರೂ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.