Commission Report: ಕೋವಿಡ್ ಹಗರಣದ ತನಿಖೆಯಾಗಲಿ, ನಮಗೆ ಯಾವುದೇ ತೊಂದರೆಯಿಲ್ಲ: ಜೋಶಿ
ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ: ಕೇಂದ್ರ ಸಚಿವ
Team Udayavani, Sep 1, 2024, 5:55 PM IST
ಹುಬ್ಬಳ್ಳಿ: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಮಾಡಲಿ ನಮಗೆ ಯಾವುದೇ ತೊಂದರೆಯಿಲ್ಲ. ಯಾರಾದರು ಭ್ರಷ್ಟಾಚಾರ ಮಾಡಿದ್ದರೆ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಕೋವಿಡ್ ಕಾಲದ ಹಗರಣದ ಬಗ್ಗೆ ಇವರಿಗೆ ನೆನಪಾಗಲಿಲ್ಲವಾ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಪ್ರಕರಣ 2005-06ರಲ್ಲಿ ಆಗಿದ್ದು. 2013ರಿಂದ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದರು. ಆಗ ತನಿಖೆ ಮಾಡಿಸಬಹುದಿತ್ತಲ್ಲ. ವಿನಾಕಾರಣ ಆ ಪ್ರಕರಣವನ್ನು ಕಾಂಗ್ರೆಸ್ ಮುನ್ನೆಲೆಗೆ ತರುವ ಕೆಲಸ ಮಾಡುತ್ತಿದೆ. 2018ರಲ್ಲಿ ಕುಮಾರಸ್ವಾಮಿ ಅವರ ಕೈ ಕಾಲು ಬಿದ್ದು ಮುಖ್ಯಮಂತ್ರಿಯಾಗಿ ಮಾಡಿದ್ದು ನೀವೆ ಅಲ್ಲವೇ ? ಎಂದು ಪ್ರಶ್ನಿಸಿದರು.
ಪರಸ್ಪರ ಬಿಚ್ಚಿಡುವ ಹೆದರಿಕೆಯಿಂದ ಬಿಜೆಪಿ ಬಾಯಿ ಬಂದ್ ಮಾಡಲು ಆಗುವುದಿಲ್ಲ. ಯಾರು ತಪ್ಪು ಮಾಡಿರುತ್ತಾರೆ ಅವರ ವಿರುದ್ಧ ಕ್ರಮವಾಗಲಿ. ಎಲೆಕ್ಟ್ರೋ ಬಾಂಡ್ ನಲ್ಲಿ ಎಲ್ಲವೂ ಕಾನೂನು ಬದ್ಧವಾಗಿ ಹಣ ಬಂದಿದೆ. ಕಾಂಗ್ರೆಸ್ ಕೂಡ ಹಣ ಪಡೆದಿದೆ. ಈ ವಿಚಾರದಲ್ಲಿ ಪ್ರಧಾನಮಂತ್ರಿ ರಾಜೀನಾಮೆ ಕೊಡಬೇಕು ಎಂಬುವುದು ಚೈಲ್ಡಿಶ್ ಹೇಳಿಕೆ. ನಾವು ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದು ಜೋಶಿ ಹೇಳಿದರು.
“ರಾಜ್ಯಪಾಲರನ್ನು ಹೆದರಿಸುತ್ತಿರುವ ಕಾಂಗ್ರೆಸ್’
ಮುಡಾ ಹಗರಣದ ವಿಚಾರದಲ್ಲಿ ಹೈಕೋರ್ಟ್ ಇನ್ನೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಆಗಲೇ ಕಾಂಗ್ರೆಸ್ ನಾಯಕರು ದಲಿತ ರಾಜ್ಯಪಾಲರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಹಿಂದೂ ಹಾಗೂ ದಲಿತ ವಿರೋಧಿ ಕಾರ್ಯ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.