Competitive Exam: ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿಯಲ್ಲೂ ಸುಧಾರಣೆಯಾಗಲಿ: ಸಿಎಂ
ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿ ಸಂಬಂಧಿಸಿದ ಗೊಂದಲಗಳ ಪರಿಶೀಲಿಸಿ: ಸಿದ್ದರಾಮಯ್ಯ
Team Udayavani, Sep 25, 2024, 9:23 PM IST
ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಕೂಡ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸುವ ಕುರಿತು ಸುಧಾರಣಾ ಕ್ರಮಗಳ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ನೇಮಕಾತಿ ಪ್ರಕ್ರಿಯೆಗಳ ವಿಳಂಬ, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಪ್ರತಿ ವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುಕೂಲವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳ ಸಲ್ಲಿಸಲು ಸೂಚನೆ ನೀಡಿದ್ದಾರೆ.
ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿ, ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲ್ಯಾಷ್ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಮನವರಿಕೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಚಿವ ಸಂಪುಟದ ಮುಂದೆ ವಿಷಯ ಮಂಡಿಸುವುದು. ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು. ಒಂದು ವೇಳೆ ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.
ಪ್ರತಿ ನೇಮಕಾತಿ ಪ್ರಕ್ರಿಯೆಯೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕು. ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಬೇಕು. ಮುಂದಿನ ವಾರ ಮತ್ತೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.