ನಗರಗಳಲ್ಲಿ ಸಂಪೂರ್ಣ ಅನ್‌ಲಾಕ್ ಜಾರಿಗೊಳಿಸಲು ಸಾಧ್ಯವಿಲ್ಲ: ಗೌರವ್ ಗುಪ್ತ
Team Udayavani, Jun 25, 2021, 8:40 PM IST
ಬೆಂಗಳೂರು: ಕೊರೊನಾ ಸೋಂಕು ಇಳಿಮುಖವಾದರೂ ಸಹ ನಗರದಲ್ಲಿ ಸಂಪೂರ್ಣ ಅನ್‌ಲಾಕ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಲ್‌ಗಳು, ಚಿತ್ರಮಂದಿರಗಳ ಪ್ರಾರಂಭ, ಮದುವೆ ಸಮಾರಂಭಗಳಿಗೆ ವಿನಾಯಿತಿ ಕೇಳುವುದು ಸ್ವಾಭಾವಿಕ. ಆದರೆ, ಪಾಲಿಕೆ ವ್ಯಾಪ್ತಿಯಲ್ಲಿ ಮತ್ತಷ್ಟು ಸೇವೆಗಳಿಗೆ ವಿನಾಯಿತಿ ನೀಡುವ ಪ್ರಸ್ತಾಪ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಗರದ ಪ್ರಸ್ತುತ ಸನ್ನಿವೇಶ ಹಾಗೂ ಕಳೆದ ಎರಡು ತಿಂಗಳ ಪರಿಸ್ಥಿತಿಯ ಅನುಭವದಿಂದ ಮತ್ತಷ್ಟು ಎಚ್ಚರವಹಿಸಬೇಕಿದ್ದು, ಯಾವುದೇ ಕಾರಣಕ್ಕೂ ನಗರದಲ್ಲಿ ಸಂಪೂರ್ಣ ಅನ್‌ಲಾಕ್ ಮಾಡಲು ಸಾಧ್ಯವಿಲ್ಲ. ಮೂರನೇ ಹಂತದ ಅನ್‌ಲಾಕ್‌ನಲ್ಲಿ ಜನದಟ್ಟಣೆ ಸೇರುವ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಮನರಂಜನೆ ಪಡೆಯುವುದಕ್ಕೆ ವಿನಾಯಿತಿ ಪಡೆಯಬೇಕೆಂಬ ಆಸೆ ಎಲ್ಲರಲ್ಲೂ ಇದೆ. ಆದರೆ, ಇವುಗಳಿಗೆ ಅನುಮತಿ ನೀಡಿದರೆ ಮತ್ತಷ್ಟು ಆತಂಕ ಉಂಟಾಗಲಿದೆ. ಈಗಾಗಲೇ ನಾವು 3ನೇ ಅಲೆ ಭೀತಿಯನ್ನು ಎದುರಿಸುತ್ತಿದ್ದು, ಕೆಲಕಾಲ ಇದೇ ರೀತಿ ಇರಲಿದೆ ಎಂದರು.
ಡೆಲ್ಟಾ ಪ್ಲಸ್ ಸಂಬಂಧಿಸಿದಂತೆ ನಗರದಲ್ಲಿ ವೈರಾಣು ಅನುಕ್ರಮಣಿಕೆ ಪರೀಕ್ಷೆಗೆ ಒತ್ತು ನೀಡಲಾಗುತ್ತಿದೆ. ಸೋಂಕಿತ ವ್ಯಕ್ತಿಯಲ್ಲಿರುವ ರೂಪಾಂತರ ವೈರಾಣುವಿನ ವಂಶವಾಹಿ ಪತ್ತೆ ಮಾಡಲಾಗುತ್ತಿದೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ಸೋಂಕಿನ ಗುಣಲಕ್ಷಣಗಳು, ದುಷ್ಪರಿಣಾಮಗಳ ಕುರಿತು ತಜ್ಞರು ಅಧ್ಯಯನ ನಡೆಸುತ್ತಿ¨ªಾರೆ. ಆರೋಗ್ಯ ತಜ್ಞರು ನೀಡುವ ಶಿಫಾರಸುಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತದೆ. ಅಲ್ಲದೆ, ಜನರ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ :ದಾವಣಗೆರೆ : ಕೋವಿಡ್ ನಿಂದ ಚೇತರಿಸಿಕೊಂಡವರೇ ಹೆಚ್ಚು..!
ವೈರಾಣು ರೂಪಾಂತರ ಸ್ವಾಭಾವಿಕ:
ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಡೆಲ್ಟಾ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಡೆಲ್ಟಾ ಸೋಂಕಿತರನ್ನು ಗುರುತಿಸುವುದಕ್ಕೆ ಪಾಲಿಕೆಯಿಂದ ಕ್ರಮವಹಿಸಲಾಗುತ್ತಿದೆ. ಆದರೆ, ಡೆಲ್ಟಾ, ಡೆಲ್ಟಾ ಪ್ಲಸ್ ಹಾಗೂ ಇನ್ನಿತರ ಹೊಸ ರೂಪಾಂತರ ಸೋಂಕು ಕಂಡುಬರಬಹುದು. ವೈರಸ್‌ನಲ್ಲಿ ಬದಲಾವಣೆ ಮತ್ತು ರೂಪಾಂತರ ಸ್ವಾಭಾವಿಕ ಗುಣ. ಹಿಂದೆಯೂ ರೂಪಾಂತರ ಆಗಿದ್ದು, ಮುಂದೆಯೂ ಆಗಲಿದೆ. ಆದರೆ, ಜನರು ಆತಂಕಕ್ಕೆ ಒಳಗಾಗದೆ ಜಾಗೃತಿವಹಿಸಬೇಕು ಎಂದು ಸಲಹೆ ನೀಡಿದರು.
ನಿತ್ಯ ಎಂಟು ಸೋಂಕಿತರ ಪರೀಕ್ಷೆ:
ಕೊರೊನಾ ರೂಪಾಂತರ ಡೆಲ್ಟಾ ಪ್ಲಸ್ ಸೋಂಕಿನ ಅಪಾಯ, ಗುಣಲಕ್ಷಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಅಧ್ಯಯನ ನಡೆಸುತ್ತಿದೆ. ಪಾಲಿಕೆಯಿಂದ ಪ್ರತಿನಿತ್ಯ ಎಂಟು ಮಂದಿ ಸೋಂಕಿತರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.