ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನವನ್ನು ಖಂಡಿಸುತ್ತೇನೆ: ಬಿ.ಟಿ.ಲಲಿತಾ ನಾಯಕ್
Team Udayavani, Feb 25, 2022, 9:15 PM IST
ಬೆಂಗಳೂರು: ಭಾರತದ ಹೆಮ್ಮೆಯ ರಾಷ್ಟ್ರಧ್ವಜವನ್ನು ಅಪಮಾನಗೊಳಿಸಿ, ಅದರ ಜಾಗದಲ್ಲಿ ಕೇಸರಿ ಧ್ವಜವನ್ನು ಹಾರಿಸುವುದಾಗಿ ಹೇಳಿಕೆ ಕೊಟ್ಟಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ದುರ್ವರ್ತನೆಯನ್ನು ಜನತಾ ಪಾರ್ಟಿ ರಾಜ್ಯಾಧ್ಯಕ್ಷೆ ಡಾ.ಬಿ.ಟಿ.ಲಲಿತಾ ನಾಯಕ್ ವರು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ತ್ರಿವರ್ಣ ಧ್ವಜದ ಬಗ್ಗೆ ಕಿಂಚಿತ್ತು ತಿಳುವಳಿಕೆ ಇಲ್ಲದೇ, ಧ್ವಜವನ್ನು ಕೇವಲ ಮೂರು ರಂಗಿನ ಬಟ್ಟೆ ಎಂದು ಕೇವಲವಾಗಿ ಭಾವಿಸಿರುವುದು ದೇಶದ ಜನತೆಗೆ ನಾಚಿಕೆ ಮತ್ತು ಮುಜುಗರ ಉಂಟುಮಾಡಿದೆ. ರಾಷ್ಟ್ರ ಧ್ವಜದ ಮಹತ್ವವನ್ನು ತಿಳಿಯದೇ, ಸಚಿವರು ಯಾವುದೋ ರಾಜಕೀಯ ಪಕ್ಷದ ಬಾವುಟವನ್ನು ರಾಷ್ಟ್ರಧ್ವಜವನ್ನಾಗಿ ಹಾರಿಸುವ ಕನಸು ಕಾಣುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.
ಅಧಿಕಾರ ಸ್ವೀಕರಿಸುವಾಗ ಸಂವಿಧಾನದ ಮೇಲೆ ಮಾಡಿರುವ ಪ್ರಮಾಣವನ್ನು ಮರೆತು, ದೇಶದ ಜಾತ್ಯತೀತ ಸಿದ್ಧಾಂತವನ್ನು ಗಾಳಿಗೆ ತೂರುವ ಅವಿವೇಕದ ಹೇಳಿಕೆ ಕೊಟ್ಟು ಪದೇಪದೇ ಜನರ ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವ ಕೆ.ಎಸ್.ಈಶ್ವರಪ್ಪನವರ ಮೇಲೆ ರಾಷ್ಟ್ರದ್ರೋಹದಡಿ ಪ್ರಕರಣ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಸಚಿವರ ಮನೆ , ಸರ್ಕಾರಿ ಬಂಗಲೆ ಅಥವಾ ವಿಧಾನಸೌಧದ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಅವರ ರಾಜೀನಾಮೆ ಪಡೆಯುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎನ್.ನಾಗೇಶ್ ಸರಕಾರಕ್ಕೆ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.