ಸುಧಾಕರ್ ಕೈನಲ್ಲಿ ಒತ್ತೆ
ಕಾಂಗ್ರೆಸ್-ಬಿಜೆಪಿ ಶಾಸಕರ ನಡುವೆ ಘರ್ಷಣೆ
Team Udayavani, Jul 11, 2019, 6:00 AM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬುಧವಾರ ಅತ್ಯಂತ ನಾಟಕೀಯ ಪ್ರಸಂಗಗಳಿಗೆ ಕಾರಣವಾಯಿತು.ದೊಡ್ಡ ಹೈಡ್ರಾಮಾಗೆ ವಿಧಾನಸೌಧವೇ ವೇದಿಕೆ ಯಾಗಿದ್ದುದು ಮಾತ್ರ ವಿಪರ್ಯಾಸ.
ಡ್ರಾಮಾ ಶುರುವಾಗಿದ್ದು ಹೇಗೆ?: ಹೊಸಕೋಟೆ ಶಾಸಕ ಎಂ.ಟಿ.ಬಿ. ನಾಗರಾಜ್ ಮತ್ತು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ವಿಧಾನಸೌಧಕ್ಕೆ ಆಗಮಿಸಿ, ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದರು. ಇವರಿಬ್ಬರು ರಾಜೀನಾಮೆ ಸಲ್ಲಿಸಿದ ಸುದ್ದಿ ತಿಳಿದ ತಕ್ಷಣ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸೌಧಕ್ಕೆ ದೌಡಾಯಿಸಿದರು.
ಸಚಿವ ಎಂ.ಟಿ.ಬಿ. ನಾಗರಾಜ್ ರಾಜೀನಾಮೆ ಸಲ್ಲಿಸಿ ಇವರೆಲ್ಲರಿಂದ ತಪ್ಪಿಸಿಕೊಂಡು ರಾಜಭವನ ದತ್ತ ಹೋದರು. ಆದರೆ, ಡಾ.ಸುಧಾಕರ್ ರಾಜೀನಾಮೆ ಸಲ್ಲಿಸಿ ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಿಂದ ಹೊರಗಡೆ ಹೋಗುತ್ತಿರುವ ಸಂದರ್ಭದಲ್ಲಿ ಪರಿಷತ್ ಸದಸ್ಯ ನಜೀರ್ ಅಹಮದ್, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಾ. ಸುಧಾಕರ್ ಅವರನ್ನು ಕೊರಳಿಗೆ ಕೈ ಹಾಕಿ ಹಿಡಿದುಕೊಂಡು ಲಿಫ್ಟ್ ಮೂಲಕ ಮೂರನೇ ಮಹಡಿಯಲ್ಲಿರುವ
ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಅವರ ಕೊಠಡಿ ಕರೆದುಕೊಂಡು ಹೋಗಿ ಕೂಡಿ ಹಾಕಿದರು.
ನೂಕಾಟ, ತಳ್ಳಾಟ: ಈ ಸಂದರ್ಭದಲ್ಲಿ ಶಾಸಕ ಸುಧಾಕರ ಹಾಗೂ ಕಾಂಗ್ರೆಸ್ ನಾಯಕರ ನಡುವೆ ತಳ್ಳಾಟ ಉಂಟಾಯಿತು. ಡಾ. ಸುಧಾಕರ್ ಅವರನ್ನು ಕಾಂಗ್ರೆಸ್ ನಾಯಕರು ಕರೆದು ಕೊಂಡು ಹೋಗಿದ್ದಾರೆ ಎಂಬ ಮಾಹಿತಿ ದೊರೆತ ತಕ್ಷಣ ಅಲ್ಲಿಯೇ ಸ್ಪೀಕರ್ ಕಚೇರಿಗೆ ಆಗಮಿಸಿದ್ದ ಬಿಜೆಪಿ ಶಾಸಕರಾದ ಬಸವರಾಜ್ ಬೊಮ್ಮಾಯಿ, ಜೆ.ಸಿ. ಮಾಧುಸ್ವಾಮಿ ಸ್ಪೀಕರ್ ರಮೇಶ್ ಕುಮಾರ್‌ಗೆ ಡಾ. ಸುಧಾಕರ್ ಮೇಲೆ ಹಲ್ಲೆ ನಡೆಸಲಾಗಿದೆ.
ವಿಧಾನಸೌಧದಲ್ಲಿ ಶಾಸಕರಿಗೆ ಭದ್ರತೆಯಿಲ್ಲ ಎಂದು ದೂರು ಸಲ್ಲಿಸಿದರು.ನಂತರ ವಿಧಾನಸೌಧದ ಮೂರನೇ ಮಹಡಿಗೆ ಬಿಜೆಪಿಯ ಶಾಸಕರು ಸುಧಾಕರ್ ಭೇಟಿಗೆ ತೆರಳಿದರು. ಅಷ್ಟರಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಅಲ್ಲಿಗೆ ಆಗಮಿಸಿದ್ದರು.
ಸುಧಾಕರ್ ಮನವೊಲಿಕೆ ಪ್ರಯತ್ನಿಸಿದರು. ಈ ಮದ್ಯೆ, ಪೊಲೀಸರು ಮೂರನೇ ಮಹಡಿಗೆ ಯಾರನ್ನೂ ಬಿಡುವುದಿಲ್ಲ ಎಂದು ಮೂರನೇ ಮಹಡಿಯ ಗೇಟ್ ಹಾಕಿ ದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಜೆ.ಸಿ. ಮಾಧುಸ್ವಾಮಿ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಜಾರ್ಜ್ ಕಚೇರಿ ಎದುರು ಪ್ರತಿಭಟನೆ
ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಕಚೇರಿ ಎದುರು ಸುಧಾಕರ್ ಭೇಟಿಗೆ ಅವಕಾಶ ನೀಡುವಂತೆ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿಯ ಶಾಸಕರು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಬಿಜೆಪಿ ಶಾಸಕರನ್ನು ಎಳೆದು ಹೊರ ನಡೆಯುವಂತೆ ತಳ್ಳಿದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಶಾಸಕ ಬಸವರಾಜ್ ಬೊಮ್ಮಾಯಿ ಜಾರ್ಜ್ ಕಚೇರಿಯ ಬಾಗಿಲಿಗೆ ಜೋರಾಗಿ ಗುದ್ದಿ ಕಾಲಿನಿಂದ ಒದ್ದರು. ಜತೆಗೆ ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಸಚಿವ ಯು.ಟಿ.ಖಾದರ್ ನಡುವೆ ಮಾತಿನ ಚಕಮಕಿಯೂ ನಡೆಯಿತು.
ಅಲೋಕ್‌ಕುಮಾರ್ ಸೌಧಕ್ಕೆ ಆಗಮನ
ಡಾ.ಸುಧಾಕರ್‌ಗೆ ರಕ್ಷಣೆ ಒದಗಿಸಬೇಕು ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು. ವಿಧಾನಸೌಧದಲ್ಲಿನ ವಿಚಾರದ ಬಗ್ಗೆ ಮಾಹಿತಿ ಪಡೆದ ರಾಜ್ಯಪಾಲರು ನಗರ ಪೊಲೀಸ್ ಆಯುಕ್ತರಿಗೆ ಹತ್ತು ನಿಮಿಷದಲ್ಲಿ ಡಾ.ಕೆ.ಸುಧಾಕರ್ ಅವರನ್ನು ರಾಜಭವನಕ್ಕೆ ಕರೆತರುವಂತೆ ಸೂಚಿಸಿದರು. ಅದರಂತೆ ನಗರ ಪೊಲೀಸ್ ಆಯುಕ್ತ ಅಲೋಕ್‌ಕುಮಾರ್ ಅವರು ಪೊಲೀಸ್ ಪಡೆಯೊಂದಿಗೆ ಆಗಮಿಸಿ ಕರೆದೊಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.