ನೂತನ ಕೇಂದ್ರ ಸಚಿವರಿಗೆ ಅಭಿನಂದನೆಗಳ ಮಹಾಪೂರ
Team Udayavani, Jul 7, 2021, 9:05 PM IST
ಬೆಂಗಳೂರು: ಕೇಂದ್ರ ಸಂಪುಟದಲ್ಲಿ ರಾಜ್ಯದಿಂದ ಅವಕಾಶ ಪಡೆದಿರುವ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ ಹಾಗೂ ಎ.ನಾರಾಯಣಸ್ವಾಮಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ , ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಸಿ.ಪಿ.ಯೋಗೇಶ್ವರ್ ಸೇರಿ ಹಲವು ಅಭಿನಂದನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೇಂದ್ರ ಸಂಪುಟಕ್ಕೆ ಸೇರಿರುವ ಎಲ್ಲರಿಗೂ ಅಭಿನಂದನೆ. ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಜತೆಗೂಡಿ ಕೆಲಸ ಮಾಡೋಣ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯೋಣ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.
ಇದನ್ನೂ ಓದಿ :ಕರ್ನಾಟಕದಿಂದ ಗೋವಾಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬರುವವರ ಸಂಖ್ಯೆ ಇಳಿಮುಖ
ಗೋವಿಂದ ಕಾರಜೋಳ ಅವರು, ಆಡಳಿತದ ಅನುಭವ ಇರುವವರಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಿರುವುದು ಸಂತೋಷದ ವಿಷಯ ಎಂದು ಹೇಳಿದ್ದಾರೆ.
ಡಾ.ಸಿ.ಎನ್.ಅಶ್ವತ್ಥನರಾಯಣ, ರಾಜ್ಯದಿಂದ ಹೆಚ್ಚು ಜನರಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಿರುವುದು ಸಂತಸದ ವಿಚಾರ. ರಾಜ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪ್ರಧಾನಿ ನರೇಂದ್ರಮೋದಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಪ್ರಧಾನಿ ನರೇಂದ್ರಮೋದಿಯವರು ರಾಜ್ಯದ ಜನತೆಗೆ ಸೂಕ್ತ ನ್ಯಾಯ ದೊರಕಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ಆರು ಸಂಸದರಿಗೆ ಅವಕಾಶ ನೀಡಿ ಸಮಗ್ರ ಕರ್ನಾಟಕದ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಎಲ್ಲ ಭಾಗಕ್ಕೂ ಆದ್ಯತೆ ನೀಡಿರುವುದು ಶ್ಲಾಘನೀಯ. ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ಹೆಚ್ಚು ಅವಕಾಶ ಸಿಕ್ಕಂತಾಗಿದೆ. ಎಲ್ಲರಿಗೂ ಅಭಿನಂದನೆ ಎಂದು ತಿಳಿಸಿದ್ದಾರೆ.
ಯೋಗೇಶ್ವರ್ ಅಭಿನಂದನೆ
ಆಡಳಿತದ ಅನುಭವ ಇರುವ, ದಕ್ಷತೆ-ಪಾರದರ್ಶಕತೆ ಹಾಗೂ ಸಕ್ರಿಯವಾಗಿ ಉತ್ಸಾಹದಿಂದ ಕೆಲಸ ಮಾಡುತ್ತಿರುವ ಎಲ್ಲರಿಗೂ ಕೇಂದ್ರ ಸಚಿವ ಸ್ಥಾನ ನೀಡಿರುವುದು ಸಂತೋಷದ ಸಂಗತಿ. ನೂತನ ಸಚಿವರು ರಾಷ್ಟ್ರ ಅದರಲ್ಲೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಆಶಿಸುತ್ತೇನೆ. ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಪ್ರಸ್ತಾವನೆಗಳ ಮಂಜೂರಾತಿ ಸಂಬಂಧ ಗಮನಹರಿಸಬೇಕು ಎಂದು ಪರಿಸರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.