Congrees Conspiracy: ಹಾಸನದಿಂದ ರೇವಣ್ಣ ಕುಟುಂಬ ಹೊರಹಾಕಲು ಷಡ್ಯಂತ್ರ: ಸೂರಜ್ ರೇವಣ್ಣ
ನಮ್ಮ ಮೇಲೆ ಕುತಂತ್ರ, ಷಡ್ಯಂತ್ರ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ಕೊಡುವೆ
Team Udayavani, Aug 25, 2024, 11:56 PM IST
ಹಾಸನ: ಎಚ್.ಡಿ. ರೇವಣ್ಣ ಕುಟುಂಬವನ್ನು ಹೇಗಾದರೂ ಮಾಡಿ ಹಾಸನ ಜಿಲ್ಲೆಯ ರಾಜಕಾರಣದಿಂದ ಹೊರ ಹಾಕಬೇಕೆಂದು ರಾಜ್ಯದ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ. ಕಾಂಗ್ರೆಸ್‌ನವರ ಕುತಂತ್ರವನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ| ಸೂರಜ್ ರೇವಣ್ಣ ಹೇಳಿದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಅಶ್ಲೀಲ ವೀಡಿಯೋದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಬಿಡುಗಡೆ ಮಾಡಿದವರ ಮೇಲೆ ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂಬುದಕ್ಕೆ ಗೃಹಸಚಿವರು, ಡಿಐಜಿಯವರು ಉತ್ತರಿಸಬೇಕು. ಪೆನ್‌ಡ್ರೈವ್ ಹಂಚಿಕೆ ಮಾಡಿದವರಲ್ಲಿ ಯಾರೊಬ್ಬರನ್ನೂ ಬಂಧಿಸಿಲ್ಲ. ಇದರಲ್ಲೇ ಗೊತ್ತಾಗುತ್ತದೆ ಸರಕಾರ ಷಡ್ಯಂತ್ರ ನಡೆಸುತ್ತಿದೆ ಎಂಬುದು. ಸದ್ಯದಲ್ಲೇ ಇದೆಲ್ಲವನ್ನು ಬಿಚ್ಚಿಡುತ್ತೇನೆ ಎಂದರು.
ನಮ್ಮ ಮೇಲೆ ಕುತಂತ್ರ, ಷಡ್ಯಂತ್ರ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸರಿಯಾದ ಉತ್ತರ ಕೊಡುತ್ತೇನೆ. ರೇವಣ್ಣನವರು ಯಾವ ಪ್ರಕರಣದಲ್ಲೂ ಸಂಬಂಧವೇ ಇಲ್ಲ. ಅವರನ್ನೂ ಜೈಲಿಗೆ ಹಾಕಿಸಿದರು. ಭವಾನಿ ರೇವಣ್ಣ ಟೆರರಿಸ್ಟಾ ?, ಅವರನ್ನು ಜೈಲಿಗೆ ಕಳುಹಿಸಲು 50 ಲಕ್ಷ ರೂ. ಸರಕಾರದ ಹಣ ಖರ್ಚು ಮಾಡಬೇಕಾ? ಎಂದು ಸರಕಾರದ ವಿರುದ್ಧ ಡಾ| ಸೂರಜ್ ರೇವಣ್ಣ ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.