Congress 40 ಪರ್ಸೆಂಟ್ ಕಮಿಷನ್ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ
ಸರಕಾರ ಅಧಿಕಾರ ಬಿಟ್ಟು ಕ್ಷಮೆ ಕೇಳಲಿ... ಸಮಜಾಯಿಷಿ ನೀಡಲು ಅವಕಾಶ ಇಲ್ಲ: ವಿಜಯೇಂದ್ರ
Team Udayavani, Nov 17, 2024, 1:18 AM IST
ಬೆಂಗಳೂರು: ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ 40 ಪರ್ಸೆಂಟ್ ಕಮಿಷನ್ ಎಂಬ ಅಪಪ್ರಚಾರ ನಡೆಸಿದ್ದ ಕಾಂಗ್ರೆಸ್ ಪಕ್ಷದ ಆರೋಪ ಆಧಾರರಹಿತ ಹಾಗೂ ಹಸಿ ಸುಳ್ಳು ಎಂಬುದು ಇದೀಗ ಲೋಕಾಯುಕ್ತ ತನಿಖೆಯಲ್ಲೇ ಬಹಿರಂಗವಾಗಿದೆ. ಭ್ರಷ್ಟತೆಯ ಕೂಪದಲ್ಲಿ ಮುಳುಗಿರುವ ಕಾಂಗ್ರೆಸ್ ಸರಕಾರ ಹೇಳುವುದೆಲ್ಲ ಸುಳ್ಳು, ಕಟ್ಟುಕಥೆ ಎಂಬುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.
“ಎಕ್ಸ್’ ವೇದಿಕೆಯಲ್ಲಿ ಈ ಸಂಬಂಧ ರಾಜ್ಯ ಸರಕಾರದ ವಿರುದ್ಧ ಆರೋಪಿಸಿರುವ ವಿಜಯೇಂದ್ರ, ನೈತಿಕ ಮಾರ್ಗದಲ್ಲಿ ಎಂದೂ ಅಧಿಕಾರ ಹಿಡಿಯದ ಕಾಂಗ್ರೆಸ್ಸಿಗರು ದುರ್ಮಾರ್ಗ, ಅನೀತಿ, ಅಪಪ್ರಚಾರ ಹಾಗೂ ಸಮಾಜ ಒಡೆಯುವ ಕೆಲಸಗಳಿಂದಲೇ ಅಧಿಕಾರ ಕಬಳಿಸಿ¨ªಾರೆ ಎಂಬುದಕ್ಕೆ ಪ್ರಸ್ತುತ ಬಹಿರಂಗವಾಗಿರುವ ಲೋಕಾಯುಕ್ತ ವರದಿ ಸಾಕ್ಷಿ ಹೇಳುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಜನತೆಯನ್ನು ವಂಚಿಸಿ, ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಈ ಕೂಡಲೇ ಅಧಿಕಾರದಿಂದ ಕೆಳಗಿಳಿದು ಕರ್ನಾಟಕದ ಜನತೆಯ ಕ್ಷಮೆ ಯಾಚಿಸಲಿ. ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿರುವಾಗಲೇ ಲೋಕಾಯುಕ್ತ ತನಿಖಾ ವರದಿ ಬಹಿರಂಗವಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಕಾಂಗ್ರೆಸ್ಸಿಗರು ಇನ್ನೇನೂ ಸಮಜಾಯಿಷಿ ನೀಡುವುದಕ್ಕಾಗಲಿ, ವಿತಂಡವಾದ ಮಾಡುವುದಕ್ಕಾಗಲಿ ಅವಕಾಶವೇ ಇಲ್ಲ ಎಂದಿದ್ದಾರೆ.
ಇದು 80 ಪರ್ಸೆಂಟ್ ಸರಕಾರ
ಈಗ ರಾಜ್ಯದಲ್ಲಿರುವುದು 80 ಪರ್ಸೆಂಟ್ ಕಾಂಗ್ರೆಸ್ ಸರಕಾರ. ಒಂದರ ಮೇಲೊಂದು ಹಗರಣಗಳ ತನಿಖೆಯ ಕಾನೂನಿನ ಉರುಳು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರಕಾರವನ್ನು ಸುತ್ತಿಕೊಳ್ಳುತ್ತಿದೆ ಎಂದಿದ್ದಾರೆ.
40 ಪರ್ಸೆಂಟ್ ಕಮಿಷನ್ ಆರೋಪ ಚುನಾವಣೆಗಾಗಿ ಸೃಷ್ಟಿ ಮಾಡಿದ್ದ ಸುಳ್ಳು. ಅಪಪ್ರಚಾರ ಎಂದು ಹಲವಾರು ಕಾಂಗ್ರೆಸ್ ನಾಯಕರು ಈಗಾಗಲೇ ಒಪ್ಪಿಕೊಂಡಿದ್ದಾರೆ. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಬಿಬಿಎಂಪಿಗೆ ಸಂಬಂಧಿಸಿದಂತೆ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪಗಳು ಶುದ್ಧ ಸುಳ್ಳೆಂದು ಲೋಕಾಯುಕ್ತ ತನಿಖಾ ಅಧಿಕಾರಿಗಳು ಸಲ್ಲಿಸಿರುವ ವರದಿಯಲ್ಲಿ ಬಹಿರಂಗವಾಗಿದೆ. ಈ ಸರಕಾರವನ್ನು, ಕನ್ನಡಿಗರು ಗಂಟು ಮೂಟೆ ಕಟ್ಟಿ ಶಾಶ್ವತವಾಗಿ ಮನೆಗೆ ಕಳುಹಿಸುವ ದಿನ ಬಹಳ ದೂರವಿಲ್ಲ.
-ಆರ್. ಅಶೋಕ್, ವಿಧಾನಸಭೆ ವಿಪಕ್ಷ ನಾಯಕ
ಇಡಿ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದ ಕಾಂಗ್ರೆಸ್ ನಾಯಕರು ಈಗ ಬೇಷರತ್ ಕ್ಷಮೆ ಯಾಚಿಸಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದ ಮಹಾ ಸಮುದ್ರವಾಗಿದ್ದು, ಹೈಕಮಾಂಡ್ ಪೋಷಣೆಗೆ ಈಗ 100 ಪರ್ಸೆಂಟ್ ಭ್ರಷ್ಟಾಚಾರ ನಡೆಸಲಾಗುತ್ತಿದೆ.
-ವಿ. ಸುನಿಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.