Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
ಪ್ರತಿದಿನ ಒಂದೊಂದು ಇಲಾಖೆ ಹಗರಣ ಹೊರಬರುತ್ತಿದೆ, ಸಿದ್ಧಗಂಗಾ ಶ್ರೀಗಳಿಂದ ಆಶೀರ್ವಾದ ಪಡೆದ ಕರಂದ್ಲಾಜೆ
Team Udayavani, Jul 20, 2024, 8:59 PM IST
ತುಮಕೂರು ಗ್ರಾಮಾಂತರ: ಕಾಂಗ್ರೆಸ್ ಸರ್ಕಾರದಲ್ಲಿನ ಯಾವುದೇ ಇಲಾಖೆ, ನಿಗಮದಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದ್ದು, ರಾಜ್ಯದಲ್ಲಿರುವುದು ಗೋಲ್ಮಾಲ್ ಕಾಂಗ್ರೆಸ್ ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದರು.
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಸಿದ್ಧಗಂಗಾ ಮಠದ ಅಧ್ಯಕ್ಷ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿದಿನ ಒಂದೊಂದು ಇಲಾಖೆ ಅವ್ಯವಹಾರಗಳು ಹೊರ ಬರುತ್ತಿದೆ ಎಂದು ಹೇಳಿದರು.
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳುವವರೆಗೂ ಪ್ರಕರಣ ಬಹಿರಂಗವಾಗಿರಲಿಲ್ಲ. ಆದರೆ, ಇವತ್ತು ಇಡಿ ತನಿಖೆಯಿಂದ ಹಗರಣ ಆಗಿದೆ ಎಂಬ ಸತ್ಯ ಹೊರಬಂದಿದೆ. 187 ಕೋಟಿ ರೂ. ಹಣ ಪರಿಶಿಷ್ಟ ವರ್ಗದ ಜನರ ಅಭಿವೃದ್ಧಿಗೆ ಬಳಕೆ ಆಗಬೇಕಿತ್ತು. ಆದರೆ, ಹೈದ್ರಾಬಾದ್‌ನಲ್ಲಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿ ಚುನಾವಣೆಗೆ ಬಳಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಲಿ:
ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮೂಡಾದಲ್ಲಿ ಹಗರಣ ಮಾಡಿದ್ದಾರೆ. ಹಾಗಾಗಿ ಅವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಮೂಡಾ ಪ್ರಕರಣದ ಎಲ್ಲಾ ಫೈಲ್‌ಗಳು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣವನ್ನು ಮುಚ್ಚಿ ಹಾಕುತ್ತಾರೆ. ಹೀಗಾಗಿಯೇ, ದೇಸಾಯಿ ಕಮಿಟಿಯನ್ನು ಮಾಡಿದ್ದಾರೆ. ಕೆಂಪಣ್ಣ ಕಮಿಟಿ ಮಾಡಿದ್ರು ಅದು ಏನಾಯ್ತು…? ಗೊತ್ತಿಲ್ಲ. ಆ ಕಮಿಟಿಯ ರಿಪೊರ್ಟ್ ಬಹಿರಂಗವೇ ಆಗಲಿಲ್ಲ. ಅದಕ್ಕಾಗಿಯೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಮತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯ ಮಾಡುತ್ತಿದ್ದೇವೆ ಎಂದರು.
ಸೋಮವಾರದಿಂದ ಬಜೆಟ್ ಅಧಿವೇಶನ:
ನಾನು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದೇನೆ. ಸೋಮವಾರದಿಂದ ಮೋದಿ ನೇತೃತ್ವದ ಮೂರನೇ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಕೆಲಸ ಮಾಡುವ ಶಕ್ತಿ ಸಿಗಬೇಕು ಎಂಬ ಆಶಯದಿಂದ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು.
ಶಾಸಕರಾದ ಜ್ಯೋತಿಗಣೇಶ್, ಸುರೇಶ್‌ಗೌಡ, ಬಿಜೆಪಿ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.