Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ
ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ
Team Udayavani, Jul 6, 2024, 1:36 AM IST
ಮೈಸೂರು/ಮಂಡ್ಯ: ಮಂಡ್ಯದಲ್ಲಿ ಜನತಾದರ್ಶನ ವಿಚಾರ ದಲ್ಲಿ ರಾಜ್ಯ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಜನತಾ ದರ್ಶನದ ಕುರಿತು ಸಚಿವ ಸಂಪುಟದ ಸಭೆಯಲ್ಲಿ ದೊಡ್ಡ ಚರ್ಚೆ ಮಾಡಿದ್ದಾರೆ. ಅಧಿಕಾರಿಗಳನ್ನು ನಿರ್ಬಂಧಿಸಲು ಸುತ್ತೋಲೆ ಹೊರಡಿಸಲಾಗಿದೆ. ಆದರೆ, ನೀವು ಅಧಿಕಾರಿಗಳನ್ನು ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ಈ ಹಿಂದೆ ಬೆಂಗಳೂರು ಗ್ರಾಮಾಂತರ ಸಂಸದರು ಈ ರೀತಿ ಸಭೆ ಮಾಡಿದಾಗ ಏನು ಮಾಡುತ್ತಿದ್ದೀರಿ? ಚುನಾವಣೆಗೆ ಬಂದು ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ದೀರಿ? ಈಗ ಜನತಾದರ್ಶನ ತಪ್ಪಿಸಲು ಸರಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮಧ್ಯಾಹ್ನ 12.20ಕ್ಕೆ ಮಂಡ್ಯಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು ಸಂಜೆವರೆಗೂ ಏಕಾಂಗಿಯಾಗಿ ಸಾವ ಧಾನ ವಾಗಿ ಸಾರ್ವಜನಿಕರಿಂದ ಅಹ ವಾಲು ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಿದರು.
“ಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಜನತಾ ದರ್ಶನ ಕಾರ್ಯ ಕ್ರಮ ಮಾಡ ಬೇಕೆಂಬುದು ನಿಯಮ. ಅದ ರಂತೆ ಅಧಿಕಾರಿಗಳು ನಡೆದು ಕೊಂಡಿ ದ್ದಾರೆ. ಹಿಂದೆ ಬಿಜೆಪಿ ಸರಕಾರ ಇದ್ದಾಗ ವಿಪಕ್ಷದ ನಾಯಕ ರಿಗೂ ಪರಿಶೀಲನ ಸಭೆ ನಡೆ ಸುವು ದಕ್ಕೆ ಅವಕಾಶ ಕೊಟ್ಟಿರ ಲಿಲ್ಲ. ಈ ಬಗ್ಗೆ ಕುಮಾರ ಸ್ವಾಮಿ ಏಕೆ ಮಾತ ನಾಡುವುದಿಲ್ಲ?”
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿ¨ªಾರೆ? ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರಶ್ನಿಸಿದಾಗ, ನಾವು ದಿಲ್ಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅಧಿಕಾರಿಗಳ ಗೈರು ತಪ್ಪು: ಸತೀಶ್ ಜಾರಕಿಹೊಳಿ
ಬೆಂಗಳೂರು: ಕೇಂದ್ರ ಸಚಿವರು ಹಾಗೂ ಸಂಸದರು ಕರೆದ ಸಭೆಗೆ ಅಧಿಕಾರಿಗಳು ಗೈರು ಹಾಜರಾದರೆ ತಪ್ಪಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರ ಜತೆ ಮಾತ ನಾಡಿದ ಅವರು, ಈ ಸಭೆಗೆ ಅಧಿಕಾರಿಗಳು ಹೋಗಲೇಬೇಕು. ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಸಭೆ ಕರೆದಾಗ ಡಿಸಿ ಹಾಗೂ ಎಸ್‌ಪಿ ಹೋಗಿದ್ದರು. ಆದರೆ, ಮಂಡ್ಯದಲ್ಲಿ ಯಾಕೆ ಅಧಿಕಾರಿಗಳು ಹೋಗಿಲ್ಲ ಎಂಬುದು ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.