Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್.ಡಿ.ದೇವೇಗೌಡ ಭವಿಷ್ಯ
ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವುದಕ್ಕೂ ಕಾಸಿಲ್ಲ, ಸರಕಾರಕ್ಕೆ ಜನ ಉಗಿಯುತ್ತಿದ್ದಾರೆ: ಮಾಜಿ ಪ್ರಧಾನಿ
Team Udayavani, Nov 11, 2024, 6:46 AM IST
ರಾಮನಗರ: ರಾಜ್ಯ ಸರಕಾರ ದಿವಾಳಿಯಾಗಿದ್ದು ಉಪ ಚುನಾವಣೆ ಮುಗಿದ ಬಳಿಕ ಗೃಹಲಕ್ಷ್ಮಿ ಗ್ಯಾರಂಟಿಯನ್ನು ಸ್ಥಗಿತಗೊಳಿಸುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಚನ್ನಪಟ್ಟಣದಲ್ಲಿ 5ನೇ ದಿನ ತಮ್ಮ ಮೊಮ್ಮಗ ನಿಖೀಲ್ ಪರವಾಗಿ ಚುನಾವಣ ಪ್ರಚಾರ ನಡೆಸಿ, 5 ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದು ಕೊಳ್ಳಲಿದ್ದು ಇದೀಗ ಉಪಚುನಾವಣೆ ಎಂಬ ಕಾರಣಕ್ಕೆ ಚನ್ನಪಟ್ಟಣ ಕ್ಷೇತ್ರದ ಮಹಿಳೆ ಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿ ದ್ದಾರೆ. ರಾಜ್ಯ ಸರಕಾರ ದಿವಾಳಿ ಯಾಗಿದೆ. ಚುನಾವಣೆ ಮುಗಿದ ಮೇಲೆ ಹಣ ಜಮಾ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿ ದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವುದಕ್ಕೂ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರಕಾರ ಅಪರಿಮಿತವಾಗಿ ಚುನಾವಣ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಇಗ್ಗಲೂರು ಅಣೆಕಟ್ಟೆ ಕಟ್ಟಿದ ಒಬ್ಬ ರೈತನ ಮಗ ಈ ದೇವೇಗೌಡ ಇನ್ನೂ ಬದುಕಿದ್ದಾನೆ. ಅಣೆಕಟ್ಟೆ ಕಟ್ಟಲಿಲ್ಲ ಎಂದರೆ ಕೆರೆ ಗಳಿಗೆ ನೀರು ಹರಿಸಲು ಆಗುತ್ತಿತ್ತಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.