Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಚಂದ್ರು ವಾಗ್ದಾಳಿ, ಭಾಷಣ ಉಲ್ಲೇಖಿಸಿ ಬಿಜೆಪಿ ರಾಜ್ಯಾಧ್ಯಕ್ಷ ಚಾಟಿ-ವಿಡಿಯೋ ನೋಡಿ
Team Udayavani, Dec 22, 2024, 10:04 PM IST
ಬೆಂಗಳೂರು: ರಾಜ್ಯವನ್ನು ಅಭಿವೃದ್ಧಿ ಶೂನ್ಯವಾಗಿಸಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಿರಿಯ ಕಲಾವಿದ, ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕನ್ನಡ ಶಾಲೆಗಳು ಶಿಕ್ಷಕರು, ಸೌಕರ್ಯಗಳಿಲ್ಲದೆ ಮುಚ್ಚುವ ಸ್ಥಿತಿ ತಲುಪಿವೆ. ಈ ಸರಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಕನ್ನಡತನ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಈ ಭಾಷಣದ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ವಿಜಯೇಂದ್ರ, ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
ಮುಖ್ಯಮಂತ್ರಿ ಚಂದ್ರು ಹೇಳಿದ್ದೇನು?
ಮುಖ್ಯಮಂತ್ರಿ, ಸರಕಾರದ ವಿರುದ್ಧ ಸಚಿವರ ಮುಂದೆ ವಾಗ್ದಾಳಿ:
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಮುಖವಾಡ ಕಳಚಿ ಬಿದ್ದಿದೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ, ಇರುವ ಶಾಲೆಗಳು ದೈನೇಸಿ ಪರಿಸ್ಥಿತಿಯಲ್ಲಿವೆ, ಆ ಶಾಲೆಗಳಲ್ಲೂ ಶಿಕ್ಷಕರಿಲ್ಲ, 60,000 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ, ಸರಕಾರದ ಖಜಾನೆಯಲ್ಲಿ ದುಡ್ಡಿಲ್ಲ, ಸರಕಾರದ ಬಳಿ ಏನೇನೂ ಉಳಿದಿಲ್ಲ. ಇವರಿಂದ ಕನ್ನಡತನ ಹೇಗೆ ಉಳಿಯಲು ಸಾಧ್ಯ? ಎಂದು ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ.
ಈ ಸರಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ, ಶಿಕ್ಷಕರಿಗಂತೂ ಕೆಲಸ ಇಲ್ಲವೇ ಇಲ್ಲ ಎಂಬ ವಾಸ್ತವ ಪರಿಸ್ಥಿತಿಯನ್ನು ಬಿಚ್ಚಿಡಲಾಗಿದೆ. ಕರ್ನಾಟಕವನ್ನು ಅಭಿವೃದ್ಧಿ ಶೂನ್ಯ ರಾಜ್ಯವಾಗಿಸಿರುವ ಕಾಂಗ್ರೆಸ್ ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ ಎಂದು ದೂರಿದ್ದಾರೆ.
ಕನ್ನಡದ ಬಗ್ಗೆ ‘ಮೊಸಳೆ ಕಣ್ಣೀರು ಸುರಿಸುವ’ ಮುಖ್ಯಮಂತ್ರಿ @siddaramaiah ನವರ ನೇತೃತ್ವದ @INCKarnataka ಸರ್ಕಾರದ ಮುಖವಾಡ ಕಳಚಿಬಿದ್ದಿದೆ. ಕನ್ನಡ ಶಾಲೆಗಳು ಮುಚ್ಚುತ್ತಿವೆ, ಇರುವ ಶಾಲೆಗಳು ದೈನೇಸಿ ಪರಿಸ್ಥಿತಿಯಲ್ಲಿವೆ, ಆ ಶಾಲೆಗಳಲ್ಲೂ ಶಿಕ್ಷಕರಿಲ್ಲ, 60,000 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ, ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ,… pic.twitter.com/Ec7gzVjGEB
— Vijayendra Yediyurappa (@BYVijayendra) December 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.