Congress ಸರಕಾರಕ್ಕೆ ಹಗರಣದಿಂದ ಹೊರ ಬರಲಾಗುತ್ತಿಲ್ಲ: ವಿಪಕ್ಷ ನಾಯಕ ಅಶೋಕ್
Team Udayavani, Jul 22, 2024, 6:50 AM IST
ಸಕಲೇಶಪುರ: ರಾಜ್ಯ ಸರಕಾರದ ಪ್ರಮುಖ ಹಗರಣಗಳು ದಲಿತರನ್ನು ಲೂಟಿ ಮಾಡಿರುವುದೇ ಆಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರಕಾರವನ್ನು ಟೀಕಿಸಿದರು.
ತಾಲೂಕಿನಲ್ಲಿ ಮಳೆ ಹಾನಿ ಹಿನ್ನೆಲೆಯಲ್ಲಿ ಕೊಲ್ಲಹಳ್ಳಿ ಹಾಗೂ ದೊಡ್ಡತಪ್ಪಲೆ ಸಮೀಪ ರಾಷ್ಟ್ರೀಯ ಹೆದ್ದಾರಿ 75ರ ತಡೆಗೋಡೆ ಕುಸಿತ ವೀಕ್ಷಿಸಿದ ಅನಂತರ ಮಾತನಾಡಿ, ರಾಜ್ಯ ಸರಕಾರ ಹಗರಣಗಳಲ್ಲಿ ಸಿಲುಕಿಕೊಂಡಿದೆ. ಅದರಿಂದ ಹೊರಬರಲಾಗುತ್ತಿಲ್ಲ, ಮಳೆ ಹಾನಿಗೆ ಪರಿಹಾರ ಕೊಡಲು ಇನ್ನೂ ಶುರು ಮಾಡಿಲ್ಲ. ಈಗ ಗ್ಯಾರಂಟಿಗಾಗಿ ದಲಿತರ ಹಣ ಉಪಯೋಗಿಸಿಕೊಂಡಿ¨ªಾರೆ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ ಎಂಬ ಕಾರಣಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಮಾತನಾಡಲು ಬಿಡುತ್ತಿಲ್ಲ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಜಾತಿಯವನಾದರೆ ಕಳ್ಳತನ ಮಾಡಬಹುದು, ಈ ಜಾತಿಯವನಾದರೆ ಕಳ್ಳತನ ಮಾಡಬಾರದು ಎಂದು ಸಂವಿಧಾನದಲ್ಲಿ ಇದೆಯಾ? ಎಂದು ಪ್ರಶ್ನಿಸಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರೆ ಏನು ಪ್ರಯೋಜನ ಆಗಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಬಂದರೆ ಪ್ರಯೋಜನ ಆಗುತ್ತೆ ಅಂದರೆ ಅವರು ಮನೆ ಬಿಟ್ಟು ಬರಬೇಕು ಎಂದರು.
ಸಿದ್ದರಾಮಯ್ಯ ಸಿಬಿಐ ತನಿಖೆ ಎದುರಿಸಲಿ: ಸಚಿವ ಜೋಶಿ
ಬೆಳಗಾವಿ: ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸಬೇಕು. ಶುದ್ಧಹಸ್ತರಾದರೆ ಕಾಂಗ್ರೆಸ್ ಮತ್ತೆ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರ ಜತೆ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದಿದೆ. ನಿಮ್ಮ ಕಳ್ಳ ಸ್ನೇಹಿತರ ಹೆಸರಿಗೆ ಹಣ ವರ್ಗಾವಣೆ ಆಗಿದೆ. ಬ್ಯಾಂಕಿನ ಅಧಿಕಾರಿ ಶಾಮೀಲಾಗಿದ್ದರೆ ಕ್ರಮ ಆಗುತ್ತದೆ. ನೀವು ಏನೂ ತಪ್ಪು ಮಾಡಿಲ್ಲ ಎಂದಾದರೆ ಸಿಬಿಐಗೆ ಒಪ್ಪಿಸಲು ಏಕೆ ಹೆದರುತ್ತಿದ್ದೀರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.