Congress ಸರಕಾರ ಕೆಲವೇ ದಿನಗಳಲ್ಲಿ ಉರುಳಿ ಬೀಳುವ ಸಾಧ್ಯತೆ : ಕೆ.ಜಿ.ಬೋಪಯ್ಯ
ಉಚಿತ ಯೋಜನೆಗಳ ಮೂಲಕ ಸರಕಾರದಿಂದ ಶೂನ್ಯ ಪ್ರಗತಿ: ಮಾಜಿ ಶಾಸಕ ಆರೋಪ
Team Udayavani, Sep 1, 2024, 12:38 AM IST
ಮಡಿಕೇರಿ: ಭ್ರಷ್ಟಾಚಾರವನ್ನು ಹೆಗಲಿನಲ್ಲಿ ಹೊತ್ತುಕೊಂಡು ತೆವಳುತ್ತಾ ಸಾಗುತ್ತಿರುವ ರಾಜ್ಯ ಸರಕಾರ, ಈ ಭಾರವನ್ನು ಹೊತ್ತುಕೊಳ್ಳಲಾಗದೆ ಕೆಲವೇ ದಿನಗಳಲ್ಲಿ ಉರುಳಿ ಬೀಳುವ ಸಂಭವ ಹೆಚ್ಚಿದೆ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ಗೋಣಿಕೊಪ್ಪಲಿನ ಹರಿಶ್ಚಂದ್ರಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ಮಂಡಲ ಭಾರತೀಯ ಜನತಾ ಪಾರ್ಟಿ ಆಯೋಜಿಸಿದ್ದ “ಸದಸ್ಯತ್ವ ಅಭಿಯಾನ’ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಉಚಿತ ಯೋಜನೆಗಳ ಮೂಲಕ ಸರಕಾರ ಶೂನ್ಯ ಪ್ರಗತಿ ಕಾಣುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿಯನ್ನು ಕಳೆದುಕೊಂಡಿದೆ. ಬಿಜೆಪಿ ದೇಶ ಕಟ್ಟಲು ಹೊರಟಿದೆ, ದೇಶವನ್ನು ಆರ್ಥಿಕ ಪ್ರಗತಿಯ ಮೂಲಕ ಅಭಿವೃದ್ಧಿಯತ್ತ ಕೊಂಡೊಯ್ಯಲು ಕೇಂದ್ರ ಸರಕಾರ ಪಣತೊಟ್ಟಿದೆ. ರಾಜ್ಯ ಸರಕಾರ ಇಂತಹ ಜನಪರ ಚಟುವಟಿಕೆಗಳಿಗೆ ಸ್ಪಂದಿಸದೆ, ಈ ಹಿಂದೆ ಬಿಜೆಪಿ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗಾಗಿ ಮೀಸಲಿಟ್ಟಿದ್ದ ಅನುದಾನವನ್ನೆ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು.
ಕೊಡಗು ಜಿಲ್ಲೆಯಲ್ಲಿ ಯಾವುದೇ ಪ್ರಗತಿಪರ ಚಟುವಟಿಕೆ ಕಾಣಿಸುತ್ತಿಲ್ಲ. ಬದಲಾಗಿ ಹಳ್ಳಿಗೊಂದು ಇಸ್ಪೇಟ್ ಕ್ಲಬ್‌ಗಳು, ಮರಳು ದಂಧೆ, ಮರದ ದಂಧೆ, ಅಕ್ರಮ ಜಾನುವಾರು ಸಾಗಾಟ ಹೆಚ್ಚಾಗಿದೆ. 250 ಕೋಟಿ ಅನುದಾನ ತಂದಿದ್ದೇವೆ ಎಂದು ಶಾಸಕರು ಸುಳ್ಳು ಹೇಳುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಕೆ.ಜಿ.ಬೋಪಯ್ಯ ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಲಪ್ಪ, ಬಿಜೆಪಿಯ ವಿರಾಜಪೇಟೆ ಮಂಡಲ ಅಧ್ಯಕ್ಷ ಸುವಿನ್ ಗಣಪತಿ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ರಾಬಿನ್ ದೇವಯ್ಯ ಹಾಗೂ ಎಂ.ಎಂ.ರವೀಂದ್ರ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲೀರ ಚಲನ್ ಕುಮಾರ್, ಕಾರ್ಯ ದರ್ಶಿ ಗುಮ್ಮಟ್ಟಿರ ಕಿಲನ್ ಗಣಪತಿ, ಉಪಾಧ್ಯಕ್ಷ ಕುಂಞಂ ಗಡ ಅರುಣ್ ಭೀಮಯ್ಯ, ತಾಲೂಕು ಮಂಡಲ ಕಾರ್ಯದರ್ಶಿ ಮುದ್ದಿಯಡ ಮಂಜು ಗಣಪತಿ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.