Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ
ರಾಜ್ಯಪಾಲ ಗೆಹ್ಲೋತ್‌ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಕೆ, ರಾಯಚೂರು ಅರಣ್ಯದಲ್ಲಿ ಒತ್ತುವರಿ?
Team Udayavani, Oct 22, 2024, 7:50 AM IST
ಬೆಂಗಳೂರು: ಸಿದ್ದರಾಮಯ್ಯ ಸಚಿವ ಸಂಪುಟದ ಮತ್ತೋರ್ವ ಸಚಿವರ ವಿರುದ್ಧ ರಾಜ್ಯಪಾಲ ರಿಗೆ ದೂರು ಸಲ್ಲಿಕೆಯಾಗಿದ್ದು, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪತ್ನಿ ಕೃಷ್ಣವೇಣಿ ಹೆಸರಿನಲ್ಲಿ ರಾಯಚೂರು ಬಳಿ 5 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.
ಈ ಕುರಿತು ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರಿಗೆ 4 ಪುಟಗಳ ದೂರು ಕಳುಹಿಸಿಕೊಟ್ಟಿದ್ದು, ಅದ ರೊಂದಿಗೆ ಸಂಬಂಧಿಸಿದ ದಾಖಲೆಗಳನ್ನೂ ಲಗತ್ತಿಸಿದ್ದಾರೆ. ಅಲ್ಲದೆ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡುವಂತೆಯೂ ರಾಜ್ಯಪಾಲರಿಗೆ ಕೋರಿದ್ದಾರೆ.
ತೇಜೋವಧೆ ಹುನ್ನಾರ
ತಮ್ಮ ವಿರುದ್ಧ ರಾಜ್ಯಪಾಲರಿಗೆ ಸಲ್ಲಿಕೆಯಾಗಿರುವ ದೂರು ಕುರಿತು ಪ್ರತಿಕ್ರಿಯಿಸಿದ ಅವರು, ಇದು ನನ್ನ ತೇಜೋವಧೆಯ ಹುನ್ನಾರ. ನಾನು ಅಥವಾ ನನ್ನ ಕುಟುಂಬ ಅರಣ್ಯ ಒತ್ತುವರಿ ಮಾಡಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ. 1987ರಲ್ಲಿ ನಾನು ಯಾವುದೇ ಹುದ್ದೆಯಲ್ಲೂ ಇರಲಿಲ್ಲ. ಕೃಷಿಗಾಗಿ ಅಂದಿನ ಕಾಲದಲ್ಲಿ ನನ್ನ ಕುಟುಂಬದಿಂದ ಭೂಮಿಯನ್ನು ಖರೀದಿಸಲಾಗಿತ್ತು.
ಭೂಮಿ ಖರೀದಿಯ ಸಂದರ್ಭದಲ್ಲಿ ಕಂದಾಯ ದಾಖಲೆಗಳು, ಕ್ರಯಪತ್ರಗಳು ಹಾಗೂ ಇನ್ನಿತರ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಲಾಗಿತ್ತು. ಪರಿಶೀಲನೆಯ ಅನಂತರ ಮೂಲ ಜಮೀನಿನ ಮಾಲಕರಿಂದ ಭೂಮಿಯನ್ನು ಖರೀದಿಸಲಾಗಿತ್ತು. ನಾನು ಇದೇ ಮೊದಲ ಬಾರಿಗೆ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೊದಲ ಬಾರಿ ಶಾಸಕನಾಗಿದ್ದೂ ಕೂಡ 1999 ರಲ್ಲಿ. 1987ರಲ್ಲಿ ಪ್ರಭಾವ ಬೀರಲು ಹೇಗೆ ಸಾಧ್ಯ ಎಂದು ಸಚಿವರು ಪ್ರಶ್ನಿಸಿದರು.
“ಯಾವುದೇ ತಪ್ಪಿಲ್ಲದೇ ಇದ್ದರೂ ನನ್ನ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ತೇಜೋವಧೆ ಮಾಡುವ ಪ್ರಯತ್ನ ಇದು ಎನ್ನುವುದು ಸ್ಪಷ್ಟ. ಇತ್ತೀಚೆಗೆ ಸಚಿವರ ಮೇಲೆ ರಾಜ್ಯಪಾಲರಿಗೆ ದೂರು ನೀಡುವುದು ಒಂದು ಹವ್ಯಾಸವಾಗಿ ಬಿಟ್ಟಿದೆ.” -ಎನ್.ಎಸ್. ಬೋಸರಾಜು, ಸಣ್ಣ ನೀರಾವರಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.