Congress Government: ಮುಖ್ಯಮಂತ್ರಿ ಬದಲು ಪ್ರಶ್ನೆ ಉದ್ಭವಿಸಿಲ್ಲ: ಡಾ.ಎಂ.ಸಿ.ಸುಧಾಕರ್
ಶೀಘ್ರವೇ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್
Team Udayavani, Jan 14, 2025, 7:24 AM IST
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಎಲ್ಲಿಯೂ ಉದ್ಭವವಾಗಿಲ್ಲ. ಮುಖ್ಯಮಂತ್ರಿಗಳು ಬಹಳ ಗಟ್ಟಿಯಾಗಿ ಆಡಳಿತ ನಡೆಸುತ್ತಿದ್ದಾರೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟ ಮತ್ತು ಶಾಸಕರು ಒಗ್ಗಟ್ಟಾಗಿದ್ದೇವೆ. ಮುಖ್ಯಮಂತ್ರಿಗಳ ಬದಲಾವಣೆ ಎಂಬುದು ಮಾಧ್ಯಮ ಸೃಷ್ಟಿ. ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪ ಪಕ್ಷದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನನ್ನ ಒಂದೂವರೆ ವರ್ಷದ ಸಾಧನೆಯನ್ನು ಪಕ್ಷದ ಹಿರಿಯರಿಗೆ ಸಲ್ಲಿಸಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು. ಕೆಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರದಲ್ಲಿ ಮನಸೋ ಇಚ್ಚೆ 1 ಲಕ್ಷ ಕೋಟಿ ರೂಗಳ ಕಾಮಗಾರಿಯನ್ನು ಬಜೆಟ್ ಅನುದಾನವಿಲ್ಲದೇ ನೀಡಿದ್ದಾರೆ. ಹಣಕಾಸಿನ ಶಿಸ್ತನ್ನು ಬಿಜೆಪಿ ಸರ್ಕಾರ ಉಲ್ಲಂ ಸಿರುವುದು ನಮಗೆ ದೊಡ್ಡ ತಲೆ ನೋವಾಗಿದೆ. ಆದರೆ ನಮ್ಮ ಸರ್ಕಾರ ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಅವರು ಭರವಸೆ ನೀಡಿದರು.
ಅತಿಥಿ ಉಪನ್ಯಾಸಕರ ಸಮಸ್ಯೆಯ ಬಗ್ಗೆ ನ್ಯಾಯಾಲಯ ಆದೇಶಕ್ಕೆ ಕಾಯುತ್ತಿದ್ದೇವೆ. ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಠಿಣ ಷರತ್ತುಗಳಿರುವ ಹಿನ್ನೆಲೆಯಲ್ಲಿ ಸುಮಾರು ಐದೂವರೆ ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ನಾವು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಜನವರಿ 15 ರಂದು ಹೈಕೋರ್ಟ್‌ನಲ್ಲಿ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದರು.
ಶೀಘ್ರವೇ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ: ಉನ್ನತ ಶಿಕ್ಷಣ ಸಚಿವ
ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳ ದಿನಾಂಕಗಳನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು. ಕಳೆದ ಬಾರಿ ಸಿಇಟಿ ಪರೀಕ್ಷೆಯಲ್ಲಿ ಸಿಲಬಸ್ ಹೊರತಾದ ಪ್ರಶ್ನೆ ಕೇಳಿ ಗೊಂದಲವಾಗಿತ್ತು. ಈ ಬಾರಿ ಹಾಗಾಗದಂತೆ ಸಿಇಟಿ ಸಿಲಬಸ್ ಪ್ರಕಟಿಸಿ ಅದಕ್ಕೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಬಳಿಕ ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.
ಕೆಸೆಟ್-2024ರಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಕೆಇಎ, ಕೆಪಿಎಸ್‌ಸಿ, ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಸೇರಿದಂತೆ ಕಡಿಮೆ ಸಂಖ್ಯೆಯ ಅಭ್ಯರ್ಥಿಗಳಿರುವ ಪರೀಕ್ಷೆಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ರೂಪದಲ್ಲಿ ಜಾರಿಗೊಳಿಸುವ ಆಲೋಚನೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.