Congress Governmnet: ನಿಗಮ-ಮಂಡಳಿ ಸದಸ್ಯರ ಆಯ್ಕೆ ಸಮಿತಿ ಪರಿಷ್ಕರಣೆ
Team Udayavani, Jul 9, 2024, 11:24 PM IST
ಬೆಂಗಳೂರು: ರಾಜ್ಯದ ನಿಗಮ-ಮಂಡಳಿಗಳ ನಿರ್ದೇಶಕರು ಮತ್ತು ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ ಈ ಹಿಂದೆ ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯನ್ನು ಪರಿಷ್ಕರಣೆ ಮಾಡಿರುವ ಸರಕಾರ, ಪಕ್ಷದ ಪ್ರತಿನಿಧಿಗಳು ಸೇರಿದಂತೆ 11 ಜನರನ್ನು ಸೇರಿಸಿದೆ.
ಪರಿಷ್ಕೃತ ಸಮಿತಿಯಲ್ಲಿ ಡಾ.ಜಿ. ಪರಮೇಶ್ವರ ಅಧ್ಯಕ್ಷರಾಗಿದ್ದಾರೆ. ಸಚಿವರಾದ ಕೆ.ಜೆ. ಜಾರ್ಜ್, ಸತೀಶ ಜಾರಕಿಹೊಳಿ, ಸಂತೋಷ್ ಲಾಡ್, ಡಾ. ಶರಣಪ್ರಕಾಶ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಶಾಸಕರಾದ ಡಾ| ಎಂ. ರೂಪಕಲಾ, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಈ ಸಮಿತಿಯು ಕೂಡಲೇ ಕಾರ್ಯಪ್ರವೃತ್ತರಾಗಿ ತಿಂಗಳ ಒಳಗೆ ನಿಗಮ/ ಮಂಡಳಿಗಳಿಗೆ ನಿರ್ದೇಶಕರು-ಸದಸ್ಯರ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.