Congress Guarantee: 1.25 ಕೋಟಿ ಫ‌ಲಾನುಭವಿಗಳಿಗೆ ಗೃಹಲಕ್ಷ್ಮಿ ಪಾವತಿ

ಇಡಿಸಿಎಸ್‌ ಮೂಲಕ ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ ಜುಲೈ, ಆಗಸ್ಟ್‌ ಅನುದಾನ ಬಿಡುಗಡೆ

Team Udayavani, Oct 30, 2024, 6:55 AM IST

GRUHALAKHMI

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ 1.25 ಕೋಟಿ ಫ‌ಲಾನುಭವಿಗಳು ನೋಂದಣಿಯಾಗಿದ್ದು, 2023ರ ಆಗಸ್ಟ್‌ನಿಂದ 2024ರ ಜೂನ್‌ ವರೆಗೆ ಪ್ರತಿಯೊಬ್ಬರಿಗೂ ಮಾಸಿಕ ತಲಾ 2 ಸಾವಿರ ರೂ.ಗಳಂತೆ 22 ಸಾವಿರ ರೂ. ಪಾವತಿಸಲಾಗಿದೆ.

ಜುಲೈ ಹಾಗೂ ಆಗಸ್ಟ್‌ ತಿಂಗಳ ಧನ ಸಹಾಯವನ್ನು ಅರ್ಹ ಫ‌ಲಾನುಭವಿಗಳ ಖಾತೆಗಳಿಗೆ ಪಾವತಿಸಲು ಅನುದಾನ ಬಿಡುಗಡೆಗೊಳಿಸಿ ಆದೇಶಿಸಿದ್ದು, ಸಂಬಂಧಿಸಿದ ಬಿಲ್‌ಗ‌ಳನ್ನು ಸಿದ್ಧಪಡಿಸಿ ಖಜಾನೆಗೆ ಸಲ್ಲಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಕಳೆದ ಸೆ. 9ರಂದು “ಉದಯವಾಣಿ’ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ವರದಿಗೆ ಸಂಬಂಧಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು, ರಾಜ್ಯಾದ್ಯಂತ 1.82 ಲಕ್ಷ ಗೃಹಲಕ್ಷ್ಮೀಯರಿಗೆ ವಿವಿಧ ತಾಂತ್ರಿಕ ಸಮಸ್ಯೆಗಳಿಂದ ಧನಸಹಾಯ ಪಾವತಿಯಾಗಿಲ್ಲ ಎಂದು ವರದಿಯಾಗಿದ್ದು, ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಅಂತಿಮ ದಿನಾಂಕ ನಿಗದಿ ಆಗದೇ ಇರುವುದರಿಂದ ಪ್ರತೀ ದಿನವೂ ಅರ್ಜಿಗಳು ಬರುತ್ತಲೇ ಇರುತ್ತವೆ.

ಹೊಸ ಅರ್ಜಿಗಳ ನೋಂದಣಿ ಸಂದರ್ಭ ಬ್ಯಾಂಕ್‌ ಖಾತೆಗೆ ಆಧಾರ್‌ ವಿಲೀನ ಆಗದೇ ಇರುವುದು, ಎನ್‌ಪಿಸಿಐ ವಿಫ‌ಲಗೊಂಡಿರುವುದು, ಹೆಸರು ಮತ್ತಿತರ ವಿವರಗಳು ತಾಳೆ ಆಗದೇ ಇರುವುದು ಸೇರಿ ವಿವಿಧ ತಾಂತ್ರಿಕ ಸಮಸ್ಯೆಗಳು ಉದ್ಭವಿಸುತ್ತಿರುತ್ತವೆ. ಅಂತಹ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ (ಇಡಿಸಿಎಸ್‌) ದಿಂದ ಫ‌ಲಾನುಭವಿಗಳ ಮಾಹಿತಿ ಪಡೆದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ, ತಾಲೂಕು ಕಚೇರಿಗಳಿಗೆ ರವಾನಿಸಿ ಆಗಿಂದಾಗ್ಗೆ ಸಮಸ್ಯೆಗಳನ್ನು ಬಗೆಹರಿಸಲು ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾಗಿ ಫ‌ಲಾನುಭವಿಗಳ ಮಾಹಿತಿ ಕೊರತೆಯಿಂದ ಉಂಟಾಗುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮ ವಹಿಸುವಂತೆ ಎಲ್ಲ ಬ್ಯಾಂಕ್‌ಗಳಿಗೂ ನಿರ್ದೇಶನ ನೀಡಲಾಗಿದೆ.

ಟಾಪ್ ನ್ಯೂಸ್

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.