ರಾಜ್ಯದ ಜನರ ಮೇಲೆ ಸಾಲದ ಹೊರೆ ಹೆಚ್ಚಿಸಿದ ಕಾಂಗ್ರೆಸ್: ಬಿಜೆಪಿ
Team Udayavani, Jun 2, 2024, 12:04 AM IST
ಉಡುಪಿ: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿ ಆರ್ಥಿಕವಾಗಿ ದಿವಾಳಿ ಮಾಡಿರುವುದು ಮತ್ತು ಭ್ರಷ್ಟಾಚಾರವೇ ಕಾಂಗ್ರೆಸ್ ಸರಕಾರದ ಒಂದು ವರ್ಷದ ಸಾಧನೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ. 2022-23ರಲ್ಲಿ 5.05 ಲಕ್ಷ ಕೋಟಿ ರೂ. ಇದ್ದ ರಾಜ್ಯದ ಸಾಲದ ಪ್ರಮಾಣ 2024-25ರಲ್ಲಿ 6.57 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಶಾಸಕರಿಗೆ ಪ್ರದೇ ಶಾಭಿವೃದ್ಧಿ ಅನುದಾನ ಸರಿಯಾಗಿ ಬಾರದ ಕಾರಣ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದರು.
ವಾಲ್ಮೀಕಿ ನಿಗಮದ ಅಧಿಕಾರಿಯ ಆತ್ಮಹತ್ಯೆಯ ಹಿಂದೆ ಸಚಿವರ ಕೈವಾಡವಿದೆ. ಮುಖ್ಯಮಂತ್ರಿ ಸಿದ್ದರಾ ಮಯ್ಯ ತತ್‌ಕ್ಷಣವೇ ಸಚಿವರ ರಾಜೀನಾಮೆ ಪಡೆಯಬೇಕು. ಹಣ ವರ್ಗಾವಣೆಯೇ ಈ ಸರಕಾರದ ಸಾಧನೆಯಾಗಿದೆ ಎಂದರು.
ರಾಜ್ಯ ಸರಕಾರ ಬಿತ್ತನೆ ಬೀಜದ ದರವನ್ನು ಹೆಚ್ಚಳ ಮಾಡಿ ರೈತರಿಗೆ ಬರೆ ಎಳೆದಿದೆ. ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ. ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿಲ್ಲ. ಒಂದು ವರ್ಷದ ಸಂಭ್ರಮಾಚರಣೆ ಮಾಡುವ ನೈತಿಕತೆ ಸರಕಾರಕ್ಕೆ ಇಲ್ಲ ಎಂದರಲ್ಲದೇ, ನೀತಿ ಸಂಹಿತೆ ಮುಗಿದ ಅನಂತರ ಪ್ರತಿಭಟನೆ ನಡೆಸಲಿದ್ದೇವೆ.
ಜಿಲ್ಲಾ ವಕ್ತಾರರಾದ ವಿಜಯ ಕುಮಾರ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.
ಎನ್‌ಡಿಎ ಒಕ್ಕೂಟಕ್ಕೆ ಗೆಲುವು: ಗುರ್ಮೆ
ಕಾಪು: ವಿಧಾನಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಪಕ್ಷದ ಕಾಪು ಮಂಡಲ ಕಚೇರಿ ಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರ ಉಪಸ್ಥಿತಿ ಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಾತ್ಯತೀತ ಜನತಾ ದಳ (ಜೆಡಿಎಸ್) ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಉಡುಪಿ – ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಸಹಿತ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ
Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.