Congress Leaders: ಕೇಂದ್ರ ಸಚಿವ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿ ಇಳಿಸಲಾಗಲ್ಲ: ನಿಖಿಲ್
ಶೀಘ್ರ ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿ
Team Udayavani, Aug 26, 2024, 12:35 AM IST
ಬೆಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರನ್ನು ಯಾವ ರೀತಿ ಕಟ್ಟಿ ಹಾಕಬೇಕು ಎಂದು ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿದ್ದಾರೆ. ಆದರೆ ಇವರ್ಯಾರೂ ಸಹ ಕುಮಾರಸ್ವಾಮಿ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಗಣಿಗಾರಿಕೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಈಗ ಯಾಕೆ ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ? ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ಸಹಿ ಹಾಕಿಲ್ಲ. ಸರಕಾರ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಅಷ್ಟೇ. ಮುಡಾ ಹಗರಣ ಮುಚ್ಚಿಹಾಕುವ ಯೋಜನೆಯಷ್ಟೆ ಎಂದು ಆರೋಪಿಸಿದರು.
ಚನ್ನಪಟ್ಟಣ ಉಪ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಯಾವುದೇ ತೀರ್ಮಾನ, ಚರ್ಚೆ ಬೀದಿಯಲ್ಲಿ ಮಾಡೋದು ಸೂಕ್ತ ಅಲ್ಲ. ದಿಲ್ಲಿಯ ಬಿಜೆಪಿ ಹೈಕಮಾಂಡ್ ಮತ್ತು ನಮ್ಮ ನಾಯಕರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಕ್ಷೇತ್ರದ ವರದಿ ಸಹ ಹೈಕಮಾಂಡ್ ಕೈಸೇರಿದೆ. ಕೆಲವೇ ದಿನಗಳಲ್ಲಿ ಎನ್‌ಡಿಎ ಅಭ್ಯರ್ಥಿ ಘೋಷಣೆ ಆಗಲಿದೆ ಎಂದರು.
ಚನ್ನಪಟ್ಟಣದಲ್ಲಿ ಕಳೆದ 2 ಬಾರಿ ಜನ ಆಶೀರ್ವಾದ ಮಾಡಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ್ದಾರೆ. ಹಾಗಾಗಿ ಪಕ್ಷದ ಧ್ವನಿಯಾಗಿ ಪಕ್ಷ ಕಾರ್ಯಕರ್ತನಾಗಿ ಕೆಲಸ ಮಾಡುವುದು ನನ್ನ ಜವಾಬ್ದಾರಿ. ಚನ್ನಪಟ್ಟಣ ತಾಲೂಕು ಜೆಡಿಎಸ್ ಪಕ್ಷದ ಭದ್ರಕೋಟೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.