ಗೋಹತ್ಯೆ, ಲವ್ ಜಿಹಾದ್ ವಿಧೇಯಕ ಮಂಡನೆಗೆ ವಿರೋಧಿಸಲು ಕಾಂಗ್ರೆಸ್ ನಿರ್ಧಾರ
Team Udayavani, Dec 6, 2020, 9:17 PM IST
ಬೆಂಗಳೂರು: ಸೋಮವಾರದಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಪ್ರತಿಷ್ಟಿತ ಗೋಹತ್ಯೆ ನಿಷೇಧ, ಲವ್ ಜಿಹಾದ್ ವಿಧೇಯಕಗಳು ಮತ್ತು ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗಳನ್ನು ಮಂಡನೆಗೆ ಅವಕಾಶ ನೀಡದಿರಲು ಕಾಂಗ್ರೆಸ್ ನಾಯಕರ ಸಭೆಯಲ್ಲಿ ಭಾನುವಾರ ನಿರ್ಧರಿಸಲಾಗಿದೆ.
ಅಲ್ಲದೆ ವಿಧಾನಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಅವಕಾಶ ದೊರೆಯದಂತೆ ಕಾರ್ಯತಂತ್ರ ರೂಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದಲ್ಲಿ ಎರಡೂ ಸದನಗಳ ಹಿರಿಯ ನಾಯಕರ ಸಭೆಯಲ್ಲಿ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳು ಹಾಗೂ ರಾಜ್ಯ ಸರ್ಕಾರ ಕೆಲವು ನಿರ್ಧಾರಗಳನ್ನು ವಿರೋಧಿಸುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಗ್ರಾಪ ಪಂಚಾಯತಿ ಚುನಾವಣೆ ಘೋಷಣೆಯಾಗಿರುವುದರಿಂದ ಲವ್ ಜಿಹಾದ್, ಗೊಹತ್ಯೆ ನಿಷೇಧ, ಭೂ ಸುಧಾರಣೆ ಕಾಯ್ದೆಗಳ ಮಂಡನೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೊಸ ಕಾಯ್ದೆ ಜಾರಿ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ ಈಗ ಕಾಯ್ದೆ ಜಾರಿಗೆ ತರಬಾರದು ಎಂದು ಹೇಳಿದರು.
ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ಬಿಜೆಪಿಯವರು ಹೊಸ ಸಮಸ್ಯೆಗಳನ್ನು ಹುಟ್ಟು ಹಾಕಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮೂರು ಸಾರಿ ಪ್ರವಾಹ ಬಂದಿದೆ. ಇದುವರೆಗೂ ಪರಿಹಾರ ನೀಡಿಲ್ಲ. ಕಳೆದ ವರ್ಷದ ಪರಹಾರವನ್ನೂ ಪೂರ್ಣವಾಗಿ ನೀಡಿಲ್ಲ. ಅನೇಕ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡಿಲ್ಲ. ವಿದ್ಯುತ್ ಬೆಲೆ ಹೆಚ್ಚಳ ಮಾಡಿದ್ದಾರೆ. ಅಗತ್ಯ ಇಲ್ಲದಿದ್ದರೂ ವಿದ್ಯುತ್ ಖರಿದಿ ಮಾಡುತ್ತಿಧಾರೆ. ವಸತಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಮನೆಗಳನ್ನು ನೀಡಿಲ್ಲ. ಶಾಸಕ ಸಿದ್ದು ಸವದಿ ಮಹಿಳೆಯ ಮೇಲೆ ದೌರ್ಜನ್ಯ ಪ್ರಕರಣವನ್ನೂ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು.
ಸರ್ಕಾರ ಮಿತವ್ಯಯ್ಯದ ಬದಲು ದುಂಧು ವೆಚ್ಚಕ್ಕೆ ಮುಂದಾಗಿದೆ. ಸಾಲ ಹೆಚ್ಚು ಮಾಡಿಕೊಂಡಿದ್ದಾರೆ. ಸಂಬಳ ಕೊಡಲು ದುಡ್ಡಿಲ್ಲ. ಸಾಲದ ಬಡ್ಡಿ ಕಟ್ಟಲು ಸರ್ಕಾರದ ಬಳಿ ಹಣ ಇಲ್ಲ. ಹೀಗಾಗಿ ರಾಜ್ಯದ ಆರ್ಥಿಕ ಸ್ಥಿತಿಗತಿಯ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸುತ್ತೇವೆ. ಏಳು ದಿನದಲ್ಲಿ ಎಲ್ಲ ವಿಷಯಗಳನ್ನು ಚರ್ಚೆ ಮಾಡಲು ಆಗುವುದಿಲ್ಲ. ಗ್ರಾಮ ಪಂಚಾಯತಿ ಚುನಾವಣೆ ಇರುವುದರಿಂದ ಬಹಳ ಜನ ಶಾಸಕರು ಗೈರಾಗುವ ಸಾಧ್ಯತೆ ಇದೆ. ಸೋಮವಾರ ನಡೆಯುವ ಕಲಪಾ ಸಲಹಾ ಸಮಿತಿಯಲ್ಲಿ ಸರ್ಕಾರದ ನಡೆ ಆಧರಿಸಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಮಾಸ್ಕ್ ತಗೀರಿ
ಕಾಂಗ್ರೆಸ್ ಹಿರಿಯ ನಾಯಕರ ಸಭೆಯಲ್ಲಿ ಮಾಧ್ಯಮಗಳು ವಿಡಿಯೊ ಮಾಡುವ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಮಲ್ಲಕಾರ್ಜುನ ಖರ್ಗೆಯವರಿಗೆ ಮಾಸ್ಕ್ ತೆಗೆಯುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸನ್ನೆ ಮಾಡಿದ್ದಾರೆ. ಅವರು ಮಾಸ್ಕ್ ಹಾಕಿದ್ದರೂ ಖರ್ಗೆ ಅಂತ ಎಲ್ಲರಿಗೂ ಗೊತ್ತಾಗುತ್ತೆ ಬಿಡು ಎಂದು ಸಿದ್ದರಾಮಯ್ಯ ಹೇಳಿದರಂತೆ. ಅವರ ಮಾತು ಕೇಳಿ ಸಭೆಯಲ್ಲಿದ್ದವರು ನಗೆಗಡಲಲ್ಲಿ ತೇಲಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.