ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ; ಕಾಂಗ್ರೆಸ್ ಸದಸ್ಯೆ ಪ್ರತಿಭಟನೆ
Team Udayavani, Jun 8, 2022, 5:01 PM IST
ಸಾಗರ: ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ವೈಖರಿಯನ್ನು ಖಂಡಿಸಿ ಬುಧವಾರ ನಗರಸಭಾ ಕಾಂಗ್ರೆಸ್ ಸದಸ್ಯೆ ಮಧುಮಾಲತಿ ಪೌರಾಯುಕ್ತರ ಕೊಠಡಿ ಎದುರು ಏಕಾಂಗಿ ಧರಣಿ ನಡೆಸಿ, ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ ಘಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಧುಮಾಲತಿ ಕಲ್ಲಪ್ಪ, ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತೆ ಆಗಿದೆ. ನಮ್ಮ ವಾರ್ಡ್‌ನ ಸಾರ್ವಜನಿಕರೊಬ್ಬರು ಫಾರಂ ನಂ. 3 ಕೊಡಿಸುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಖಾತೆದಾರರಿಗೆ ನೀರಿನ ಕಂದಾಯ, ಮನೆ ಕಂದಾಯ ಪಾವತಿ ಮಾಡುವಂತೆ ತಿಳಿಸಲಾಗಿತ್ತು. ಅದೆಲ್ಲವನ್ನೂ ಪಾವತಿ ಮಾಡಿ ಫಾರಂ ನಂ. 3 ಕೊಡುವಂತೆ ವ್ಯವಸ್ಥಾಪಕ ವೆಂಕಟೇಶ್ ಅವರಿಗೆ ಮನವಿ ಮಾಡಲಾಗಿತ್ತು. ವ್ಯವಸ್ಥಾಪಕ ವೆಂಕಟೇಶ್ ಈ-ಸ್ವತ್ತು ಮಾಡಿಸಿದರೆ ಮಾತ್ರ ಫಾರಂ ನಂ. ೩ ಕೊಡುವುದಾಗಿ ತಿಳಿಸಿದರು. ನಾನು ಅಂತಹ ಸರ್ಕಾರಿ ಆದೇಶವಿದ್ದರೆ ಕೊಡಿ ಎಂದು ಕೇಳಿದ್ದೇನೆ. ಆಗ ವ್ಯವಸ್ಥಾಪಕ ವೆಂಕಟೇಶ್ ಅವರು ಸರ್ಕಾರಿ ಆದೇಶವಲ್ಲ, ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ಹೇಳಿದರು. ನಾನು ಜಿಲ್ಲಾಧಿಕಾರಿಗಳ ಸುತ್ತೋಲೆ ತೋರಿಸಿ ಎಂದು ಕೇಳಿದಾಗ ವೆಂಕಟೇಶ್ ಅವರು ನಾನು ಸದಸ್ಯೆ ಎನ್ನುವುದನ್ನು ಸಹ ನೋಡದೆ ದಬಾಯಿಸಿದ್ದಾರೆ ಎಂದು ದೂರಿದರು.
ನಾನು ಐದಾರು ಬಾರಿ ನಗರಸಭೆಗೆ ಅಲೆದಾಡಿದರೂ ಸಿಗದ ಫಾರಂ ನಂ. 3 ಒಬ್ಬ ಮೇಸ್ತ್ರಿ ತಂದು ನಮ್ಮ ವಾರ್ಡ್‌ನ ಖಾತೆದಾರರಿಗೆ ಕೊಟ್ಟಿದ್ದಾರೆ. ಹಾಗಾದರೆ ನಗರಸಭೆ ಸದಸ್ಯರ ಮಾತಿಗೆ ಬೆಲೆ ಇಲ್ಲವೆ ಎಂದು ಪ್ರಶ್ನಿಸಿದ ಅವರು, ನಗರಸಭೆಯಲ್ಲಿ ಹಣ ಕೊಟ್ಟರೆ ಏನು ಬೇಕಾದರೂ ಮಾಡಿ ಕೊಡುತ್ತಾರೆ. ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಬೆಲೆ ಇಲ್ಲದಂತೆ ಆಗಿದೆ. ಸದಸ್ಯರಿಗೆ ಆಗುತ್ತಿರುವ ಅವಮಾನವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಾಸಕರು ಮತ್ತು ನಗರಸಭೆ ಅಧ್ಯಕ್ಷರು ಸ್ಥಳಕ್ಕೆ ಬಂದು ನ್ಯಾಯ ಕೊಡಿಸುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದು ಕುಳಿತುಕೊಂಡರು.
ಇದನ್ನೂ ಓದಿ : ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಾಪಸ್ ಪ್ರಶ್ನೆಯೇ ಇಲ್ಲ: ಹೆಚ್.ಡಿ.ಕುಮಾರಸ್ವಾಮಿ
ಕ್ರಮದ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಬಂದ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಚುನಾಯಿತ ಪ್ರತಿನಿಧಿಗಳಿಗೆ ಅಗೌರವ ತರುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಜೊತೆಗೆ ಮುಂದೆ ಇಂತಹ ಘಟನೆ ನಡೆಯದಂತೆ ಗಮನ ಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್, ನಗರಸಭೆ ಸದಸ್ಯರಾದ ಸೈಯದ್ ಜಾಕೀರ್, ಶಂಕರ್ ಅಳ್ವಿಕೋಡು, ಭಾವನಾ ಸಂತೋಷ್, ಸತೀಶ್ ಕೆ., ಪೌರಾಯುಕ್ತ ರಾಜು ಬಣಕಾರ್, ಪ್ರಮುಖರಾದ ಅನ್ವರ್ ಭಾಷಾ, ತಾರಾಮೂರ್ತಿ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.