ಇಬ್ಬರಿಗೂ ನ್ಯಾಯ? ಡಿಕೆಶಿ, ಎಂಬಿಪಿ ಇಬ್ಬರಿಗೂ ಹೊಣೆಗಾರಿಕೆ?
Team Udayavani, Jan 16, 2020, 7:10 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕತ್ವಕ್ಕಾಗಿ ಎರಡು ಪ್ರಬಲ ಸಮುದಾಯಗಳ ನಾಯಕರಾದ ಎಂ. ಬಿ. ಪಾಟೀಲ್ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಗೊಳ್ಳುತ್ತಿರುವ ಪೈಪೋಟಿಯನ್ನು ತಪ್ಪಿಸಲು ಹೈಕಮಾಂಡ್ ಮಧ್ಯಮ ಮಾರ್ಗವೊಂದನ್ನು ಹುಡುಕಲು ಮುಂದಾಗಿದೆ.
ಜಾತಿ ಮತ್ತು ಪ್ರಾದೇಶಿಕ ಸೂತ್ರವನ್ನು ಮುಂದಿಟ್ಟುಕೊಂಡು ಇಬ್ಬರಿಗೂ “ಸಮಾನ ನ್ಯಾಯ’ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಆಲೋಚಿಸುತ್ತಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಈ ನಡುವೆ, ಬುಧವಾರ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.
ಇದರೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕತ್ವದ ಗೊಂದಲ ಅಂತಿಮ ಹಂತಕ್ಕೆ ತಲುಪಿದ್ದು, ಕೆಪಿಸಿಸಿ ಅಧ್ಯಕ್ಷ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿಪಕ್ಷ ನಾಯಕನ ಹುದ್ದೆಗಳಿಗೆ ವಾರಾಂತ್ಯದೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಕೆಪಿಸಿಸಿ ಅಧ್ಯಕ್ಷರ ಜತೆಗೆ ವಿಭಾಗವಾರು ಕಾರ್ಯಾಧ್ಯಕ್ಷರ ನೇಮಕವೂ ಆಗುವ ಸಾಧ್ಯತೆ ಇರುವುದರಿಂದ ಯಾರೇ ಅಧ್ಯಕ್ಷರಾದರೂ ಅವರನ್ನು ನಿಯಂತ್ರಿಸಲು ಜಾತಿ ಮತ್ತು ಪ್ರಾದೇಶಿಕವಾರು ಕಾರ್ಯಾಧ್ಯಕ್ಷರ ನೇಮಕ ಮಾಡಲು ಹೈಕಮಾಂಡ್ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಕಾರ್ಯಾಧ್ಯಕ್ಷರ ಹುದ್ದೆಗೆ ಒತ್ತಡ
ನಾಲ್ಕು ಕಂದಾಯ ವಿಭಾಗಗಳಿಗೆ ಕಾರ್ಯಾ ಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಹೈಕಮಾಂಡ್ ಎಲ್ಲ ಸಮುದಾಯಗಳಿಗೂ ಆದ್ಯತೆ ನೀಡುವ ಸಾಧ್ಯತೆ ಇದೆ. ಈಗಾಗಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಈಶ್ವರ್ ಖಂಡ್ರೆ ಕಾರ್ಯಾಧ್ಯಕ್ಷರಾಗಿದ್ದು, ಮುಂಬಯಿ ಕರ್ನಾಟಕಕ್ಕೆ ಸತೀಶ್ ಜಾರಕಿಹೊಳಿ ಅಥವಾ ಆರ್.ಬಿ. ತಿಮ್ಮಾಪುರ್, ಮೈಸೂರು ಪ್ರಾಂತ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಆದ್ಯತೆ ನೀಡಬೇಕೆಂಬ ಕಾರಣಕ್ಕೆ ಯು.ಟಿ. ಖಾದರ್ ಹಾಗೂ ತನ್ವೀರ್ ಸೇs… ಹೆಸರು ಪ್ರಸ್ತಾವವಾಗಿವೆ. ಬೆಂಗಳೂರು ವಿಭಾಗಕ್ಕೆ ಕೃಷ್ಣ ಬೈರೇಗೌಡ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸೋನಿಯಾರತ್ತ ರಾಹುಲ್ ಬೆಟ್ಟು ?
ಮಂಗಳವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಎದುರು ಸಿದ್ದರಾಮಯ್ಯ ಅವರು ಎಂ.ಬಿ.ಪಾಟೀಲ್ ಪರ ಬಲವಾಗಿ ವಾದ ಮಾಡಿ, ಜಾತಿ ಮತ್ತು ಪ್ರಾದೇಶಿಕ ಆಧಾರದಲ್ಲಿ ಎಂ.ಬಿ.ಪಾಟೀಲರ ನೇಮಕ ಪಕ್ಷಕ್ಕೆ ದೊಡ್ಡ ಶಕ್ತಿ ನೀಡುತ್ತದೆ ಎಂದು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ. ಅದೇ ವಾದವನ್ನು ಬುಧವಾರ ರಾಹುಲ್ ಗಾಂಧಿ ಮುಂದೆಯೂ ಮಂಡಿಸಿದ್ದಾರೆ ಎಂದು ತಿಳಿದುಬಂದಿದೆ.
ಬುಧವಾರ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರೊಂದಿಗೆ 15 ನಿಮಿಷ ಮಾತುಕತೆ ನಡೆಸಿದ್ದಾರೆ. ಆದರೆ ರಾಹುಲ್ ಗಾಂಧಿ ಸಿದ್ದರಾಮಯ್ಯ ವಾದದ ಬಗ್ಗೆ ಹೆಚ್ಚಿನ ಆಸಕ್ತಿ ತೋರದೆ, ಎಲ್ಲವನ್ನೂ ಎಐಸಿಸಿ ಅಧ್ಯಕ್ಷರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆನ್ನಲಾಗಿದೆ. ರಾಹುಲ್ ಗಾಂಧಿ ಭೇಟಿಗೆ ಸಿದ್ದರಾಮಯ್ಯ ಅವರು ತನ್ನ ಆಪ್ತ ಶಾಸಕರಾದ ಜಮೀರ್ ಅಹಮದ್, ಬೈರತಿ ಸುರೇಶ್, ರಾಘವೇಂದ್ರ ಹಿಟ್ನಾಳ್ ಅವರನ್ನು ಕರೆದುಕೊಂಡು ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.