Congress Session: ಬೆಳಗಾವಿ ರ‍್ಯಾಲಿ ಯಶಸ್ಸಿಗೆ 56 ಶಾಸಕರಿಗೆ ಜವಾಬ್ದಾರಿ
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಯಶಸ್ಸಿಗಾಗಿ ಜವಾಬ್ದಾರಿ ಹಂಚಿಕೆ, ನಿಯೋಜಿತ ಕ್ಷೇತ್ರಗಳಿಗೆ ಭೇಟಿ ನೀಡಿ ಮನವೊಲಿಸಲು ಸೂಚನೆ
Team Udayavani, Jan 12, 2025, 6:55 AM IST
ಬೆಂಗಳೂರು: ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಬೃಹತ್ ಕಾಂಗ್ರೆಸ್ ಸಮಾವೇಶವನ್ನು ಬೆಳಗಾವಿಯಲ್ಲಿ ಜ. 21ರಂದು ನಡೆಸಲು ಉದ್ದೇಶಿಸಿರುವ ಕಾಂಗ್ರೆಸ್, ಕಿತ್ತೂರು ಕರ್ನಾಟಕ ಭಾಗದ 54 ವಿಧಾನಸಭಾ ಕ್ಷೇತ್ರಗಳಿಗೆ ಶಾಸಕರು, ಸಚಿವರನ್ನು ಉಸ್ತುವಾರಿಗಳಾಗಿ ನಿಯೋಜಿಸಿದೆ.
1924ರಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಎಐಸಿಸಿ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮಾ ಗಾಂಧೀಜಿ ವಹಿಸಿಕೊಂಡು 100 ವರ್ಷಗಳಾದ ಹಿನ್ನೆಲೆಯಲ್ಲಿ ಗಾಂಧಿ ಭಾರತ ಸ್ಮರಣಾರ್ಥ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಜ. 21ರ ಬೆಳಗ್ಗೆ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಲಾಗುತ್ತದೆ. ಅನಂತರ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಪೂರ್ವಸಿದ್ಧತೆಯಾಗಿ ಜ. 13ರಂದು ಬೆಂಗಳೂರಿನಲ್ಲಿ ವಿಸ್ತೃತ ಸರ್ವಸದಸ್ಯರ ಸಭೆ ನಡೆಯಲಿದೆ.
ಉಸ್ತುವಾರಿಗಳಿಂದ ಸಭೆ ಎಲ್ಲ ಜಿಲ್ಲೆಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿ
ಗಳನ್ನು ಸಂಘಟಿಸುವ ಹೊಣೆಗಾರಿಕೆಯನ್ನು ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರು ಮತ್ತು ಸಚಿವರಿಗೆ ನೀಡಲಾಗಿದೆ. ಉಸ್ತುವಾರಿಗಳು ಜ. 15 ಅಥವಾ 16ರಂದು ನಿಯೋಜಿತ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರ ಸಭೆ ನಡೆಸಬೇಕು. ಸಮಾವೇಶದ ಉದ್ದೇಶ ತಿಳಿಸಿ, ಸಮಸ್ತ ಕಾರ್ಯ
ಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಾದ ಆವಶ್ಯಕತೆ ಬಗ್ಗೆ ವಿವರಿಸಬೇಕು ಎಂದು ಜವಾಬ್ದಾರಿ ನೀಡಲಾಗಿದೆ.
ದೇಶಪಾಂಡೆ, ಕುಲಕರ್ಣಿ ಕಾರ್ಯಾಧ್ಯಕ್ಷರು
ಆಯಾ ಕ್ಷೇತ್ರದ ಶಾಸಕರನ್ನೇ ಉಸ್ತುವಾರಿಗಳನ್ನಾಗಿ ನೇಮಿಸಿದ್ದು, ಈ ಪೈಕಿ 46 ಶಾಸಕರಿದ್ದರೆ, 8 ಮಂದಿ ಸಚಿವರು ಕೂಡ ಇದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಟಾಳ್ಕರ್, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಎಚ್.ಕೆ. ಪಾಟೀಲ್, ಸಂತೋಷ್ ಲಾಡ್, ಮಂಕಾಳ ವೈದ್ಯ ಉಸ್ತುವಾರಿಗಳಾಗಿದ್ದು, ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಅವರಿಗೂ ಜವಾಬ್ದಾರಿ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
MUST WATCH
ಹೊಸ ಸೇರ್ಪಡೆ
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Champions Trophy: ನ್ಯೂಜಿಲ್ಯಾಂಡ್ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು
Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು
Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.