Congress session: ಡಿಸೆಂಬರ್‌ನಲ್ಲಿ ಬೆಳಗಾವಿಗೆ ಬರಾಕ್ ಒಬಾಮಾ?
ಡಿಸೆಂಬರ್‌ನಲ್ಲಿ 3 ದಿನಗಳ ಪೈಕಿ ಒಂದು ದಿನ ರಾಷ್ಟ್ರೀಯ ನಾಯಕರು ಬೆಳಗಾವಿಗೆ ಆಗಮನ
Team Udayavani, Oct 3, 2024, 7:40 AM IST
ಬೆಂಗಳೂರು: ಬರುವ ಡಿಸೆಂಬರ್ 24ಕ್ಕೆ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಿಸಲಿದೆ. ಇದನ್ನು ಐತಿಹಾಸಿಕ ದಿನವನ್ನಾಗಿ ಆಚರಿಸಲು ಮುಂದಾಗಿರುವ ಕಾಂಗ್ರೆಸ್, ಅದೇ ದಿನ ಕುಂದಾನಗರಿಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೆಲ್ಲರೂ ಆಗಮಿಸಿ ಕಾಂಗ್ರೆಸ್ ಸಭೆ ನಡೆಸಲಿದ್ದಾರೆ. ಈ ಕ್ಷಣಗಳಿಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರೂ ಸಾಕ್ಷಿಯಾಗಲಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಬುಧವಾರ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ “ಗಾಂಧಿ ಭಾರತ’ ಕಾರ್ಯಕ್ರಮದಲ್ಲಿ ಮಾತ ನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್, 100 ವರ್ಷಗಳ ಹಿಂದೆ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.
1924ರ ಡಿಸೆಂಬರ್ 24, 25 ಮತ್ತು 26ರಂದು ಬೆಳಗಾವಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಬರುವ ಡಿಸೆಂಬರ್‌ನಲ್ಲಿ ಈ 3 ದಿನಗಳ ಪೈಕಿ ಒಂದು ದಿನ ರಾಷ್ಟ್ರೀಯ ನಾಯಕರು ಬೆಳಗಾವಿಗೆ ಆಗಮಿಸಲಿದ್ದಾರೆ. ಅಲ್ಲಿಯೇ ಕೆಪಿಸಿಸಿ ಸಭೆ ನಡೆಯಲಿದ್ದು, ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರೂ ಇದಕ್ಕೆ ಸಾಕ್ಷಿಯಾಗಲಿದ್ದಾರೆ. ರಾಜ್ಯದ ನಾಲ್ಕೂ ಕಂದಾಯ ವಿಭಾಗಗಳಿಂದ ಒಂದೊಂದು ಜ್ಯೋತಿ ಬೆಳಗಾವಿಗೆ ಬರಲಿದೆ. ಇದು ಮತ್ತೂಂದು ಐತಿಹಾಸಿಕ ದಿನವಾಗಲಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.