Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷದ ನಾಯಕರಿಗೆ ತೊಂದರೆ: ಡಿಸಿಎಂ
Team Udayavani, Nov 9, 2024, 12:44 AM IST
ಬೆಂಗಳೂರು: ಸಿದ್ದರಾಮಯ್ಯ ರಾಜ್ಯದ ಪ್ರಮುಖ ಮಾಸ್ ಲೀಡರ್. ಈ ಕಾರಣಕ್ಕೆ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಿದಂತೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಖಂಡಿತ, ಸಿದ್ದರಾಮಯ್ಯ ರಾಜ್ಯದ ಪ್ರಬಲ ಮಾಸ್ ಲೀಡರ್. ಹೀಗಾಗಿ ಅವರನ್ನು ಸೇರಿದಂತೆ ದೇಶದೆಲ್ಲೆಡೆ ಕಾಂಗ್ರೆಸ್ ಹಾಗೂ ವಿಪಕ್ಷಗಳ ನಾಯಕರನ್ನು ಬಿಜೆಪಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.
ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಕೇರಳ ಮುಖ್ಯಮಂತ್ರಿ ಮಾಡಿರುವ ಆರೋಪದ ಬಗ್ಗೆ ಕೇಳಿದಾಗ, ಈ ವಿಚಾರದಲ್ಲಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಈ ಬಾರಿಯ ಉಪಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿಗಳು ಈ ರೀತಿ ಆರೋಪ ಮಾಡುತ್ತಿದ್ದಾರೆ. ಪ್ರಿಯಾಂಕಾ ರಾಷ್ಟ್ರ ಮಟ್ಟದ ನಾಯಕಿ. ಒಂದೊಂದು ಕ್ಷೇತ್ರದಲ್ಲೂ ಮತದಾರರು ಭಿನ್ನವಾಗಿರುತ್ತಾರೆ. ಸಮಾಜದ ಎಲ್ಲ ವರ್ಗದ ಜನರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವುದರ ಮೇಲೆ ಕಾಂಗ್ರೆಸ್ ಪಕ್ಷ ನಂಬಿಕೆಯಿಟ್ಟಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.