ಇನ್ನೂ ತಣ್ಣಗಾಗದ ಮೈತ್ರಿ ಮುನಿಸು
Team Udayavani, Apr 9, 2019, 6:30 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ನಡುವಿನ ಹೊಂದಾಣಿಕೆ ಸಂಬಂಧ ಮೈಸೂರು ಮತ್ತು ಮಂಡ್ಯದಲ್ಲಿ ಉಂಟಾಗಿರುವ ಗೊಂದಲ ಸರಿಪಡಿಸಲು ನಾಯಕರು ಹರಸಾಹಸಪಡುತ್ತಿರುವ ಬೆನ್ನಲ್ಲೇ ತುಮಕೂರು ಮತ್ತು ಹಾಸನದಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ.
ಮಂಡ್ಯ, ಹಾಸನ, ತುಮಕೂರು, ಮೈಸೂರು ಕ್ಷೇತ್ರಗಳಲ್ಲಿ ಹೊಂದಾಣಿಕೆಯ ಗೊಂದಲಗಳಿದ್ದು, ದೇವೇಗೌಡ, ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತು¤ ವಾರಿ ವೇಣುಗೋಪಾಲ್ ಪ್ರಯತ್ನದ ಅನಂತರವೂ ಸರಿಹೋಗುವ ಲಕ್ಷಣಗಳು ಕಾಣಿಸುತ್ತಿಲ್ಲ.
ರಾಜಣ್ಣ ಕಿಡಿ
ತುಮಕೂರು ಕ್ಷೇತ್ರದಲ್ಲಿ ಪಕ್ಷೇತರನಾಗಿ ನಾಮ ಪತ್ರ ಸಲ್ಲಿಸಿ ನಾಯಕರ ಮನವೊಲಿಕೆ ಬಳಿಕ ವಾಪಸ್ ಪಡೆದಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮತ್ತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ನನ್ನ ವಿರೋಧ ಕಟ್ಟಿಕೊಂಡು ಯಾವುದೇ ಪಕ್ಷದ ಯಾರೊಬ್ಬನಿಗೂ ಚುನಾವಣೆ ಗೆಲ್ಲುವ ತಾಕತ್ತು ಇಲ್ಲ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಮಧುಗಿರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಂಸದ ಮುದ್ದಹನುಮೇಗೌಡರ ಬಗ್ಗೆ ಯೋಚಿಸದೆ, ಯಾವ ಸಭೆಗೂ ಆಹ್ವಾನ ನೀಡದೆ ಅವಮಾನ ಮಾಡ ಲಾಗು ತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.
ಡಾ| ಜಿ.ಪರಮೇಶ್ವರ್ ಅವರು ದೇವೇಗೌಡರನ್ನು ಕರೆತಂದು ಮುದ್ದಹನುಮೇಗೌಡರ ರಾಜಕೀಯ ಜೀವನಕ್ಕೆ ಮುಳ್ಳಾಗಿದ್ದಾರೆ. ಆದರೆ ಇದು ರಾಷ್ಟ್ರೀಯ ಕಾಂಗ್ರೆಸ್ ನಿರ್ಧಾರವಾಗಿದ್ದು, ನಾವೆಲ್ಲ ಮೈತ್ರಿ ಅಭ್ಯರ್ಥಿಗೆ ಮತ ನೀಡಲೇಬೇಕಿದೆ. ಹಿಂದೆ ಹೇಳಿದಂತೆ ರಾಜ್ಯದಲ್ಲಿ ಮತ ವರ್ಗಾಯಿಸುವ ಶಕ್ತಿ ದೇವೇಗೌಡ, ಯಡಿಯೂರಪ್ಪ, ಮತ್ತು ಸಿದ್ದರಾಮಯ್ಯ ಅವರಿಗೆ ಮಾತ್ರವಿದ್ದು, ಝೀರೋ ಟ್ರಾಫಿಕ್‌ನಲ್ಲಿ ಹೋದರೆ 10 ಓಟೂ ಬೀಳಲ್ಲ ಎಂದು ಸ್ವಪಕ್ಷದ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್ ಅವರ ಕಾಲೆಳೆದರು.
ನಮಗೇನು ಮಾನ ಮರ್ಯಾದೆ ಇಲ್ವಾ?
ಕೇವಲ ತುಮಕೂರು, ಹಾಸನವಷ್ಟೇ ಅಲ್ಲ, ಮೈಸೂರಿನಲ್ಲೂ ಮೈತ್ರಿ ನಡುವೆ ವೈಮನಸ್ಸು ಮುಂದು ವರಿದಿದೆ. ನಮಗೇನು ಮಾನ ಮರ್ಯಾದೆ ಇಲ್ವಾ, ನಮ್ಮನ್ನು ಯಾರೂ ಸಭೆಗೆ ಕರೆದಿಲ್ಲ. ನಾವು ಏಕೆ ಕಾಂಗ್ರೆಸ್ ಕಚೇರಿ ಹತ್ರ ಬರಬೇಕು ಎಂದು ಜೆಡಿಎಸ್ ಕಾರ್ಯಕರ್ತರು ನೇರವಾಗಿ ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮತ್ತು ಸಚಿವ ಜಿ.ಟಿ.ದೇವೇಗೌಡ ಅವರನ್ನು ಪ್ರಶ್ನಿಸಿದ್ದಾರೆ. ಹುಣಸೂರಿನ ಜಿಟಿಡಿ ನಿವಾಸ ದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಕೆಲವು ಕಾರ್ಯಕರ್ತರು ನಾವು ಹಿಂದೆ ಜಿದ್ದಾಜಿದ್ದಿ ಚುನಾವಣೆ ನಡೆಸಿದ್ದೇವೆ. ಕೇಸ್ ಹಾಕಿಸಿ ಕೊಂಡಿದ್ದೇವೆ, ಅವರೊಂದಿಗೆ ಜಗಳ ಮಾಡ್ಕೊಂಡಿ ದ್ದೇವೆ, ನೀವು ಹೊರಟು ನಿಂತಿದ್ದಿರಾ, ನಾವಲ್ಲಿಗೆ ಬರಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.