![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 28, 2024, 1:14 AM IST
ಬೆಂಗಳೂರು: ಪಕ್ಷದ ನಿಲುವಿಗೆ ವಿರುದ್ಧವಾಗಿ ಬಹಿರಂಗ ಹೇಳಿಕೆಗಳನ್ನು ನೀಡಿದರೆ ಪಕ್ಷ ಅದನ್ನು ಸಹಿಸುವುದಿಲ್ಲ, ಪಕ್ಷದ ಶಿಸ್ತನ್ನು ಪ್ರತಿಯೊಬ್ಬರೂ ಪಾಲಿ ಸ ಬೇಕು, ಪಕ್ಷಕ್ಕಿಂತ ಯಾರೊಬ್ಬರು ದೊಡ್ಡವರಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಹೇಳಿದ್ದಾರೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಅವರು ಸಿಎಂ ರಾಜೀನಾಮೆಗೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಜಿ.ಸಿ. ಚಂದ್ರಶೇಖರ್ ಅವರು ಪತ್ರಿಕಾ ಹೇಳಿಕೆ ಮೂಲಕ ಈ ಬಗೆಯ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಸದಾ ಆಂತರಿಕ ಪ್ರಜಾಪ್ರಭುತ್ವಕ್ಕೆ ಆದ್ಯತೆ ನೀಡಿದೆ. ಯಾರಾದರೂ ಪಕ್ಷದ ನಿಲುವಿಗೆ ಭಿನ್ನವಾದ ಅಭಿಪ್ರಾಯ ವ್ಯಕ್ತಪಡಿಸಬೇಕಾದಲ್ಲಿ, ಪಕ್ಷದ ವೇದಿಕೆಯೊಳಗೆ ಮಾತ್ರ ವ್ಯಕ್ತಪಡಿಸಬೇಕು. ಯಾವುದೇ ವಿಚಾರವಾದರೂ ಇಂತಹ ಹೇಳಿಕೆಗಳನ್ನು ಸ್ವೀಕರಿಸಲು ಎಐಸಿಸಿ ಹಾಗೂ ಕೆಪಿಸಿಸಿಯು ಸೂಕ್ತ ವ್ಯವಸ್ಥೆ ಹೊಂದಿದೆ. ಈ ವ್ಯವಸ್ಥೆಯೊಳಗೆ ಮಾತ್ರ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು.
ಮಾಧ್ಯಮಗಳ ಮುಂದೆ ಪಕ್ಷದ ನಿಲುವಿಗೆ ಭಿನ್ನವಾಗಿ ಹೇಳಿಕೆ ನೀಡಿ ಪಕ್ಷದ ನಾಯಕರ ಬಗ್ಗೆ ಮಾತನಾಡಿ ಮುಜುಗರ ತರುವುದನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದಲ್ಲಿ ಕಟ್ಟುನಿಟ್ಟಾಗಿ ಶಿಸ್ತು ಪಾಲಿಸಬೇಕು. ಇಲ್ಲಿ ಪಕ್ಷಕ್ಕಿಂತ ಯಾರೊಬ್ಬರೂ ದೊಡ್ಡವರಿಲ್ಲ ಎಂದಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.