ನಾಳೆಯಿಂದ ಸಿದ್ದು-ಡಿಕೆಶಿ ಸಾಮ್ರಾಜ್ಯ: 4 ದಿನಗಳ ಜಗ್ಗಾಟದ ಪ್ರಹಸನಕ್ಕೆ ಕೊನೆಗೂ ತೆರೆ


Team Udayavani, May 19, 2023, 8:07 AM IST

ನಾಳೆಯಿಂದ ಸಿದ್ದು-ಡಿಕೆಶಿ ಸಾಮ್ರಾಜ್ಯ: ನಾಲ್ಕು ದಿನಗಳ ಜಗ್ಗಾಟದ “ಪ್ರಹಸನ’ಕ್ಕೆ  ಕೊನೆಗೂ ತೆರೆ

ಬೆಂಗಳೂರು: ಕಾಂಗ್ರೆಸ್‌ ಸರಕಾರದ ಮುಖ್ಯಮಂತ್ರಿ ಸ್ಥಾನಕ್ಕಾಗಿ ದಿಲ್ಲಿಯಲ್ಲಿ ನಡೆದ ನಾಲ್ಕು ದಿನಗಳ ಹಗ್ಗ ಜಗ್ಗಾಟಕ್ಕೆ ಬುಧವಾರ ಮಧ್ಯರಾತ್ರಿ ತೆರೆ ಬಿದ್ದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್‌ ಒಬ್ಬರೇ ಉಪ ಮುಖ್ಯಮಂತ್ರಿ ಎಂದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ನಡುವೆ ಎರಡೂವರೆ ವರ್ಷ ಅಧಿಕಾರ ಹಂಚಿಕೆಯ “ಸೂತ್ರ’ ರೂಪಿಸಿದ್ದು, ಅದಕ್ಕೆ ಇಬ್ಬರೂ ಸಹಮತ ವ್ಯಕ್ತಪಡಿಸಿದ ಅನಂತರವಷ್ಟೇ ಕಗ್ಗಂಟು ಬಗೆಹರಿದಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ -ಡಿ.ಕೆ. ಶಿವಕುಮಾರ್‌ ಜತೆ ಹಲವು ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ನಿಗದಿಯಾಗಿದೆ.

ಗುರುವಾರ ರಾತ್ರಿ ಕೆಪಿಸಿಸಿಯ ಹೊಸ ಕಟ್ಟಡದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಶಾಸಕರು, ಸಂಸದರು, ವಿಧಾನ ಪರಿಷತ್ತಿನ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರ ಹೆಸರನ್ನು ಸೂಚಿಸಿದರು. ಡಾ| ಪರಮೇಶ್ವರ್‌, ಎಚ್‌.ಕೆ. ಪಾಟೀಲ್‌, ಆರ್‌.ವಿ. ದೇಶಪಾಂಡೆ, ಎಂ.ಬಿ. ಪಾಟೀಲ್‌, ಲಕ್ಷ್ಮೀ ಹೆಬ್ಟಾಳ್ಕರ್‌, ತನ್ವೀರ್‌ ಸೇs… ಹಾಗೂ ಕೆ.ಎಚ್‌. ಮುನಿಯಪ್ಪ ಅನುಮೋದಿಸಿದರು. ಇದರೊಂದಿಗೆ ಸಿಎಲ್‌ಪಿ ನಾಯಕನ ಅಧಿಕೃತ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿತು.

ಶಾಸಕಾಂಗ ಪಕ್ಷದ ನಿರ್ಧಾರದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ಒಂದೇ ಕಾರಿನಲ್ಲಿ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚಿಸುವ ಹಕ್ಕು ಮಂಡನೆ ಮಾಡಿದರು.

ಸಿಎಲ್‌ಪಿ ನಿರ್ಧಾರದ ಸಭೆಯ ಪತ್ರವನ್ನು ಅಧಿಕೃತವಾಗಿ ಸಲ್ಲಿಸಿದರು. ಈ ಪತ್ರದ ಆಧಾರದ ಮೇಲೆ ಸಿದ್ದರಾಮಯ್ಯ ಅವರನ್ನು ನಿಯೋಜಿತ ಮುಖ್ಯ ಮಂತ್ರಿಯೆಂದು ರಾಜ್ಯಪಾಲರು ಘೋಷಿಸಿದರು.

ಸೋನಿಯಾ ಮಧ್ಯಪ್ರವೇಶ

ಸಿದ್ದರಾಮಯ್ಯ-ಡಿಕೆಶಿ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಬುಧವಾರ ಮಧ್ಯರಾತ್ರಿ ವೇಳೆಗೆ ಸ್ವತಃ ಸೋನಿಯಾ ಗಾಂಧಿ ಅವರೇ ಮಧ್ಯಪ್ರವೇಶ ಮಾಡಿದರು. “ಪಕ್ಷದ ಬೆಳವಣಿಗೆಯಲ್ಲಿ ನಿಮ್ಮ ಶ್ರಮ ಹೆಚ್ಚಿದೆ. ಆದರೆ ದೇಶದ ರಾಜಕಾರಣ ಹಾಗೂ ಪಕ್ಷದ ಭವಿಷ್ಯದಿಂದ ಸಹಕರಿಸಿ’ ಎಂದು ಡಿಕೆಶಿಯವರಿಗೆ ಸೂಚಿಸಿದರು. ಎರಡೂವರೆ ವರ್ಷದ ಅಧಿಕಾರ ಹಂಚಿಕೆಯ ಒಳ ಒಪ್ಪಂದ ಮತ್ತು “2ನೇ ಅವಧಿಗೆ ಮುಖ್ಯಮಂತ್ರಿ ಸ್ಥಾನ ಕೊಡಿಸುವುದು ನನ್ನ ಜವಾಬ್ದಾರಿ’ ಎಂದು ಖುದ್ದು ಸೋನಿಯಾ ಗಾಂಧಿ ಭರವಸೆ ಕೊಟ್ಟ ಬಳಿಕ ಡಿಕೆಶಿ ತಣ್ಣಗಾದರು ಎನ್ನಲಾಗಿದೆ. ಜತೆಗೆ ಹೈಕಮಾಂಡ್‌ನ‌ ಸಂಧಾನ ಸೂತ್ರಕ್ಕೆ ಒಪ್ಪಿದರು. ಅದೇ ರೀತಿ ಸಿದ್ದರಾಮಯ್ಯ ಜತೆಗೂ ಮಾತನಾಡಿರುವ ಸೋನಿಯಾ ಗಾಂಧಿ, ಅಧಿಕಾರ ಹಂಚಿಕೆ ಸೂತ್ರಕ್ಕೆ ಬದ್ಧರಾಗಿ ನಡೆದುಕೊಳ್ಳಬೇಕೆಂದು ಸೂಚಿಸಿದ್ದು, ಸಿದ್ದರಾಮಯ್ಯ ಸಮ್ಮತಿಸಿದರು ಎನ್ನಲಾಗಿದೆ.

ಇದಾದ ತತ್‌ಕ್ಷಣವೇ ದಿಲ್ಲಿಯಿಂದಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ರಾಜಭವನಕ್ಕೆ ಕಾಂಗ್ರೆಸ್‌ ಸರಕಾರ ರಚನೆ ಬಗ್ಗೆ ಪತ್ರ ರವಾನಿಸಿದರು. ಜತೆಗೆ ಗುರುವಾರ ಬೆಳಗ್ಗೆ ಮಾಜಿ ಉಪ ಮುಖ್ಯಮಂತ್ರಿ ಡಾ| ಪರಮೇಶ್ವರ್‌ ಅವರು ಬೆಂಗಳೂರಿನಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹೊÉàಟ್‌ ಅವರನ್ನು ಭೇಟಿ ಮಾಡಿ ಅಧಿಕೃತ ಮಾಹಿತಿ ತಲುಪಿಸಿದರು.

ನಾಲ್ಕು ದಿನಗಳ ಬಳಿಕ ಮುಖಾಮುಖೀ

ನಾಲ್ಕು ದಿನಗಳಿಂದ ನಿರಂತರವಾಗಿ ನಡೆದ ಸಭೆ, ಸಂಧಾನ, ಚರ್ಚೆಯ ಪ್ರತಿಫ‌ಲ ಎಂಬಂತೆ ಅಂತಿಮವಾಗಿ ಕಾಂಗ್ರೆಸ್‌ ಹೈಕಮಾಂಡ್‌ ರೂಪಿಸಿದ ಸಂಧಾನ ಸೂತ್ರಕ್ಕೆ ಡಿ.ಕೆ. ಶಿವಕುಮಾರ್‌ ಒಪ್ಪಿಗೆ ನೀಡಿದರು. ಬುಧವಾರ ಮಧ್ಯರಾತ್ರಿ 1.30ಕ್ಕೆ ಸಂಧಾನ ಯಶಸ್ವಿಯಾದ ಅನಂತರ ಗುರುವಾರ ಬೆಳಗ್ಗೆ ಕೆ.ಸಿ. ವೇಣುಗೋಪಾಲ್‌ ನಿವಾಸದಲ್ಲಿ ನಡೆದ ಉಪಾಹಾರ ಕೂಟದಲ್ಲಿ ಈ ನಾಲ್ಕು ದಿನಗಳಲ್ಲಿಯೇ ಮೊದಲ ಬಾರಿಗೆ ಸಿದ್ದರಾಮಯ್ಯ-ಡಿಕೆಶಿ ಮುಖಾಮುಖೀಯಾದರು. ಅಲ್ಲಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಅವರ ನಿವಾಸಕ್ಕೆ ಒಂದೇ ಕಾರಿನಲ್ಲಿ ಪ್ರಯಾಣ ಮಾಡಿದರು. ಅಲ್ಲಿ ಖರ್ಗೆ ಅವರು ಸಿದ್ದರಾಮಯ್ಯ-ಶಿವಕುಮಾರ್‌ ಅವರ ಕೈ ಹಿಡಿದೆತ್ತಿ ಒಗ್ಗಟ್ಟು ಪ್ರದರ್ಶನ ಮಾಡಿದರು.

ಅನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಹಾಗೂ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲಾ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿಕೆಶಿ ಉಪಮುಖ್ಯಮಂತ್ರಿ ಎಂದು ಘೋಷಿಸಿದರು. ಈ ಮಧ್ಯೆ ಡಿ.ಕೆ. ಶಿವಕುಮಾರ್‌ ಅವರಿಗೆ ಪ್ರಬಲ ಖಾತೆಗಳಾದ ಜಲಸಂಪನ್ಮೂಲ ಮತ್ತು ಇಂಧನ ಅಥವಾ ಬೆಂಗಳೂರು ನಗರಾಭಿವೃದ್ಧಿ ಖಾತೆ ಖಾತರಿ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ಕೈಗೊಂಡ ತೀರ್ಮಾನಕ್ಕೆ ನಾವೆಲ್ಲ ಬದ್ಧ. ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗಾಗಿ ನಾವು ಕೈಜೋಡಿಸುತ್ತೇವೆ. ಪಾರದರ್ಶಕ, ಭ್ರಷ್ಟಾಚಾರರಹಿತ ಆಡಳಿತ ನೀಡಲು, ಗ್ಯಾರಂಟಿಗಳನ್ನು ಜಾರಿ ಮಾಡಲು ನಾವು ಒಂದು ಕುಟುಂಬದಂತೆ ಕಾರ್ಯನಿರ್ವಹಿಸುತ್ತೇವೆ.

– ಸಿದ್ದರಾಮಯ್ಯ, ನಿಯೋಜಿತ ಮುಖ್ಯಮಂತ್ರಿ

ಗಾಂಧಿ ಕುಟುಂಬದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಹೈಕಮಾಂಡ್‌ ರೂಪಿಸಿದ ಸೂತ್ರಕ್ಕೆ ಒಪ್ಪಿದ್ದೇನೆ. ನನಗೆ ಪಕ್ಷ ಮುಖ್ಯ, ನಾವು ರಾಜ್ಯದ ಜನತೆಗೆ ಕೊಟ್ಟಿರುವ ಭರವಸೆ ಈಡೇರಿಕೆ ಮುಖ್ಯ.

– ಡಿ.ಕೆ. ಶಿವಕುಮಾರ್‌, ನಿಯೋಜಿತ ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.