Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ನಾನು 2ನೇ ಬಾರಿ ಮುಖ್ಯಮಂತ್ರಿ ಆಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ, ಸಂವಿಧಾನ ವಿರೋಧಿಗಳಿಂದ ಮತ್ತೆ ಮನುಸ್ಮೃತಿ ಜಾರಿ ಹುನ್ನಾರ
Team Udayavani, Nov 27, 2024, 7:10 AM IST
ಬೆಂಗಳೂರು: ಜನರ ಆಶೀರ್ವಾದ ಇರುವ ತನಕ ನಾನು ಯಾರಿಗೂ ಜಗ್ಗುವುದಿಲ್ಲ; ಬಗ್ಗುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ಅಂಗೀಕರಣ ದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ನಾನು 2ನೇ ಸಲ ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲು ಕೆಲವರಿಗೆ ಆಗುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದೇ ಈ ಸಂವಿಧಾನ ಬಲದಿಂದ ಎಂದರು.
ಎಷ್ಟೇ ಒಳ್ಳೆ ಸಂವಿಧಾನ ನಮ್ಮದಾಗಿದ್ದರೂ ಅದು ಕೆಟ್ಟವರ ಕೈಗೆ ಹೋದರೆ ಪರಿಣಾಮವೂ ಕೆಟ್ಟದಾಗಿರುತ್ತದೆ ಎನ್ನುವ ಎಚ್ಚರಿಕೆಯನ್ನು ಡಾ| ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ಸಂವಿಧಾನದ ಮೌಲ್ಯಗಳನ್ನು ಪಾಲಿಸುವವರ ಕೈಯಲ್ಲಿ ಈ ಸಂವಿಧಾನ ಇದ್ದಾಗ ಮಾತ್ರ ಸಾರ್ಥಕತೆ ಬರುತ್ತದೆ ಎಂದು ಹೇಳಿದ್ದರು. ಆದ್ದರಿಂದ ಈ ಸಂವಿಧಾನದ ಮೌಲ್ಯಗಳನ್ನು ವಿರೋಧಿಸುವವರ ಕೈಗೆ ಅಧಿಕಾರ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕರೆ ನೀಡಿದರು.
ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ ವಿರೋಧಿಸಿದ್ದರು. ಬಿಜೆಪಿಯ ಮಾತೃಪಕ್ಷ ಆರೆಸ್ಸೆಸ್ ಕೂಡ ನಮ್ಮ ಸಂವಿಧಾನ ಜಾರಿಯನ್ನು ವಿರೋಧಿಸಿತ್ತು ಎಂದು ಹೇಳಿದರು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿದ್ದಾರೆ ಎಂದು ಎಚ್ಚರಿಸಿದರು.
ಅನಂತಕುಮಾರ ಹೆಗಡೆ ಹೇಳಿದ್ದರು
ಮೋದಿ ಮಂತ್ರಿಮಂಡಲದಲ್ಲಿ ಮಂತ್ರಿ ಆಗಿದ್ದ ಅನಂತ ಕುಮಾರ ಹೆಗಡೆ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಸಾರ್ವಜನಿಕವಾಗಿ ಹೇಳಿದ್ದರು. ಆದರೆ ಮೋದಿಯವರಾಗಲಿ, ಬಿಜೆಪಿಯವರಾಗಲಿ ಇದನ್ನು ವಿರೋಧಿಸ ಲಿಲ್ಲ. ಅವರನ್ನು ಮಂತ್ರಿ ಸ್ಥಾನದಿಂದ ಇಳಿಸ ಲಿಲ್ಲ. ಆದ್ದರಿಂದ ಅನಂತ ಕುಮಾರ ಹೆಗಡೆ ಅವರ ಮಾತಿಗೆ ಅವರೆಲ್ಲರ ಸಮ್ಮತಿ ಇತ್ತು ಅಂತಲೇ ಅರ್ಥ. ಇದನ್ನು ದೇಶದ ಜನತೆ ಸರಿ ಯಾಗಿ ಅರ್ಥಮಾಡಿಕೊಳ್ಳಬೇಕು ಎಂದರು. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಎಚ್.ಸಿ. ಮಹದೇವಪ್ಪ ಮಾತನಾಡಿದರು.
ಮಹದೇವಪ್ಪಗೆ ರಜೆ ನೀಡಿ ಉಪನ್ಯಾಸಕ್ಕೆ ಕಳುಹಿಸಬೇಕು
ಸಚಿವ ಎಚ್.ಸಿ. ಮಹದೇವಪ್ಪ ಸಮಾಜ ಕಲ್ಯಾಣ ಇಲಾಖೆಗೆ ಹೊಸ ರೂಪ ನೀಡಿದ್ದಾರೆ. ಅವರಿಗೆ ರಜೆ ನೀಡಿ ನಮ್ಮ ವಿಶ್ವವಿದ್ಯಾನಿಲಯಗಳಿಗೆ ಸಂದರ್ಶಕ ಉಪನ್ಯಾಸಕರನ್ನಾಗಿ ಕಳುಹಿಸಬೇಕು ಎನ್ನುವ ಅಭಿಲಾಷೆ ಅವರ ಮಾತುಗಳನ್ನು ಕೇಳಿದಾಗ ಅನ್ನಿಸಿತು. ಚಿಕ್ಕ ಮಕ್ಕಳಿಗೂ ಅರ್ಥವಾಗುವ ರೀತಿ ಅವರು ಸಂವಿಧಾನದ ಬಗ್ಗೆ ತಿಳಿಸಿಕೊಟ್ಟಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್‌ಐಆರ್ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.