Contracter Case: ಬಿಜೆಪಿಯವರು ಬಟ್ಟೆ ಹರಿದುಕೊಳ್ಳಲಿ, ಐ ಡೋಂಟ್‌ ಕೇರ್‌: ಪ್ರಿಯಾಂಕ್‌

ವಿಜಯೇಂದ್ರ, ಆರ್‌.ಅಶೋಕ್‌ ವಿರುದ್ಧ ಸಚಿವ ವಾಗ್ಧಾಳಿ

Team Udayavani, Dec 30, 2024, 7:10 AM IST

Priyank-Kharghe

ಬೆಂಗಳೂರು: ಬಿಜೆಪಿಯವರು ಏನಾದರೂ ಹೋರಾಟ ಮಾಡಿಕೊಳ್ಳಿ, ಚೀರಾಡಿ, ಬಟ್ಟೆ ಹರಿದುಕೊಳ್ಳಲಿ. ಐ ಡೋಂಟ್‌ ಕೇರ್‌ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ.

ರವಿವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಇಲ್ಲಸಲ್ಲದ್ದನ್ನು ಮಾತನಾಡಿ ಮರ್ಯಾದೆ ಕಳೆದುಕೊಳ್ಳಬಾರದು. ಅವರು ಮಾಡಿರುವ ಯಾವ ಆರೋಪಗಳನ್ನು ತಾನೆ ಸಾಬೀತು ಮಾಡಿದ್ದಾರೆ ಎಂದು ಮರುಪ್ರಶ್ನೆ ಮಾಡಿದರು.

ಅವರು ಎಷ್ಟೇ ಸತ್ಯಶೋಧನಾ ಸಮಿತಿ ಮಾಡಿ, ಬೀದರ್‌ನಿಂದ ಚಾಮರಾಜನಗರವರೆಗೆ ಏನಾದರೂ ಹೋರಾಟ ಮಾಡಿಕೊಳ್ಳಲಿ. ನಾವು ಎಂದಿಗೂ ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ರಾಜಕೀಯ ಮಾಡಿಕೊಂಡು ಬಂದಿದ್ದೇವೆ. 3ನೇ ಬಾರಿ ಮಂತ್ರಿ ಆಗಿದ್ದೇನೆ. ಒಂದು ರೂಪಾಯಿ ಭ್ರಷ್ಟಾಚಾರವನ್ನೂ ನನ್ನ ಅವಧಿಯಲ್ಲಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ನಿಮ್ಮ ಸಿದ್ಧಾಂತ, ಆರ್‌ಎಸ್‌ಎಸ್‌, ಮನುಸ್ಮತಿಯ ಮನೋಭಾವವನ್ನು ವಿರೋಧಿಸುತ್ತೇವೆ ಎಂದು ನಮ್ಮನ್ನು ಗುರಿ ಮಾಡಿಕೊಂಡಿದ್ದೀರಿ. ನೀವು ಎಷ್ಟೇ ಹೆದರಿಸಿದರೂ ನಮ್ಮ ಮನೋಭಾವ ಬದಲಾಗಲ್ಲ. ಐಟಿ, ಇ.ಡಿ., ಸಿಬಿಐ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಯಾರ ಬಳಿಯಾದರೂ ದೂರು ಕೊಡಿ. ರಾಜ್ಯಪಾಲರ ಮೂಲಕ ಕೆಲಸ ಸಾಧಿಸಿಕೊಳ್ಳುತ್ತೀರಾ? ಅದನ್ನೂ ಮಾಡಿ. ಪ್ರಾಮಾಣಿಕವಾಗಿ ಸಾರ್ವಜನಿಕ ವಲಯದಲ್ಲಿದ್ದೇವೆ. ಇರುತ್ತೇವೆ ಎಂದು ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದರು.

ನನಗೆ ನೈತಿಕತೆ ಇರುವುದರಿಂದಲೇ ಮಾಧ್ಯಮಗಳ ಮುಂದೆ ಬಂದಿದ್ದೇನೆ. ಕೇಳಿದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸುತ್ತಿದ್ದೇನೆ. ನಾನು ಎಲ್ಲೋ ಹೋಗಿ ಅಡಗಿ ಕುಳಿತಿಲ್ಲ. ತನಿಖೆ ಆಗಲಿ ಎಂದೇ ನಾನೂ ಹೇಳುತ್ತಿದ್ದೇನೆ. ಪ್ರಿಯಾಂಕ್‌ ಖರ್ಗೆ ಟೆಂಡರ್‌ ಕೊಡಿಸುವುದಾಗಿ ಆತ್ಮಹತ್ಯೆ ಮಾಡಿಕೊಂಡ ಸಚಿನ್‌ ಮರಣಪತ್ರದಲ್ಲಿ ಇದೆಯೇ? ಟೆಂಡರ್‌ಗೆ ನೆರವು ಕೊಡಿಸಿದ್ದಾಗಿ ಆರೋಪಿಗಳೂ ಒಪ್ಪಿಕೊಂಡಿದ್ದಾರೆ, ಆತ್ಮಹತ್ಯೆ ಮಾಡಿಕೊಂಡವರೂ ಈ ವ್ಯವಹಾರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇದರಲ್ಲಿ ನನ್ನ ಪಾತ್ರ ಏನಿದೆ ಎಂದು ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ರಾಜು ಕಪನೂರು ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷನಾಗಿದ್ದ: ಸಚಿವ
ರಾಜು ಕಪನೂರು ಹೆಸರು ಡೆತ್‌ನೋಟ್‌ನಲ್ಲಿದೆ, ಆತ ನನ್ನ ಆಪ್ತ ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರೆ. ಆತ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷನಾಗಿದ್ದ. ಕಾರ್ಪೋರೇಟರ್‌ ಕೂಡ ಆಗಿದ್ದ. ಎಫ್ಎಸ್‌ಎಲ್‌ ವರದಿ ಬರಲಿ, ಸ್ವತಂತ್ರ ತನಿಖೆಯಾಗಲಿ. ಹಾಗೆ ನೋಡಿದರೆ ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ನ್ಯಾ| ಕುನ್ಹಾ ವರದಿಯಲ್ಲಿ ಸ್ಪಷ್ಟವಾಗಿದೆ.

ಮುನಿರತ್ನ ವಿರುದ್ಧ ಚಾರ್ಜ್‌ಶೀಟ್‌ ಆಗಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಇವರದ್ದೆಲ್ಲ ರಾಜೀನಾಮೆ ಕೇಳುವುದು ಬಿಟ್ಟು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿಯ ಯಾವ ನಾಯಕರು ಬೆಟ್ಟಿಂಗ್‌ ದಂಧೆ, ಮರಳು ಮಾಫಿಯಾ, ಅಕ್ಕಿ ಕಳ್ಳತನ ಮಾಡುತ್ತಿದ್ದಾರೆ ಎಂಬ ಇತಿಹಾಸ ತಿಳಿದು ಬನ್ನಿ ಎಂದು ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದರು.

ಟಾಪ್ ನ್ಯೂಸ್

Udupi: ಮುಂದಿನ ತಿಂಗಳು ಬೃಹತ್‌ ಉದ್ಯೋಗ ಮೇಳ: ಡಿ.ಸಿ. ಡಾ| ವಿದ್ಯಾಕುಮಾರಿ

Udupi: ಮುಂದಿನ ತಿಂಗಳು ಬೃಹತ್‌ ಉದ್ಯೋಗ ಮೇಳ: ಡಿ.ಸಿ. ಡಾ| ವಿದ್ಯಾಕುಮಾರಿ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sullia

Sullia: ಅಪಘಾತ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ

Udupi: ಮುಂದಿನ ತಿಂಗಳು ಬೃಹತ್‌ ಉದ್ಯೋಗ ಮೇಳ: ಡಿ.ಸಿ. ಡಾ| ವಿದ್ಯಾಕುಮಾರಿ

Udupi: ಮುಂದಿನ ತಿಂಗಳು ಬೃಹತ್‌ ಉದ್ಯೋಗ ಮೇಳ: ಡಿ.ಸಿ. ಡಾ| ವಿದ್ಯಾಕುಮಾರಿ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.