Contracter Case: ನಿಷ್ಪಕ್ಷ ತನಿಖೆಗೆ ಸಚಿವರು, ಸಿಎಂ ರಾಜೀನಾಮೆ ನೀಡಲಿ: ಗೋವಿಂದ ಕಾರಜೋಳ
Team Udayavani, Dec 30, 2024, 1:48 AM IST
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಕೇಳಿಬಂದಿದೆ. ಅವರಿನ್ನೂ ಯುವಕರಿದ್ದಾರೆ. ರಾಜಕೀಯ ಮಾಡಲು ಬೇಕಾದಷ್ಟು ಕಾಲಾವಧಿ ಇದೆ. ನಿಷ್ಪಕ್ಷಪಾತ ತನಿಖೆಯ ದೃಷ್ಟಿಯಿಂದ ಅವರು ರಾಜೀನಾಮೆ ಕೊಡಬೇಕು. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ರಾಜೀನಾಮೆ ಕೊಟ್ಟರೆ ಸೂಕ್ತ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ರವಿವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಸಂತೋಷ್ ಪಾಟೀಲ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಾಗ ಕಾಂಗ್ರೆಸಿಗರು ವಿನಾಕಾರಣ ಈಶ್ವರಪ್ಪ ಅವರ ಮೇಲೆ ಆರೋಪ ಹೊರಿಸಿ ರಾಜೀನಾಮೆ ಕೇಳಿದ್ದರು. ಪಾರದರ್ಶಕವಾಗಿ ತನಿಖೆ ಆಗಲಿ ಎನ್ನುವ ಕಾರಣಕ್ಕೆ ನಮ್ಮ ಪಕ್ಷವು ಈಶ್ವರಪ್ಪ ಅವರ ರಾಜೀನಾಮೆ ಪಡೆದಿತ್ತು. ಇದನ್ನು ಕಾಂಗ್ರೆಸಿಗರು ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ನೆನಪು ಮಾಡಿಕೊಡುತ್ತೇನೆ ಎಂದರು.
ಬೀದರ್ನ ಸಚಿನ್ ಮನೆಗೆ ನಮ್ಮ ಪಕ್ಷದ ನಾಯಕರು ಭೇಟಿ ಕೊಟ್ಟಿದ್ದಾರೆ. ಪ್ರಕರಣ ಸಂಬಂಧ ಸತ್ಯಶೋಧನ ತಂಡ ಕೂಡ ಭೇಟಿ ಕೊಡಲಿದೆ. ಅದರ ವರದಿಯೂ ಬರಲಿದೆ. ಅದೇನೇ ಆಗಿದ್ದರೂ ನಿಷ್ಪಕ್ಷಪಾತವಾಗಿ ತನಿಖೆಗೆ ಅವಕಾಶ ನೀಡಲು ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವುದು ಒಳ್ಳೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.